Karnataka weather report: ರಾಜ್ಯದಲ್ಲಿ ನಿಲ್ಲದ ವರುಣಾರ್ಭಟ: ತಮಿಳುನಾಡಿಗೆ ಇಂದು ಮ್ಯಾಂಡಸ್‌ ಚಂಡಮಾರುತ ಭೀತಿ

ಬೆಂಗಳೂರು: (Karnataka weather report) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮಳೆಯಾಗಲಿದೆ. ಕರ್ನಾಟಕದಲ್ಲಿ ಡಿಸೆಂಬರ್ 9ರಿಂದ 12ರವರೆಗೆ ಭಾರಿ ಮಳೆಯಾಗಲಿದ್ದು, ಇಂದು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ.

ಡಿಸೆಂಬರ್ 9 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ(Karnataka weather report)ಯಾಗಲಿದ್ದು, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಡಿಸೆಂಬರ್ 17 ರಂದು ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರಿನಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಕವಿದ ವಾತಾವರಣವಿದೆ.

Karnataka weather report: ತಮಿಳುನಾಡಿಗೆ ಇಂದು ಮ್ಯಾಂಡಸ್‌ ಚಂಡಮಾರುತ ಭೀತಿ

ತಮಿಳುನಾಡು, ಪುದುಚೇರಿಗೆ ಡಿಸೆಂಬರ್ 8 ರಂದು ಮ್ಯಾಂಡಸ್ ಚಂಡಮಾರುತ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಅಲರ್ಟ್​ ಘೋಷಣೆ ಮಾಡಲಾಗಿದೆ. ಇಂದು ಸಂಜೆ ವೇಳೆಗೆ ವಾಯುಭಾರ ಕುಸಿತವು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ. ನಾಳೆ ಬೆಳಗಿನ ವೇಳೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : Current shock-boy died: ಪಾರಿವಾಳ ಹಿಡಿಯಲು ಹೋಗಿ ಕರೆಂಟ್‌ ಶಾಕ್:‌ ಮತ್ತೋರ್ವ ಬಾಲಕ ಸಾವು

ಇದನ್ನೂ ಓದಿ : Karnataka weather report: ರಾಜ್ಯದಲ್ಲಿ ಮಳೆ ಮತ್ತೆ ಆರಂಭ: ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆ

ಇದನ್ನೂ ಓದಿ : Bengaluru Crime: ಬೆಂಗಳೂರು : ಯುವಕನ ಕತ್ತು ಸೀಳಿ ಬರ್ಬರ ಹತ್ಯೆ

ಮ್ಯಾಂಡಸ್‌ ಚಂಡಮಾರುತದ ಹಿನ್ನಲೆಯಲ್ಲಿ ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳು, ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗುಡುಗು ಮತ್ತು ಮಿಂಚು ಸಹ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(Karnataka weather report) Many states including Tamil Nadu, Andhra Pradesh, Karnataka will experience rain today in the background of depression in the Bay of Bengal. There will be heavy rain in Karnataka from December 9 to 12, and today it will rain in Bangalore, Bangalore Rural, Bangalore City, Chamarajanagar, Kolar, Mysore, Tumkur.

Comments are closed.