ಶನಿವಾರ, ಜೂನ್ 21, 2025
Homedistrict NewsKarnataka Weather Report : ಜೂನ್‌ 22ರಿಂದ 4 ದಿನ ಬಾರೀ ಮಳೆ : ಈ...

Karnataka Weather Report : ಜೂನ್‌ 22ರಿಂದ 4 ದಿನ ಬಾರೀ ಮಳೆ : ಈ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಬೆಂಗಳೂರು ನಗರದಲ್ಲಿ ಜೂನ್ 21 ರಿಂದ ಮುಂದಿನ ಕೆಲವು ದಿನಗಳವರೆಗೆ ಮೋಡ ಕಲಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಅತ್ಯಧಿಕ ಮಳೆಯಾಗುವ ಜಿಲ್ಲೆಗಳಲ್ಲಿನ ಜನರು ಜಾಗೃತೆ ವಹಿಸುವಂತೆ ಜಿಲ್ಲಾಡಳಿತಗಳು ಸೂಚಿಸಿವೆ.

- Advertisement -

Karnataka Weather Report : ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದಲ್ಲಿ ಮತ್ತೆ ಬಾರೀ ಮಳೆ ಸುರಿಯುವ ಮುನ್ಸೂಚನೆ ನೀಡಿದೆ. ಜೂನ್‌ 22ರಿಂದ ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಈ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್‌ 21ರ ನಂತರ ಮುಂದಿನ ಕೆಲವು ಕಾಲ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ, ಮಳೆಯಾಗುವ ಸಾಧ್ಯತೆಯಿದೆ. ಈ ಕುರಿತು ಜಿಲ್ಲಾಡಳಿತ ಮಾಹಿತಿಯನ್ನು ನೀಡಿದೆ.

ಕಳೆದ ಕೆಲವು ದಿನಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದಲೂ ಮಳೆ ಬಿಡುವು ಪಡೆದುಕೊಂಡಿದೆ. ಇದೀಗ ಮತ್ತೆ ರಾಜ್ಯದಲ್ಲಿ ರಣಮಳೆ ಆರ್ಭಟಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ.

ಇದನ್ನೂ ಓದಿ : ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY)ಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ?

Karnataka Weather Report : ಮಲೆನಾಡಿನ ಜಿಲ್ಲೆಗಳಲ್ಲಿಯೂ ರಣ ಮಳೆ

ಕರಾವಳಿ ಮಾತ್ರವಲ್ಲದೇ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಬಾರಿ ಮಳೆಯಾಗಲಿದೆ. ಅಲ್ಲದೇ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮಂಡ್ಯ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಲಘುದಿಂದ ಸಾಧಾರಣ ಮಳೆಯ ನಿರೀಕ್ಷೆಯಿದೆ.

ಇದನ್ನೂ ಓದಿ : 10,000ಕ್ಕಿಂತ ಕಡಿಮೆ ಬೆಲೆಗೆ ಖರೀದಿಸಿ 5G ಮೊಬೈಲ್‌

ಬೆಂಗಳೂರು ನಗರದಲ್ಲಿ ಜೂನ್ 21 ರಿಂದ ಮುಂದಿನ ಕೆಲವು ದಿನಗಳವರೆಗೆ ಮೋಡ ಕಲಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಅತ್ಯಧಿಕ ಮಳೆಯಾಗುವ ಜಿಲ್ಲೆಗಳಲ್ಲಿನ ಜನರು ಜಾಗೃತೆ ವಹಿಸುವಂತೆ ಜಿಲ್ಲಾಡಳಿತಗಳು ಸೂಚಿಸಿವೆ. ಮೀನುಗಾರರು ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ.

Karnataka Weather Report rain 4 days from June 22: Red alert in these districts Kannada News

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular