Karnataka weather report: ನಾಳೆಯಿಂದ ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ : ಕರಾವಳಿಯಲ್ಲಿ ಇಂದು‌ ಮಳೆ ಸಾಧ್ಯತೆ

ಬೆಂಗಳೂರು: (Karnataka weather report) ಬೆಂಗಳೂರಿನಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆ ಕೊಂಚ ಕಡಿಮೆಯಾಗಿದ್ದು, ನಾಳೆಯಿಂದ (ಡಿ. 5) ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಡಿಸೆಂಬರ್ 5ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿಇನ್ನೊಂದು ಸುತ್ತಿನ ಮಳೆ ಆರಂಭವಾಗಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಡಿ. 5ರಿಂದ ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕದ (Karnataka weather report) ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಇಂದು ಅಂಡಮಾನ್ ದ್ವೀಪದ ದಕ್ಷಿಣ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ನಿರ್ಮಾಣವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಡಿಸೆಂಬರ್ 5 (ನಾಳೆ) ರಂದು ಅದೇ ಪ್ರದೇಶದ ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತ ನಿರ್ಮಾಣವಾಗಲಿದೆ. ಮೈಸೂರಿನಲ್ಲಿ ಡಿ. 14ರವರೆಗೆ ಮೋಡ ಕವಿದ ವಾತಾವರಣವಿರಲಿದ್ದು, ಮಳೆ ಹೆಚ್ಚಾಗಲಿದೆ. ಡಿಸೆಂಬರ್ 8ರ ಸುಮಾರಿಗೆ ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕರಾವಳಿಗೆ ಮಳೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಧಾರಾಕಾರ ಮಳೆಯಾಗಲಿದೆ. ಇಂದು ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದ್ದು, ಡಿಸೆಂಬರ್ 8ರ ವೇಳೆಗೆ ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Karnataka weather report: ಇಂದು ಯಾವ ರಾಜ್ಯಗಳಲ್ಲಿ ಮಳೆಯಾಗಲಿದೆ?

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸದೆ. ಕೇರಳ – ಮಾಹೆಯಲ್ಲಿ ಮಿಂಚು ಸಹಿತ ಮಳೆಯಾಗಲಿದ್ದು, ಇಂದು ಬೆಳಿಗ್ಗೆ ಉತ್ತರ ಭಾರತದಲ್ಲಿ ಅದರಲ್ಲೂ ವಿಶೇಷವಾಗಿ ಹಿಮಾಚಲ ಪ್ರದೇಶದ ಮೇಲೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ.

ಇದನ್ನೂ ಓದಿ : Coastal weather: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಿಂಚು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇದನ್ನೂ ಓದಿ : CM Bommai announcement: ವಿಕಲಚೇತನ ಮಕ್ಕಳಿಗೆ ವಿಶೇಷ ಯೋಜನೆ : ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಇದನ್ನೂ ಓದಿ : Murder mystery: ಸೊಸೆಯ ಮೇಲೆ ಕಣ್ಣು ಹಾಕಿದ್ದ ಮಾವ ಹೆಣವಾದ; ಸುಪಾರಿ ಕೊಟ್ಟು ಬೀಗರಿಂದಲೇ ಮರ್ಡರ್..!

(Karnataka weather report) In Bengaluru, the rain has reduced a little for three to four days and it is expected to increase again from tomorrow (December 5). Another round of rain will begin in most districts of Karnataka from December 5. Coastal and southern hinterlands of Karnataka are likely to receive heavy rains today.

Comments are closed.