Karnataka weather Report : ಮೇ 7 ರ‌‌ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಮಂಗಳೂರು : ಕಳೆದ ಏಪ್ರಿಲ್‌ ತಿಂಗಳಿಂದ ಸೂರ್ಯನ ತಾಪಮಾನಕ್ಕೆ ರಾಜ್ಯದ ಜನತೆ ಸೆಕೆಯಲ್ಲಿ ಬೆಂದು ಬೆಂಡಾಗಿದ್ದು, ಮಳೆರಾಯನ ಆಗಮನದಿಂದ (Karnataka Weather Report) ಸಂತಸಗೊಂಡಿದ್ದಾರೆ. ವಾತಾವಾರಣದಲ್ಲಿ ಗಾಳಿ ದಿಕ್ಕಿನ ಬದಲಾವಣೆಯಿಂದಾಗಿ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನ ಭಾರೀ (Karnataka weather Report – Yellow alert) ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಕಳೆದ ಎರಡು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇನ್ನು ಮುಂದಿನ 24 ಗಂಟೆಗಳಲ್ಲಿ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ಎಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಹಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ರಾಜ್ಯಾದ್ಯಂತ ಮಳೆಯ ಆರ್ಭಟ ಶುರುವಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರು, ಕೊಡಗು, ಬೆಂಗಳೂರು, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯ ಕೆಲವು ಭಾಗಗಳಲ್ಲಿ ಇಂದು ತಾಪಮಾನ ಸ್ವಲ್ಪ ಹೆಚ್ಚಾಗಬಹುದು ಎಂದು ಕೂಡ ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : ಕಡಲ ನಗರಕ್ಕೆ ಇಂದು ಪ್ರಧಾನಿ ಮೋದಿ ಆಗಮನ : ಮೂಲ್ಕಿಯಲ್ಲಿ ಬೃಹತ್‌ ರಾಲಿ, 2.5 ಲಕ್ಷ ಜನ ಭಾಗಿ ಸಾಧ್ಯತೆ

ಇದನ್ನೂ ಓದಿ : Bajrang Dal : ಕೈಗೆ ಮುಳುವಾಯ್ತಾ ಭಜರಂಗದಳ ನಿಷೇಧದ ಘೋಷಣೆ ?

ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಹೇಳಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಹೆಚ್ಚಿನ ಮಳೆ ನಿರೀಕ್ಷೆ ಮಾಡಲಾಗಿದೆ. ಕಳೆದ ಎರಡು ದಿನಗಳಿಂದ ರಾಜಧಾನಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಮಂಗಳವಾರ ರಾತ್ರಿ ಕೂಡ ಹಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇಡೀ ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇದನ್ನೂ ಓದಿ : Basangouda Patil Yatnal‌ : ವಾಜಪೇಯಿ ಕಾಲದಲ್ಲೇ ಮಿನಿಸ್ಟರ್ ನಾನು: ಈಗ್ಯಾಕೆ ಸಿಎಂ ಆಗಬಾರದು ? ಯತ್ನಾಳ್ ಹೊಸಬಾಂಬ್

Karnataka weather Report – Yellow alert : Rain in coastal districts till May 7 : Yellow alert declared

Comments are closed.