ಬೆಂಗಳೂರು : (Karnataka Weather Report) ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಿಂದಲೂ ಭಾರೀ ಮಳೆ ಸುರಿಯುತ್ತಿದೆ. ಅದ್ರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಸುರಿದ ಮಳೆಯಿಂದಾಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವಲ್ಲೇ ಹವಾಮಾನ ಇಲಾಖೆ ರಾಜ್ಯದ ಜನರಿಗೆ ಶಾಕ್ ಕೊಟ್ಟಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಬಾರೀ ಮಳೆ ಸುರಿಯುವ ಕುರಿತು ಮುನ್ಸೂಚನೆಯನ್ನು ನೀಡಿದೆ. ಅದ್ರಲ್ಲೂ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10 ರವರೆಗೆ ಭಾರೀ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲೂ ಮಳೆಯಾಗಲಿದ್ದು, ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗಲಿದೆ.
ಹವಾಮಾನದಲ್ಲಿನ ದಿಢೀರ್ ಬದಲಾವಣೆಯಿಂದಾಗಿ ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಕೊಡಗು ಭಾಗದಲ್ಲಿ ಭಾರಿ ಮಳೆ ಅಬ್ಬರಿಸುವ ಮುನ್ಸೂಚನೆ ಯಿದ್ದು, ಬಿರುಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರಾವಳಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮೈಸೂರು, ಕೊಡಗು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಇದನ್ನೂ ಓದಿ : ತುಪ್ಪ ಬೇಕು ತುಪ್ಪಾ; ರಾಜ್ಯದಲ್ಲಿ ಕೆಎಂಎಫ್ ಇದ್ರೂ ತುಪ್ಪಕ್ಕೆ ಬರ, ಹೊಟೇಲ್ – ಬೇಕರಿ ಮಾಲೀಕರ ಪರದಾಟ
ಇದನ್ನೂ ಓದಿ : India Covid Report : ಒಂದೇ ದಿನದಲ್ಲಿ 5,300ಕ್ಕೂ ಅಧಿಕ ಕೋವಿಡ್ ಪ್ರಕರಣ ದಾಖಲು , ಭಾರತದಲ್ಲಿ ಕೊರೊನಾರ್ಭಟ
Karnataka Weather Report : Rain in next 4 days in Karnataka Meteorological department forecast