Karnataka Weather Report : ಕರ್ನಾಟಕದಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಬೆಂಗಳೂರು : ಕರಾವಳಿ ಭಾಗದಲ್ಲಿ ಕಳೆದ ರಾತ್ರಿ ವ್ಯಾಪಕವಾಗಿ (Karnataka Weather Report) ತುಂತುರು ಮಳೆ ಆಗಿದೆ. ಇನ್ನುಳಿದಂತೆ ಕೆಲವು ಭಾಗಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆ ಆಗಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಕೂಡ ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗೆಯೇ ರಾಜ್ಯದಾದ್ಯಂತ ಹಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಕೂಡ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಡುಪಿ, ಮಂಗಳೂರು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕೆಲವೆಡೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಪ್ರಾರಂಭವಾಗಿದ್ದು, ರೈತರು ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ಮಳೆ ಅವಶ್ಯಕತೆ ಇರುವಲ್ಲಿ ಬರದೇ ಬೇರೆ ಕಡೆ ಸುರಿಯುವುದ್ದರಿಂದ ಜನರು ಆತಂಕಗೊಂಡಿದ್ದಾರೆ. ಹೀಗಾಗಿ ಕೃಷಿ ಚುಟುವಟಿಕೆ ಆರಂಭಿಸಲು ಸರಿಯಾದ ರೀತಿಯಲ್ಲಿ ಮಳೆರಾಯನ ಆಗಮನವಿಲ್ಲದೇ ಆತಂಕಗೊಂಡಿದ್ದಾರೆ.

ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡುಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ. ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಬಿಸಿಲಿನಿಂದ ಕೂಡಿದ ವಾತಾವರಣ ಇರಲಿದೆ.

ಇದನ್ನೂ ಓದಿ : Dk Shivakumar vs Siddaramaiah : ಸಿಎಂ ಮಾತ್ರವಲ್ಲ ಸಚಿವ ಸ್ಥಾನಕ್ಕೂ ಪಟ್ಟು: ಸಂಪುಟದಲ್ಲಿ ಸಿದ್ಧು ಆಪ್ತ ರಿಗೆ ಮಣೆ, ಡಿಕೆಶಿಗೆ ಹಿನ್ನಡೆ

ಇದನ್ನೂ ಓದಿ : Karnataka Cabinet : ನಾಳೆ 24 ಸಚಿವರ ಪ್ರಮಾಣ ವಚನ, ಇಲ್ಲಿದೆ ನೂತನ ಸಚಿವರ ಪಟ್ಟಿ

ಆದರೆ ಕರಾವಳಿ ಭಾಗಕ್ಕೆ ವಾಡಿಕೆಯಂತೆ ಕೇರಳದಲ್ಲಿ ಮುಂಗಾರು ಮಳೆಯಾದ ನಂತರ ಮಳೆಯಾಗಲಿದೆ. ಅಂದರೆ ಜೂನ್‌ ತಿಂಗಳ ಎರಡನೇ ವಾರದಲ್ಲಿ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈಗಾಗಲೇ ಕರಾವಳಿ ಭಾಗದ ಹೆಚ್ಚಿನ ರೈತರು ಮುಂದಿನ ಭತ್ತದ ಬೆಳೆಗಾಗಿ ಬಿತ್ತನೆ ಕೆಲಸದ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದ್ದು, ವರುಣನ ಆಗಮನಕ್ಕಾಗಿ ಮುಗಿಲು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ಮಾನ್ಸೂನ್‌ ಮಾರುತಗಳ ಆಗಮನ ಒಂದಾರೆ ಮುಂದಿನ ವರ್ಷ ಉತ್ತಮ ಫಸಲು ಪಡೆಯಬಹುದಾಗಿದೆ.

Karnataka Weather Report : Rain likely in next 4 days in Karnataka

Comments are closed.