ಬೆಂಗಳೂರು : (Karnataka Weather Report) ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ದಿನಗಳಿಂದ ರಾಜ್ಯದ ಉತ್ತರ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಕರಾವಳಿಯ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಕೊಂಚ ಮಳೆಯಾಗಿದೆ. ಇನ್ನೂ ಉಡುಪಿ ದಕ್ಷಿಣ ಕನ್ನಡ ಭಾಗದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ಅತೀ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಬಿರು ಬಿಸಿಲಿನ ವಾತಾವರಣ ಕಾಣಿಸಿಕೊಂಡಿದೆ.ಇದೀಗ ಮುಂದಿನ 48 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಚಿಕ್ಕೋಡಿ, ರಾಯಭಾಗ, ಬೈಲಹೊಂಗಲ, ಕಲಘಟಗಿ, ಹಳಿಯಾಳ, ರಾಯಭಾಗ, ಬೈಲಹೊಂಗಲ, ಬೀದರ್, ಭಾಲ್ಕಿ, ನಿಪ್ಪಾಣಿ, ಸದಗಲ, ಇಂಡಿ, ಮಹಾಲಿಂಗಪುರದಲ್ಲಿ ಕಳೆದ ೨೪ ಗಂಡೆಯಲ್ಲಿ ಸಾಧಾರಣ ಮಳೆಯಾಗಿದೆ. ಇಂದು ಕೂಡ ಮಳೆ ಮುಂದುವರೆಯಲಿದ್ದು, ಮುಂದಿನ 48 ಗಂಟೆಗಳ ಕಾಲ ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಇದನ್ನೂ ಓದಿ : SSLC Exam 2023 : ಕರ್ನಾಟಕ SSLC ಪರೀಕ್ಷೆ 2023 : ಏಪ್ರಿಲ್ 21 ರಿಂದ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭ
ಇದನ್ನೂ ಓದಿ : Jagadish Shettar Resigns : ಬಿಜೆಪಿಗೆ ಗುಡ್‌ಬೈ ಹೇಳಿದ ಜಗದೀಶ್ ಶೆಟ್ಟರ್; ಬಿಜೆಪಿ ಪಕ್ಷ, ಶಾಸಕ ಸ್ಥಾನಕ್ಕೆ ರಾಜೀನಾಮೆ
ಇನ್ನೂ ಉಷ್ಣಾಂಶವನ್ನು ನೋಡುವುದಾದರೆ, ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನೂ ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ಅತಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದೆ.
Karnataka Weather Report : Rain with storm is likely over the coast in the next 48 hours