Karnataka weather report: ರಾಜ್ಯದಲ್ಲಿ ಮಳೆ ಮತ್ತೆ ಆರಂಭ: ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು: (Karnataka weather report) ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 8 ರವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಯ ಕೆಲವೆಡೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದದು, ಡಿಸೆಂಬರ್ 8 ರಿಂದ 10 ರವರೆಗೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ (Karnataka weather report) ಡಿಸೆಂಬರ್ 8 ರವರೆಗೆ ಚಳಿಯ ಜೊತೆಗೆ ಸಾಧಾರಣ ಮಳೆಯಾಗಲಿದ್ದು, ಬೆಳಗಿನ ಜಾವ ದಟ್ಟ ಮಂಜು ಇರಲಿದೆ. ಡಿಸೆಂಬರ್ 7 ರಿಂದ 10 ರವರೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರ ಮಳೆ ಸುರಿಯುವ ಸಾಧ್ಯತೆಯಿದ್ದು, ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳಲಿದೆ.

ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬೀಳಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಜೋರು ಮಳೆಯಾಗಲಿದ್ದು, ನಿಗದಿತ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ ಎಂದು ತಿಳಿಸಿದೆ.

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ 9ರಿಂದ 11ರವರೆಗೆ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 9 ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಡಿಸೆಂಬರ್ 10ರಂದು ದಕ್ಷಿಣ ಕನ್ನಡ ,ಉಡುಪಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ : Bangalore Air Pollution: ಬೆಚ್ಚಿಬೀಳಿಸುವ ಮಾಹಿತಿ: ಬೆಂಗಳೂರಿನಲ್ಲಿ ಒಂದೇ ವರ್ಷದಲ್ಲಿ ವಾಯುಮಾಲಿನ್ಯ ಶೇ.40ರಷ್ಟು ಏರಿಕೆ

ಇದನ್ನೂ ಓದಿ : MP Tejaswi Surya: ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದ ಸಂಸದ ತೇಜಸ್ವಿ ಸೂರ್ಯ: ಹಿಂದೂಗಳ ಆಕ್ರೋಶ

ಇದನ್ನೂ ಓದಿ : Karnataka Weather report: ಇಂದಿನಿಂದ ಡಿ.9 ರವರೆಗೆ ಕರಾವಳಿ, ಮಲೆನಾಡಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಇನ್ನು ಡಿಸೆಂಬರ್ 11 ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ.

(Karnataka weather report) State Meteorological Department has said that the air pressure has decreased in the Bay of Bengal and there is a possibility of rain again in the whole state including Bengaluru. Heavy rain is likely at some places in the southern interior district till December 8 and widespread rain with thundershowers is likely from December 8 to 10, the Meteorological Department said.

Comments are closed.