Heavy Rain: 13 ಜಿಲ್ಲೆಗಳಲ್ಲಿ ಭಾರೀ ಮಳೆ , ಯೆಲ್ಲೋ ಅಲರ್ಟ್‌

ಬೆಂಗಳೂರು : ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನೂ ಎರಡು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ. ಇಂದು ಕರ್ನಾಟಕದ 13 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ (heavy Rain) ಸುರಿಯುವ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ (yellow Alert) ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಅಲ್ಲದೇ ಮೈಸೂರು, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಕರಾವಳಿ ಭಾಗದಲ್ಲಿ ಈಗಾಗಲೇ ಹಲವು ದಿನಗಳಿಂದಲೂ ಮಳೆ ಸುರಿಯುತ್ತಿದ್ದು ಇಂದೂ ಕೂಡ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ. ಮಾತ್ರವಲ್ಲ ಬೆಂಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಿ ಇರಲಿದೆ.

ಇನ್ನು ಮಲೆನಾಡಿನ ಭಾಗಗಳಲ್ಲಿ ಮಳೆ ಆರ್ಭಟಿಸುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಒಳನಾಡಿನ ಹಾವೇರಿ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ. ಇನ್ನು ತಮಿಳುನಾಡಿನಲ್ಲಿ ಕಳೆದ ಮೂರು ದಿನಗಳಿಂದಲೂ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಶುಕ್ರವಾರದ ವರೆಗೆ ಕೇರಳ, ತಮಿಳುನಾಡು ಹಾಗೂ ಆಂಧ್ರ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ತಮಿಳುನಾಡಿನಲ್ಲಿ (Chennai) ಮಳೆಯ ಆರ್ಭಟ ಮುಂದುವರಿದಿದೆ. ನೀಲಗಿರಿ, ಕೊಯಮತ್ತೂರು, ದಿಂಡಿಗಲ್‌, ಥೇನಿ ಜಿಲ್ಲೆಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ಮಳೆ ಸುರಿದಿದೆ. ಮಳೆಯಲ್ಲಿ ಸಿಲುಕಿದ್ದ 1400 ನಿರಾಶ್ರಿತರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗಿದೆ. ಎನ್‌ಡಿಆರ್‌ಎಫ್‌ ತಂಡಗಳು ಈಗಾಗಲೇ ಕಾರ್ಯಾಚರಣೆಯನ್ನು ಮಾಡುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : Vinod Raj‌ : ಪುನೀತ್‌ ರಾಜ್‌ ಕುಮಾರ್‌ ತಿಥಿ ಕಾರ್ಯ ನೆರವೇರಿಸಿದ ವಿನೋದ್‌ ರಾಜ್‌

ಇದನ್ನೂ ಓದಿ : ಕರ್ನಾಟಕದಲ್ಲಿ ಬದಲಾಗುತ್ತಾ ಬಿಜೆಪಿ ನಾಯಕತ್ವ: ಉಸ್ತುವಾರಿ ಅರುಣ್ ಸಿಂಗ್ ಏನಂದ್ರು ಗೊತ್ತಾ?

(Karnataka weather Today heavy Rain fall predicted, 13 district declarer yellow alert IMD)

Comments are closed.