Karnataka Weather Report : ಬೆಂಗಳೂರು, ಕರಾವಳಿ ಸೇರಿ ರಾಜ್ಯದಲ್ಲಿ ಇನ್ನೂ5 ದಿನ ಭಾರಿ ಮಳೆ : ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದಲೂ ಸುರಿಯುತ್ತಿರುವ ಭಾರಿ ಮಳೆ ಸದ್ಯಕ್ಕೆ ಬಿಡುವು ಪಡೆಯುವ ಲಕ್ಷಣ ಗೋಚರಿಸುತ್ತಿಲ್ಲ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಅದ್ರಲ್ಲೂ ಇಂದು ಭಾರಿ ಮಳೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಅಕ್ಟೋಬರ್‌ ಆರಂಭದಿಂದಲೇ ಚಂಡಮಾರುತದ ಜೊತೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚಾಗಿತ್ತು. ಅದ್ರಲ್ಲೂ ಬೆಂಗಳೂರು, ಮಲೆನಾಡು, ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದ ಜಿಲ್ಲೆಗಳಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿತ್ತು. ಭಾರಿ ಮಳೆಯಿಂದಾಗಿ ಬಹುತೇಕ ಜಿಲ್ಲೆಗಳಲ್ಲಿ ನೆರೆ, ಪ್ರವಾಹದಿಂದಾಗಿ ಬೆಳೆದ ಬೆಳೆಯಲ್ಲಾ ನೆಲ ಕಚ್ಚಿತ್ತು. ಇದೀಗ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯುವ ಸೂಚನೆಯ ಬೆನ್ನಲ್ಲೇ ಅನ್ನದಾತರು ಆತಂಕಕ್ಕೆ ಒಳಗಾಗಿದ್ದಾರೆ.

ರಾಜ್ಯದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಯೆಲ್ಲಾ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರಿಗರೇ ಎಚ್ಚರ, ಅಬ್ಬರಿಸಲಿದೆ ಭಾರಿ ಮಳೆ
ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈಗಾಗಲೇ ಮಳೆಯಿಂದಾಗಿ ಬೆಂಗಳೂರಿನ ಹಲವು ಕಡೆಗಳಲ್ಲಿ ಕಟ್ಟಡ ಕುಸಿತ ಉಂಟಾಗಿತ್ತು. ಇದೀಗ ಬೆಂಗಳೂರಲ್ಲಿ ಮತ್ತೆ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.

ಕರಾವಳಿ ಭಾಗದಲ್ಲಿ ಅಧಿಕ ಮಳೆ
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರವಾಗಿರುವಂತೆ ಸೂಚನೆಯನ್ನು ನೀಡಲಾಗಿದೆ.

ಇದನ್ನೂ ಓದಿ : ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್‌ : ಕಡಲಾಳದ ಯಾನ ಹೇಗಿರುತ್ತೆ ಗೊತ್ತಾ ?

ಇದನ್ನೂ ಓದಿ : ನಮ್ಮ ಮೆಟ್ರೋಗೆ ದಶಕದ ಸಂಭ್ರಮ : 60 ಕೋಟಿ ಜನರ ಪ್ರಯಾಣ, 1286.6 ಕೋಟಿ ರೂ. ಆದಾಯ

( Yellow Alert announces five days of heavy rains in Bangalore and Coastal Districts )

Comments are closed.