Karnataka Weather today: ಭೀಕರ ಚಳಿಯ ನಡುವಲ್ಲೇ ಕರ್ನಾಟಕದಲ್ಲಿ 3 ದಿನ ಬಾರೀ ಮಳೆ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: (Karnataka Weather today) ಕಳೆದ ಕೆಲವು ದಿನಗಳಿಂದಲೂ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಆರ್ಭಟ ಹೆಚ್ಚುತ್ತಿದೆ. ಅದ್ರಲ್ಲೂ ದಾಖಲೆಯ ಚಳಿಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವಲ್ಲೇ ರಾಜ್ಯದಲ್ಲಿ ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಮತ್ತೆ ಮಳೆ (Karnataka Weather today) ಯಾಗುವ ಸಾಧ್ಯತೆಯಿದ್ದು, ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಇಂದಿನಿಂದ ಮೂರು (ನವೆಂಬರ್‌ 24ರವರೆಗೆ) ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಮೈಸೂರು, ಹಾಸನ, ಹಾವೇರಿ ಸೇರಿದಂತೆ ಇನ್ನೂ ಹಲವು ಕಡೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾದ್ಯೆತೆಯಿದೆ. ಈಗಾಗಲೇ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಇದರ ಮಧ್ಯೆ ಮಳೆಯಾಗುವ ಸಾಧ್ಯತೆ ಕೂಡ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಬೆಂಗಳೂರಿನಲ್ಲಿ ಚಳಿಯ ವಾತಾವರಣವಿದ್ದು, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮಂಜು ಸುರಿಯುತ್ತಿದೆ. ಬೆಳಗ್ಗಿನ ಹೊತ್ತಿನಲ್ಲಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯ ಹೊತ್ತಿಗೆ ಮಳೆ ಸುರಿಯುವ ಸಾಧ್ಯತೆಗಳು ಹೆಚ್ಚಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ : Voter Id Golmal : ಚಿಲುಮೆ ಸಂಸ್ಥೆಯ ಐವರು ಅರೆಸ್ಟ್ : ಸಮನ್ವಯ ಟ್ರಸ್ಟ್‌ ಗೆ ನೋಟಿಸ್‌ ಜಾರಿ

ಇದನ್ನೂ ಓದಿ : Kadalekayi parishe: ಬೆಂಗಳೂರಲ್ಲಿ ಇಂದಿನಿಂದ ಕಡಲೆಕಾಯಿ ಪರಿಷೆ : ಏನಿದರ ಹಿನ್ನೆಲೆ

ಆಂಧ್ರಪ್ರದೇಶ ಹಾಗೂ ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ತಮಿಳುನಾಡು, ಕೇರಳ, ಒಡಿಶಾ ಹಾಗೂ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ

(Karnataka Weather) Cold weather has been increasing in many districts of the state including Silicon City Bangalore since last few days. Even there people have been left reeling due to the record cold. Meanwhile, the Meteorological Department has forecast that the state will receive rain for the next three days from tomorrow.

Comments are closed.