ಬುಧವಾರ, ಏಪ್ರಿಲ್ 30, 2025
Homekarnatakaಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

ಮುಖ್ಯಮಂತ್ರಿ ಆಪ್ತ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರರ ನೇಮಕ

- Advertisement -

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ರಚನೆಯಾಗಿದ್ದು, (CM Siddaramaiah) ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Dr. Venkateshaiah – KV Prabhakar) ಅವರಿಗೆ ಆಪ್ತ ಕಾರ್ಯದರ್ಶಿಯಾಗಿ ಕೆ.ಎ.ಎಸ್‌ ಅಧಿಕಾರಿ ಡಾ. ವೆಂಕಟೇಶಯ್ಯ (KAS Officer Dr. Venkateshaiah) ನೇಮಕ ಮಾಡಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ್‌ ಅವರನ್ನು ನೇಮಿಸಲಾಗಿದೆ.

ಹಾಗೆಯೇ ತಕ್ಷಣದಿಂದಲೇ ಜಾರಿಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿಯವರ ವಿಶೇಷಾಧಿಕಾರಿಯಾಗಿ ವೆಂಕಟೇಶ್‌ ಇವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ ಎಂದು ಸಿಎಸ್‌ಇ ಸರಕಾರದ ಅಧಿನ ಕಾರ್ಯದರ್ಶಿ ಕೆ.ವಿ. ಅಶೋಕ್‌ ಅಧಿಸೂಚನೆ ಹೊರಡಿಸಿದ್ದಾರೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರನ್ನಾಗಿ ಹಿರಿಯ ಪತ್ರಕರ್ತ ಕೆ ವಿ ಪ್ರಭಾಕರ್‌ (Senior journalist KV Prabhakar) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧಿನ ಕಾರ್ಯದರ್ಶಿ ಟಿವಿ ಸುನಂದಮ್ಮ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕೆ.ವಿ.ಪ್ರಭಾಕರ್‌ ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಸಂಪುಟ ದರ್ಜೆ ಸಚಿವರಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಅಧಿಕೃತ ಆದೇಶದಲ್ಲಿ ಹೊರಡಿಸಲಾಗಿದೆ.

ಇಂದು ನೂತನ ಕಾಂಗ್ರೆಸ್‌ ಸರಕಾರದ ಮೊದಲ ವಿಧಾನಸಭಾ ಅಧಿವೇಶನ ನಡೆದಿದ್ದು, ಇದರಲ್ಲಿ ಹಂಗಾಮಿ ಸಭಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್‌ನ ಹಿರಿಯ ಶಾಸಕ ಆರ್‌.ವಿ. ದೇಶಪಾಂಡೆ ಅವರು ನೂತನ ಶಾಸಕರಿಗೆ ಪ್ರಮಾಣವಚನ ಭೋದಿಸಿದ್ದಾರೆ. ಯಮಕನಮರಡಿ ಶಾಸಕರಾಗಿ ಸತೀಶ್‌ ಜಾರಕಿಹೋಳಿ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ವಿಶೇಷವಾಗಿತ್ತು. ಇನ್ನು ವಿಜಯಪುರ ನಗರ ಕ್ಷೇತ್ರದ ಶಾಸಕರಾಗಿ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಹಿಂದುತ್ವ ಮತ್ತು ಗೋ ಮಾತೆ ಹೆಸರಿನಲ್ಲಿ ಪ್ರಮಾ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ : ನನಗೆ ಝೀರೋ ಟ್ರಾಫಿಕ್ ಸೌಲಭ್ಯ ಬೇಡ ಎಂದ ಸಿಎಂ ಸಿದ್ದರಾಮಯ್ಯ

ಇದನ್ನೂ ಓದಿ : ರಾಜೀವ್‌ ಗಾಂಧಿ ಪುಣ್ಯಸ್ಮರಣೆ : ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದ ಗೌರವ ನಮನ

ಇದಕ್ಕೂ ಮೊದಲು ವರುಣಾ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಸಿದ್ದರಾಮಯ್ಯ ಅವರು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರೆ, ಕನಕಪುರ ಕ್ಷೇತ್ರದ ಶಾಸಕರಾದ ಡಿ.ಕೆ. ಶಿವಕುಮಾರ್‌ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Dr. Venkateshaiah – KV Prabhakar : KAS officer Dr Venkateshiah appointed as Private Secretary to Chief Minister, Senior Journalist KV Prabhakar as Media Adviser

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular