ವಿಧಾನಸೌಧ ಎದುರು ಕೆಂಪೇಗೌಡ, ಬಸವಣ್ಣ ಪ್ರತಿಮೆ ಇಂದು ಅನಾವರಣ

ಬೆಂಗಳೂರು : (Kempegowda Basavanna statue unveiled) ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಇಂದು ಸಂಜೆ 6:30 ಕ್ಕೆ ನಡೆಯಲಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಪ್ರತಿಮೆಗಳ ಅನಾವರಣ ಮಾಡಲಿದ್ದಾರೆ.

ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಹರಲಾಲ್‌ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ. ಆರ್‌ ಅಂಬೇಡ್ಕರ್‌ ಪುತ್ಥಳಿ ಮಧ್ಯ ಭಾಗದಲ್ಲಿ ಈ ಇಬ್ಬರೂ ಮಹನೀಯರ ನಾಲ್ಕು ಮೀಟರ್‌ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದೆ. ಸುಮಾರು ಎಂಟು ಕೋಟಿ ವೆಚ್ಚದಲ್ಲಿ ಪ್ರತಿಮೆ ಸಿದ್ದಗೊಂಡಿದ್ದು, ಕಳೆದ ಜನವರಿಯಲ್ಲಿ ಪ್ರತಿಮೆಗಳ ಶಂಕುಸ್ಥಾಪನೆ ನೆರವೇರಿಸಲಾಗಿತ್ತು.

ಈಗಾಗಲೇ ವಿಧಾನಸೌಧದ ಮುಂಭಾಗದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಬಸವೇಶ್ವರರ ಪ್ರತಿಮೆಗಳನ್ನು ಕ್ರೇನ್ ಮೂಲಕ ಅಳವಡಿಸಲಾಗಿದ್ದು, ವಿಧಾನಸೌಧದ ಆವರಣ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಈ ಇಬ್ಬರು ಮಾಹಾತ್ಮರ ಪ್ರೇರಣೆ, ವಿಚಾರಗಳು ಶಾಶ್ವತವಾಗಿ ಉಳಿಯಲಿ ಎಂಬ ಸಲುವಾಗಿ ಈ ಪ್ರತಿಮೆಗಳನ್ನ ಮಾಡಲಾಗಿದೆ. ಪ್ರತಿಮೆ ಅನಾವರಣಕ್ಕೆ ವಿಧಾನಸೌಧ ಸಂಪೂರ್ಣವಾಗಿ ಮದುವಣಗಿತ್ತಿಯಂತೆ ಅಲಂಕೃತಗೊಂಡಿದ್ದು, ಜನರನ್ನು ತನ್ನತ್ತ ಆಕರ್ಷಿಸುತ್ತಿದೆ.

ಇನ್ನೂ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೇರಿದಂತೆ ಅನೇಕ ಸಚಿವರು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಇವರ ಜೊತೆಗೆ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನತೀರ್ಥಸ್ವಾಮೀಜಿ, ಸಿದ್ದಗಂಗಾಮಠದ ಸಿದ್ದಲಿಂಗ ಸ್ವಾಮೀಜಿ, ಮಾದಾರ ಪೀಠದ ಬಸವಮೂರ್ತಿ ಮಾದಾರ ಚೆನ್ನಯ ಸ್ವಾಮೀಜಿ, ಗುರುಗುಂಡಮಠದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ : New metro line: ಬೆಂಗಳೂರಲ್ಲಿಂದು ನೂತನ ಮೆಟ್ರೋ ಮಾರ್ಗ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಇದನ್ನೂ ಓದಿ : Amit Shah in Bangalore: ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಇದನ್ನೂ ಓದಿ : Whitefield Metro Station: ವರ್ಣರಂಜಿತ ದೀಪಗಳಿಂದ ಪ್ರಕಾಶಿಸಲ್ಪಟ್ಟ ಬೆಂಗಳೂರಿನ ವೈಟ್‌ಫೀಲ್ಡ್ ಮೆಟ್ರೋ ನಿಲ್ದಾಣ

Statue of Kempegowda, Basavanna unveiled today in front of Vidhana Soudha

Comments are closed.