KN Fanindra : ಕರ್ನಾಟಕ ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ನೇಮಕ

ಬೆಂಗಳೂರು : ಕರ್ನಾಟಕ ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ (KN Fanindra) ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಪ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್. ಆನಂದ್‌ ಅವರ ಸೇವಾವಧಿ 2020ರ ಡಿಸೆಂಬರ್‌ ನಲ್ಲೇ ಅಂತ್ಯವಾಗಿತ್ತು. ಹೀಗಾಗಿ ಕಳೆದ ಎರಡು ವರ್ಷಗಳಿಂದಲೂ ಹುದ್ದೆ ಖಾಲಿ ಉಳಿದಿತ್ತು.

ತುಮಕೂರು ಜಿಲ್ಲೆಯಲ್ಲಿ ಮೊದಲ ಬಾರಿಗೆ ವಕೀಲರಾಗಿ ಸೇವೆ ಆರಂಭಿಸಿದ್ದು, ನಂತರದಲ್ಲಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿ ನೇಮಕವಾಗಿದ್ದು, ಬೆಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನಂತರದಲ್ಲಿ ಉಡುಪಿ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ತದನಂತರದಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಹೆಗ್ಗಳಿಕೆಯನ್ನು ನ್ಯಾ. ಫಣೀಂದ್ರ ಅವರು ಹೊಂದಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕ ಗೊಂಡಿದ್ದ ಅವರ ಸೇವೆಯನ್ನು ತದನಂತರದಲ್ಲಿ ಖಾಯಂಗೊಳಿಸಲಾಗಿತ್ತು. ಮೇ 2020ರಂದು ಅವರು ಸೇವೆಯಿಂದ ನಿವೃತ್ತರಾಗಿದ್ದಾರೆ.

ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್‌ 3(1) ರ ಅಡಿ ಅಧಿಕಾರ ಬಳಿಸಿ ರಾಜ್ಯಪಾಲರು ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದಾರೆ. ಇನ್ನು ಲೋಕಾಯುಕ್ತರಾಗಿದ್ದ ನಿವೃತ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಅವರು ನಿವೃತ್ತರಾದ ನಂತರದಿಂದಲೂ ಲೋಕಾಯುಕ್ತ ಹುದ್ದೆ ಖಾಲಿಯಾಗಿಯೇ ಉಳಿದುಕೊಂಡಿದೆ. ಕಳೆದ ಎರಡು ವರ್ಷಗಳಿಂದಲೂ ಉಪ ಲೋಕಾಯುಕ್ತ ಹುದ್ದೆ ಖಾಲಿ ಉಳಿದಿತ್ತು. ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ಹಲವು ಐತಿಹಾಸಿಕ ತೀರ್ಪುಗಳನ್ನು ನೀಡಿರುವ ನ್ಯಾಯಮೂರ್ತಿ ಫಣೀಂದ್ರ ಅವರ ನೇಮಕದಿಂದಾಗಿ ಲೋಕಾಯುಕ್ತ ಸಂಸ್ಥೆ ಹೊಸ ಹುರುಪು ಬಂದಂತಾಗಿದೆ.

ಇದನ್ನೂ ಓದಿ : food Poisoning : ಉರುಸ್‌ ವೇಳೆಯಲ್ಲಿ ಆಹಾರ ಸೇವನೆ : 50 ಕ್ಕೂ ಅಧಿಕ ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಇದನ್ನೂ ಓದಿ : ರಾಜ್ಯ ಬಿಜೆಪಿಗೆ ಹೈಕಮಾಂಡ್ ಟೆನ್ಸನ್ : ನಳೀನ್‌ ಕುಮಾರ್ ಕಟೀಲ್ ಗೆ ಖಡಕ್ ಸೂಚನೆ ಕೊಟ್ಟ ನಡ್ಡಾ

(KN Fanindra Appointed Karnataka Deputy Lokayukta)

Comments are closed.