Kota Srinivas Poojary : ಶ್ರೀ ನಾರಾಯಣಗುರು ವಸತಿ ಶಾಲೆ : ಕೊನೆಗೂ ಆದೇಶ ಹೊರಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಇತ್ತೀಚೆಗಷ್ಟೇ ಕರ್ನಾಟಕ ರಾಜ್ಯ ಬಜೆಟ್​​ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡನೆ ಮಾಡಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತಿ ಶಾಲೆಗೆ 18 ಕೋಟಿ ರೂ.ಗಳ ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಿಸಿದರು. ಈ ಕುರಿತಂತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು (Kota Srinivas Poojary)ಆದಷ್ಟು ಬೇಗನೆ ಜಾರಿಗೊಳಿಸುವಂತೆ ಭರವಸೆ ನೀಡಿದ್ದು, ಇದೀಗ ಸಿಎಂ ಬೊಮ್ಮಾಯಿ ಸರಕಾರ ಶ್ರೀ ನಾರಾಯಣ ಗುರು ವಸತಿ ಶಾಲೆಯ ನಿರ್ಮಾಣಕ್ಕೆ ಆದೇಶವನ್ನು ಹೊರಡಿಸಿದ್ದಾರೆ.

ಆದೇಶದಲ್ಲಿ ” ಸರಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ 15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2A ಯ ಕ್ರಮ ಸಂಖ್ಯೆ 4(A) ಯಿಂದ (z) ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಹಾಗೆಯೇ ಈಡಿಗ – ಬಿಲ್ಲವ ಸೇರಿದಂತೆ ಸಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪನೆಗೆ ಆದೇಶಿಸಲಾಗಿದೆ” ಎಂದು ಬೊಮ್ಮಾಯಿ ಸರಕಾರ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ರಾಜ್ಯ ಬಜೆಟ್‌ನಲ್ಲಿ ಘೋಷಣೆ ಮಾಡಿದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಲು ಹಾಗೂ ಮೂಲ ಸೌಕರ್ಯಗಳಿಂದ ಕೂಡಿದ ವಸತಿ ಯೋಜನೆಯನ್ನು ಮಾಡಲಾಗುವುದು. ಹೀಗಾಗಿ ವಿದ್ಯಾರ್ಥಗಳಿಗೆ ವಸತಿ ಉಡುಪಿ, ದಕ್ಷಿಣ ಮತ್ತು ಉತ್ತರ ಕನ್ನಡದಲ್ಲಿನ ವಸತಿ ಶಾಲೆಗಳ ಅಭಿವೃದ್ಧಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : Kota Srinivas Poojary : ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಅನುದಾನ ಕುರಿತು ವಿವಾದ : ಇತರ ಜಾತಿಯವರಿಗೆ ಸಚಿವರಿಂದ ಭರವಸೆ ಟ್ವೀಟ್

ಇದನ್ನೂ ಓದಿ : JP Nadda State Tour: ಬಿಜೆಪಿ ರಾಷ್ಟ್ರೀಯ ಅಧ್ಯಕ್ಚ ಜೆಪಿ ನಡ್ಡಾ ರಾಜ್ಯ ಪ್ರವಾಸ: ಎಲ್ಲೆಲ್ಲಿ ಯಾವ ಕಾರ್ಯಕ್ರಮಗಳು?

ಇದನ್ನೂ ಓದಿ : ಸಿಎಂ ಬೊಮ್ಮಾಯಿ ಬಜೆಟ್ ಗೆ ಸಿದ್ದರಾಮಯ್ಯ ವಿಭಿನ್ನ ಪ್ರತಿಭಟನೆ: ಕಿವಿ ಮೇಲೆ ಕೇಸರಿ ಹೂವಿಟ್ಟುಕೊಂಡು ಬಂದ ವಿಪಕ್ಷ ನಾಯಕ

ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಪೂರಕವಾಗುವಂತೆ ವಸತಿ ಶಾಲೆಗಳ ನಿರ್ಮಾಣಕ್ಕಾಗಿ 18 ಕೋಟಿ ರೂ. ವೆಚ್ಚ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಅನುದಾನವಾಗಿ ನೀಡುವುದಾಗಿ ಹೇಳಿದ್ದಾರೆ. ಆದರೆ ಅದರ ಬಗ್ಗೆ ವಿವಿಧ ರೀತಿಯ ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಸಿಎಂ ಬೊಮ್ಮಾಯಿಯವರು ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಆದೇಶವನ್ನು ಹೊರಡಿಸಿದ್ದಾರೆ. ನುಡಿದಂತೆ ನಡೆದು ಈಡಿಗ ಬಿಲ್ಲವ ನಾಮಧಾರಿ ಸಮಾಜದ ಅಭಿವೃದ್ಧಿಗಾಗಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ರಚನೆ ಮಾಡಿದ ಮಾನ್ಯ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ ರಾಜ್ಯದ ಧನ್ಯವಾದ ಹೇಳಿದ್ದಾರೆ.

Kota Srinivas Poojary : Sri Narayanguru Residential School : CM Bommai finally issued an order

Comments are closed.