ಶಿವಮೊಗ್ಗ : (KS Eshwarappa retirement) ರಾಜ್ಯ ರಾಜಕೀಯದಲ್ಲಿ ಚುನಾವಣೆ ದಿನ ಹತ್ತಿರ ಬರುತ್ತಿದೆ. ಈ ಮಧ್ಯೆ ಬಿಜೆಪಿ ಪಕ್ಷ ಅಭ್ಯರ್ಥಿಗಳ ಟಿಕೆಟ್ ಫೈನಲ್ ಮಾಡುವಲ್ಲಿ ತಲೆಕೆಡಿಸಿಕೊಂಡಿದೆ. ಈ ನಡುವೆ ಬಿಜೆಪಿಗೆ ಒಂದು ದೊಡ್ಡ ಹಿನ್ನಡೆಯಾಗಿದ್ದು, ಶಿವಮೊಗ್ಗದ ಶಾಸಕನಾಗಿರುವ ಕೆಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಬಿಜೆಪಿ ಹೈಕಮಾಂಡ್ ಗೆ ಪತ್ರ ಬರೆಯುವ ಮೂಲಕ ರಾಜಕೀಯ ನಿವೃತ್ತಿ ಪಡೆದಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಒಂದು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರಿದ ಗದ್ದುಗೆ ಹಿಡಿಯಬೇಕೆಂದು ಮೂರು ರಾಜಕೀಯ ಪಕ್ಷಗಳು ಪಣತೊಟ್ಟಿವೆ. ದಕ್ಷಿಣ ಭಾರತದಲ್ಲಿ ಅತಿ ದೊಡ್ಡ ರಾಜ್ಯ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದರೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಭಾರತವನ್ನು ಸುಲಭವಾಗಿ ತೆಕ್ಕೆಗೆ ಹಾಕಿ ಕೊಳ್ಳಬಹುದು ಎಂದು ಎರಡು ರಾಷ್ಟ್ರೀಯ ಪಕ್ಷಗಳು ಯೋಜನೆ ರೂಪಿಸಿವೆ. ಮೂರು ಪಕ್ಷಗಳು ಈಗಾಗಲೆ ಭಾಗಶಃ ಪ್ರಚಾರ ಕಾರ್ಯವನ್ನು ಮುಗಿಸಿದ್ದು, ಕೊನೆ ಹಂತದ ಮತದಾರ ಮನವೊಲಿಕೆ ಅಣಿಯಾಗಿವೆ. ಇನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಮತ್ತು ಜೆಡಿಎಸ್ 1 ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಮಾತ್ರ ಇಂದು ನಾಳೆ ಎನ್ನುತ್ತಿದೆ.
ಈ ಮಧ್ಯೆ ಬಿಜೆಪಿ ಪಕ್ಷದ ಒಬ್ಬ ಅತ್ಯುನ್ನತ ನಾಯಕ ಶಿವಮೊಗ್ಗ ಕ್ಷೇತ್ರದ ಕೆ.ಎಸ್ ಈಶ್ವರಪ್ಪನವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. “ನಾನು ಸ್ವ ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ” ಎಂದು ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ.
ಇದರ ಜೊತೆಗೆ ” ಕಳೆದ ನಲವತ್ತಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು” ಎಂದು ಹೇಳುವ ಮೂಲಕ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಇದು ಬಿಜೆಪಿ ದೊಡ್ಡ ಹೊಡೆತವಾಗಿದ್ದು, ಈಶ್ವರಪ್ಪನವರು ಚುನಾವಣೆಯಿಂದ ಹಿಂದೆ ಸರಿಯಲು ಯಾವುದೇ ನಿಖರ ಕಾರಣಗಳನ್ನು ತಿಳಿಸಿಲ್ಲ. ತಾನು ಸ್ವ ಇಚ್ಚೆಯಿಂದ ನಿವೃತ್ತಿ ಘೋಷಿಸುತ್ತಿರುವೆ ಎಂದಷ್ಟೇ ಹೇಳಿದ್ದಾರೆ ಹೊರತು ಯಾವುದೇ ಸ್ಪಷ್ಟೀಕರಣವನ್ನು ನೀಡಿಲ್ಲ.
ಇದನ್ನೂ ಓದಿ : ಅಧಿಕಾರಕ್ಕೆ ಬಂದರೆ ಕೆಎಂಎಫ್ ಉನ್ನತೀಕರಣಕ್ಕೆ ಆದ್ಯತೆ : ಕಾಂಗ್ರೆಸ್ ಹೊಸ ಭರವಸೆ
ಇದೀಗ ಅವರು ರಾಜಕೀಯ ನಿವೃತ್ತಿ ಘೋಷಣೆಗೆ ಟಿಕೆಟ್ ಸಿಗದಿರುವುದೇ ಕಾರಣ ಎಂದು ಹೇಳಲಾಗುತ್ತಿದೆ. ಅಭ್ಯರ್ಥಿಗಳ ಟಿಕೆಟ್ ಫೈನಲ್ ಆಗುವುದಕ್ಕೂ ಮೊದಲೇ ಚುನಾವಣೆಯಿಂದ ಹಿಂದೆ ಸರಿದಿದ್ದು, ಈ ಬಾರಿ ಚುನಾವಣೆಗೆ ಟಿಕೆಟ್ ಸಿಗಲ್ಲ ಎಂಬ ಕಾರಣಕ್ಕೆ ಅಥವಾ ಪುತ್ರನ ರಾಜಕೀಯ ಭವಿಷ್ಯವನ್ನು ಪರಿಗಣಿಸಿ ಚುನಾವಣೆಯಿಂದ ಹಿಂದೆ ಸರಿದಿರಬಹುದು ಎನ್ನಲಾಗುತ್ತಿದೆ.

ವಯಸ್ಸಾಗಿರುವ ಕಾರಣಕ್ಕೆ ಈ ಬಾರಿ ಈಶ್ವರಪ್ಪನವರಿಗೆ ಟಿಕೆಟ್ ನೀಡಲಾಗುವುದು ದಿಲ್ಲ ಎನ್ನಲಾಗುತಿತ್ತು. ಇನ್ನೂ ಶಿವಮೊಗ್ಗದಿಂದ ತಮ್ಮ ಪುತ್ರ ಕಾಂತೇಶ್‌ಗೆ ಈಶ್ವರಪ್ಪ ಕೇಳಿದ್ದು, ಮತ್ತೊಂಡು ಕಡೆ ಅಯನೂರ ಮಂಜುನಾಥ್ ಕೂಡ ಬಿಜೆಪಿಯಿಂದ ಟಿಕೇಟ್ ಕೇಳಿದ್ದು, ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆ ಈ ಬಾರಿ ಎಲ್ಲರ ಗಮನ ಸೆಳೆದಿದೆ.
KS Eshwarappa retirement: BJP MLA KS Eshwarappa withdrew from the election