ಭಾನುವಾರ, ಏಪ್ರಿಲ್ 27, 2025
Homekarnatakaರಾಜೀನಾಮೆಗೂ ಮುನ್ನ ಕ್ಷೇತ್ರದ ಜನರನ್ನು ನೆನೆದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದಿಷ್ಟು !

ರಾಜೀನಾಮೆಗೂ ಮುನ್ನ ಕ್ಷೇತ್ರದ ಜನರನ್ನು ನೆನೆದು ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದಿಷ್ಟು !

- Advertisement -

ಕುಂದಾಪುರ : ಕರಾವಳಿಯ ಪ್ರಭಾವಿ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ (MLA Halady Srinivas Shetty) ವಿಧಾನಸಭಾ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ರಾಜಕೀಯ ನಿವೃತ್ತಿ ಪಡೆಯಲಿದ್ದಾರೆ ಅನ್ನೋ ಮಾತುಗಳು ಕೇಳಿಬಂದ ಬೆನ್ನಲ್ಲೇ ಹಾಲಾಡಿ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿದ್ದಾರೆ. ಈ ವೇಳೆಯಲ್ಲಿ ಹಲವು ವಿಚಾರಗಳನ್ನು ಬಿಚ್ಚಿಟ್ಟಿದ್ದು, ಕ್ಷೇತ್ರದ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಹಾಲಾಡಿ ಅವರು ಹೇಳಿದ್ದೇನು ಅನ್ನೋ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ.

ಹಾಲಾಡಿ ಹೇಳಿದ್ದೇನು ?

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ ಒಟ್ಟು ೫ ಅವಧಿಗೆ ನನ್ನನ್ನು ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ನನ್ನ ಕ್ಷೇತ್ರದ ಎಲ್ಲಾ ಜಾತಿ, ಧರ್ಮದ ಮತದಾರ ಬಾಂಧವರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಚೆಯಿಂದ ಸ್ಪರ್ಧಿಸದೆ ಇರಲಿ ನಿಶ್ಚಯಿಸಿರುತ್ತೇನೆ. ನಾನು ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ಅತ್ಯಂತ ನಿಷ್ಠೆಯಿಂದ ನನ್ನ ಜವಾಬ್ದಾರಿಯನ್ನು ನಿರ್ವಹಿಸಿರುತ್ತೇನೆ. ಕುಂದಾಪುರ ವಿಧಾನಸಭಾ ಕ್ಷೇತ್ರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಈ ಕ್ಷೇತ್ರದ ಎಲ್ಲಾ ವರ್ಗದ ಮತದಾರರಿಗೂ ತಮ್ಮ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಕೊಟ್ಟು ಅವರು ನೋವು, ಸಂಕಷ್ಟಗಳಿಗೆ ಸ್ಪಂದಿಸಿ ಜನರ ಆಷೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ನನಗಿದೆ. ಎಲ್ಲಾ ಐದು ಚುನಾವಣೆಗಳಲ್ಲಿಯೂ ನನ್ನನ್ನು ದಾಖಲೆಯ ಮತಗಳ ಅಂತರದಿಂದ ಚುನಾಯಿಸಿ ಕಳುಹಿಸಿದ ಕ್ಷೇತ್ರದ ಎಲ್ಲಾ ಮತದಾರರನ್ನೂ ವಿಶ್ವಾಸಕ್ಕೆ ಪಡೆದು ಅಭಿವೃದ್ದಿ ಕಾರ್ಯಗಳನ್ನು ನಿರ್ವಹಿಸಿ ಮತದಾರರಿಂದ ಪ್ರೀತಿ ವಿಶ್ವಾಸಗಳಿಸಿದ ಬಗ್ಗೆ ನನಗೆ ಹೆಮ್ಮೆಯಿದೆ ಎಂದಿದ್ದಾರೆ.

ಐದು ಬಾರಿ ಕ್ಷೇತ್ರದ ಶಾಸಕನಾಗಿ ಸೇವೆ ಸಲ್ಲಿಸುವ ಅವಧಿಯಲ್ಲಿ ನಡೆದ ಲೋಕಸಭಾ, ವಿಧಾನಸಭೆ, ವಿಧಾನ ಪರಿಷತ್‌, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌, ಪುರಸಭೆ ಹಾಗೂ ಪಟ್ಟಣ ಪಂಚಾಯತ್‌ ಚುನಾವಣೆಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ದುಡಿದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಹಾಗೂ ಅಭಿಮಾನಿಗಳಿಗೆ ನಾನು ಯಾವತ್ತೂ ಚಿರಋಣಿಯಾಗಿರುತ್ತೇನೆ. ಕ್ಷೇತ್ರದ ಅಭಿವೃದ್ದಿಯ ವಿಚಾರದಲ್ಲಿ ನನಗೆ ಮಾರ್ಗದರ್ಶನ, ಸಹಕಾರ ನೀಡಿದ ಪಕ್ಷದ ಎಲ್ಲಾ ಪ್ರಮುಖರಿಗೆ, ಹಿರಿಯ ಹಾಗೂ ಕಿರಿಯ ಸ್ನೇಹಿತರಿಗೆ, ಅಧಿಕಾರಿ ವರ್ಗದವರಿಗೆ, ಮಾಧ್ಯಮಗಳಿಎಗ ಹಾಗೂ ಕ್ಷೇತ್ರದ ಮತದಾರರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಇದನ್ನೂ ಓದಿ : ಕುಂದಾಪುರದ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ : ರಾಜಕೀಯ ನಿವೃತ್ತಿ ಘೋಷಣೆ

ಮತದಾರರು ನನ್ನ ಮೇಲೆ ಇಟ್ಟ ಪ್ರೀತಿ ಮತ್ತು ನಂಬಿಕಯೇ ನಾನು ಕ್ಷೇತ್ರದ ಅಭಿವೃದ್ದಿಗಾಗಿ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದೆ. ನಾನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಭಾರತೀಯ ಜನತಾ ಪಾರ್ಟಿಯಿಂದ ಆಯ್ಕೆಯಾಗಲು ಅವಕಾಶ ಕೊಟ್ಟ ಪಕ್ಷಕ್ಕೂ ಹಾಗೂ ಪಕ್ಷೇತರರಾಗಿ ನಿಂತು ಗೆಲ್ಲಲು ಸಹಕರಿಸಿದ ಎಲ್ಲರಿಗೂ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗೆ ಎಲ್ಲಾ ಮತಬಾಂಧವರು ಸಹಕಾರ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಹಾಲಾಡಿ ಶ್ರೀನಿವಾಸ ಶೆಟ್ಟಿ (MLA Halady Srinivas Shetty) ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ : Haladi Srinivas Shetty: ಕುಂದಾಪುರ ವಾಜಪೇಯಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ! ಬುಗಿಲೆದ್ದ ಅಸಮಾಧಾನ

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular