ಕೋಟ : ಕರಾವಳಿ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚುತ್ತಿದೆ. ಇದೀಗ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಸಮೀಪದ ಗರಿಕೆಮಠದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ರಾತ್ರಿ ೩ ಗಂಟೆಯ ಸುಮಾರಿಗೆ ಕೋಟ- ಸೈಬ್ರಕಟ್ಟೆ ರಸ್ತೆಯಲ್ಲಿ ಸಾಗಿ ಹೋಗಿದ್ದು, ಈ ಮಾರ್ಗದಲ್ಲಿ ಸಂಚಾರ ಮಾಡುತ್ತಿರುವವರ ಕಣ್ಣಿಗೆ ಬಿದ್ದಿದೆ. ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.
ಗರಿಕೆಮಠ ಬಸ್‌ನಿಲ್ದಾಣದ ಬಳಿ ಚಿರತೆ ಕಾಣಿಸಿಕೊಂಡಿದೆ. ರಸ್ತೆಯ ದಕ್ಷಿಣ ಧಿಕ್ಕಿನಿಂದ ಉತ್ತರ ಧಿಕ್ಕಿಗೆ ಸಾಗಿ ಹೋಗಿದೆ. ಈ ಭಾಗದಲ್ಲಿ ಸಾಕಷ್ಟು ಮನೆಗಳಿದ್ದು, ರಾತ್ರಿಯ ವೇಳೆಯಲ್ಲಿ ಚಿರತೆ ಕಾಣಿಸಿಕೊಂಡಿರುವುದು ಸಹಜವಾಗಿ ಈ ಭಾಗದ ಜನತೆಯ ಆತಂಕಕ್ಕೆ ಕಾರಣವಾಗಿದೆ. ಸುಮಾರು ಐದು ವರ್ಷಗಳ ಹಿಂದೆ ಈ ಭಾಗದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಹಸುವಿನ ಮೇಲೆ ದಾಳಿ ನಡೆಸಿತ್ತು.
ಇದನ್ನೂ ಓದಿ : BPL Card Holders Alert : ಬಿಪಿಎಲ್ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್
ಆದ್ರೀಗ ಐದು ವರ್ಷಗಳ ನಂತರ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಕೋಟದಿಂದ ಸೈಬ್ರಕಟ್ಟೆ ಮಾರ್ಗದಲ್ಲಿ ನಿತ್ಯವೂ ಸಾವಿರಾರು ವಾಹನಗಳು ಸಂಚಾರ ಮಾಡುತ್ತಿವೆ. ದ್ವಿಚಕ್ರವಾಹನ ಸವಾರರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಸಂಚಾರ ಮಾಡುವುದರಿಂದ ಆತಂಕವನ್ನುಂಟು ಮಾಡಿದೆ. ಈ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕಾಗಿದೆ. ಕೋಟ ಸಮೀಪದ ಬೇಳೂರು, ಶಿರಿಯಾರ, ತೆಕ್ಕಟ್ಟೆ ಸಮೀಪದ ಮಲ್ಯಾಡಿ ಭಾಗದಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿವೆ.
ಇದನ್ನೂ ಓದಿ : ದಸರಾ ಹಬ್ಬಕ್ಕೆ ಗೃಹಲಕ್ಷ್ಮೀ ಹಣದಲ್ಲಿ ಮಗನಿಗೆ ಬೈಕ್ ಕೊಡಿಸಿದ ತಾಯಿ!
Leopard Found in Garikemata near Kota Udupi News