ಚಾರ್ಮಾಡಿ ಘಾಟ್‌ನಲ್ಲಿ ಚಿರತೆ ಪ್ರತ್ಯಕ್ಷ; ಈ ದಾರಿಯಲ್ಲಿ ಓಡಾಡುವಾಗ ಜೋಪಾನ

ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾದ ಚಾರ್ಮಾಡಿ ಘಾಟಿ ಮಾರ್ಗದಲ್ಲಿ ರಸ್ತೆ ಬದಿಯಲ್ಲೇ ಒಂದು ಚಿರತೆ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಅಣ್ಣಪ್ಪ ಸ್ವಾಮಿ ದೇವಾಲಯ ಸಮೀಪ

ಕಳೆದ ಕೆಲವು ದಿನಗಳ ಹಿಂದೆ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡ ರಸ್ತೆಯ ಪಕ್ಕದಲ್ಲಿ ಚಿರತೆಯು ನಿಂತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಾಹನ ಸಂಚಾರ ದಟ್ಟಣೆ ಇದ್ದರೂ ಚಿರತೆ ಯಾವುದೇ ಭಯವಿಲ್ಲದೆ ಕೆಲಕಾಲ ರಸ್ತೆಯ ಪಕ್ಕದಲ್ಲಿ ನಡೆದಾಡಿದೆ. ಇದನ್ನು ಗಮನಿಸಿದ ಅದೆಷ್ಟೋ ವಾಹನ ಸವಾರರು ಕೆಲ ಕ್ಷಣ ಗಾಬರಿಯಾಗಿ ವಾಹನಗಳನ್ನು ನಿಲ್ಲಿಸಿ, ವಿಡಿಯೋ ಮಾಡಿಕೊಂಡಿದ್ದಾರೆ. ಅಣ್ಣಪ್ಪ ಸ್ವಾಮಿ ದೇವಾಲಯ ಸಮೀಪದಲ್ಲೇ ಚಿರತೆ ಕಾಣಿಸಿಕೊಂಡಿದೆ.

ಚಾರ್ಮಾಡಿ ಘಾಟ್ ಅರಣ್ಯದ ಭಾಗವಾಗಿದ್ದರೂ, ಪ್ರಾಣಿಗಳು ಹೀಗೆ ರಸ್ತೆ ಬದಿಯಲ್ಲಿ ಕಾಣಿಸಿಕೊಳ್ಳುವುದು ಅಪರೂಪ. ಈ ವೈರಲ್ ವಿಡಿಯೋವು ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಮತ್ತು ಪ್ರಯಾಣಿಕರಿಗೆ ಎಚ್ಚರಿಕೆಯ ಗಂಟೆಯಾಗಿದೆ.

ಇದನ್ನೂ ಓದಿ: PM Kisan Money: ನಾಳೆಯೇ ಖಾತೆಗೆ ಬರುತ್ತೆ 7,000 ರೂ! ಮೋದಿ ಯೋಜನೆಯಿಂದ ಭಾರೀ ನೆರವು

ಘಾಟಿ ಪ್ರದೇಶದಲ್ಲಿ ಪ್ರಯಾಣಿಸುವಾಗ ರಾತ್ರಿ ವೇಳೆ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಸೂಚಿಸಿದೆ. ಅರಣ್ಯದೊಳಗೆ ವನ್ಯಜೀವಿಗಳಿಗೆ ತೊಂದರೆ ನೀಡದೆ, ಅವುಗಳಿಂದ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಪ್ರಯಾಣಿಕರಿಗೆ ಇಲಾಖೆ ಮನವಿ ಮಾಡಿದೆ. ಚಿರತೆಯು ಮತ್ತೆ ರಸ್ತೆ ಬದಿಯಲ್ಲಿ ಕಾಣಿಸಿಕೊಂಡರೆ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

Vidhya | ವಿದ್ಯಾಶ್ರೀ

ವಿದ್ಯಾಶ್ರೀ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡ ( Kannada News Next) ದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ನ್ಯೂಸ್‌ ಚಾನೆಲ್‌, ದಿನ ಪತ್ರಿಕೆ ಹಾಗೂ ಡಿಜಿಟಲ್‌ ಮಾಧ್ಯಮದಲ್ಲಿ ಹಲವು ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.