ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ ೧೦ರಂದು ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ( MLC Election ) ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಡಿಸೆಂಬರ್ 8 ರಿಂದ ಡಿಸೆಂಬರ್ 10 ರ ವರೆಗೆ ಮೂರು ದಿನಗಳ ಮದ್ಯ ಮಾರಾಟಕ್ಕೆ (Liquor Shops bund ) ಬ್ರೇಕ್ ಬಿದ್ದಿದೆ. ರಾಜ್ಯದಲ್ಲಿನ ಬಾರ್, ಪಬ್, ವೈನ್ ಸ್ಟೋರ್‌ಗಳು ( Bar wines shop bund )ಬಂದ್ ಆಗಲಿವೆ.
ಡಿಸೆಂಬರ್ 10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ರಾಜ್ಯದಾದ್ಯಂತ ಚುನಾವಣೆ ನಡೆಯಲಿದೆ. ಅಲ್ಲದೇ ಡಿಸೆಂಬರ್ 14 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗಾಗಿ ರಾಜ್ಯ ಚುನಾವಣಾ ಆಯೋಗ ಸಿದ್ದತೆಗಳನ್ನು ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಹೀಗಾಗಿ ಡಿಸೆಂಬರ್ 7 ರಿಂದ ಡಿಸೆಂಬರ್ 10 ರ ಮಧ್ಯರಾತ್ರಿ ಯವರೆಗೆ ಮದ್ಯ ಮಾರಾಟ ಸಂಪೂರ್ಣವಾಗಿ ಬಂದ್ ಆಗಲಿದೆ. ರಾಜ್ಯದಲ್ಲಿ ಮೂರು ದಿನಗಳ ಕಾಲ ಮದ್ಯ ನಿಷೇಧ ಮಾಡಿರುವುದು ಮದ್ಯ ಮಾರಾಟಗಾರರಿಗೆ ಶಾಕ್ ಕೊಟ್ಟಂತಾಗಿದೆ. ಮೂರು ದಿನಗಳ ಬಾಲ ಎಣ್ಣೆ ಮಾರಾಟಕ್ಕೆ ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಬಾರೀ ನಷ್ಟ ಉಂಟಾಗಲಿದೆ ಎಂದು ಮದ್ಯ ಮಾರಾಟಗಾರರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ರಾಜ್ಯ ವಿಧಾನ ಪರಿಷತ್‌ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಭರ್ಜರಿ ಪ್ರಚಾರವನ್ನು ನಡೆಸುತ್ತಿವೆ. ರಾಜ್ಯದ ಬೀದರ್ 1 , ಕಲಬುರ್ಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಮೈಸೂರು ,2, ಚಿಕ್ಕಮಗಳೂರು 1, ಹಾಸನ1, ತುಮಕೂರು 1, ಮಂಡ್ಯ1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1 ಹಾಗೂ ಕೊಡಗು ಜಿಲ್ಲೆಯ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಬಿಜೆಪಿ 7, ಕಾಂಗ್ರೆಸ್ 14 ಹಾಗೂ ಜೆಡಿಎಸ್ ಪಕ್ಷದ ೫ ವಿಧಾನ ಪರಿಷತ್ ಸದಸ್ಯರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ಆಡಳಿತರೂಢ ಬಿಜೆಪಿ ಈ ಬಾರಿ ವಿಧಾನ ಪರಿಷತ್‌ನಲ್ಲಿ ಸಂಖ್ಯಾ ಬಲವನ್ನು ಹೆಚ್ಚಿಸಿಕೊಳ್ಳುವ ಯೋಚನೆಯಲ್ಲಿದ್ರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಹಾಲಿ ಸ್ಥಾನಗಳನ್ನು ಉಳಿಸಿಕೊಳ್ಳಲು ಕಸರತ್ತು ನಡೆಸುತ್ತಿವೆ. ವಿಧಾನ ಪರಿಷತ್‌ನ ಯಾವೆಲ್ಲಾ ಸದಸ್ಯರ ಅವಧಿ ಮುಕ್ತಾಯವಾಗಿದೆ ಅನ್ನೋ ಮಾಹಿತಿ ಇಲ್ಲಿದೆ.
ಬಿಜೆಪಿ
- ಕೋಟಾ ಶ್ರೀನಿವಾಸ ಪೂಜಾರಿ (ಸಭಾ ನಾಯಕ) ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
- ಬಿ.ಜಿ. ಪಾಟೀಲ್-ಕಲಬುರಗಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಪ್ರದೀಪ್ ಶೆಟ್ಟರ್- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಎಂ.ಕೆ. ಪ್ರಾಣೇಶ್ (ಉಪ ಸಭಾಪತಿ) ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಸುನೀಲ್ ಸುಬ್ರಹ್ಮಣಿ ಮಂಡೇಪಂಡ-ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಮಹಂತೇಶ್ ಕವಟಗಿಮಠ (ಮುಖ್ಯ ಸಚೇತಕ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ವಿವೇಕರಾವ್ ಪಾಟೀಲ್ (ಪಕ್ಷೇತರ)- ಬೆಳಗಾವಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
ಕಾಂಗ್ರೆಸ್
- ಎಸ್.ಆರ್. ಪಾಟೀಲ್ (ಪ್ರತಿಪಕ್ಷ ನಾಯಕ)- ವಿಜಯಪುರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಪ್ರತಾಪ್ ಚಂದ್ರ ಶೆಟ್ಟಿ (ಮಾಜಿ ಸಭಾಪತಿ)- ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಶ್ರೀಕಾಂತ್ ಲಕ್ಷ್ಮಣ್ ಘೋಟ್ನೇಕರ್- ಉತ್ತರ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಶ್ರೀನಿವಾಸ್ ಮಾನೆ (ಹಾಲಿ ಶಾಸಕ-ಹಾನಗಲ್)- ಧಾರವಾಡ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಧರ್ಮಸೇನ-ಮೈಸೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ವಿಜಯ್ ಸಿಂಗ್- ಬೀದರ್ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಬಸವರಾಜ್ ಪಾಟೀಲ್ ಇಟಗಿ- ರಾಯಚೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಕೆ.ಸಿ. ಕೊಂಡಯ್ಯ-ಬಳ್ಳಾರಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಆರ್. ಪ್ರಸನ್ನಕುಮಾರ್- ಶಿವಮೊಗ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
- ಎಂ.ಎ. ಗೋಪಾಲಸ್ವಾಮಿ-ಹಾಸನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಎಂ. ನಾರಾಯಣಸ್ವಾಮಿ (ಪ್ರತಿಪಕ್ಷ ಸಚೇತಕ)-ಬೆಂಗಳೂರು ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಎಸ್.ರವಿ- ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ರಘು ಆಚಾರ್- ಚಿತ್ರದುರ್ಗ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
- ಸುನಿಲ್ ಗೌಡ ಪಾಟೀಲ್- ವಿಜಯಪುರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ
ಜೆಡಿಎಸ್
- ಎನ್.ಅಪ್ಪಾಜಿ ಗೌಡ (ಪ್ರತಿಪಕ್ಷ ಸಚೇತಕ) ಮಂಡ್ಯ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ.
- ಸಂದೇಶ್ ನಾಗರಾಜ್-ಮೈಸೂರು ಸಂಸ್ಥೆಗಳ ಪ್ರತಿನಿಧಿ,
- ಸಿ.ಆರ್. ಮನೋಹರ್- ಕೋಲಾರ ಸಂಸ್ಥೆಗಳ ಪ್ರತಿನಿಧಿ.
- ಕಾಂತರಾಜು (ಬಿಎಂಎಲ್)- ತುಮಕೂರು ಸಂಸ್ಥೆಗಳ ಪ್ರತಿನಿಧಿ.
ಇದನ್ನೂ ಓದಿ : Godman: ಮಹಿಳೆಗೆ ಕೆಲಸ ಕೊಡಿಸುತ್ತೇನೆಂದು ನಂಬಿಸಿ ಬರೋಬ್ಬರಿ 38 ಲಕ್ಷ ರೂಪಾಯಿ ಪೀಕಿದ ಭೂಪ..!
( Liquor Shops bund : Big Shock for alcoholics, Bar, wines shop bund from tomorrow in Karnataka MLC Election)