Karnataka Lockdown Fix : ಕರ್ನಾಟಕದಲ್ಲಿ 10 ದಿನಗಳ ಕಾಲ ಲಾಕ್‌ಡೌನ್‌ ಫಿಕ್ಸ್‌

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈಗಾಗಲೇ ದಿನವೊಂದಕ್ಕೆ 20 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಲಾಕ್‌ಡೌನ್‌ ಜಾರಿಯಾಗೋದು ಬಹುತೇಕ ಫಿಕ್ಸ್‌. ಫೆಬ್ರವರಿ 1 ರಿಂದಲೇ ಒಂದು ವಾರ ಅಥವಾ ಹತ್ತು ದಿನಗಳ ಕಾಲ ಲಾಕ್‌ಡೌನ್‌ (Karnataka Lockdown Fix) ಜಾರಿಯಾಗುವ ಸಾಧ್ಯತೆಯಿದೆ.

ರಾಜ್ಯ ಸರಕಾರ ಈಗಾಗಲೇ ಕೋವಿಡ್‌ ವೈರಸ್‌ ಸೋಂಕಿನ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದೆ. ಅದ್ರಲ್ಲೂ ಫೆಬ್ರವರಿ ತಿಂಗಳಲ್ಲಿ ಕೊರೊನಾ ವೈರಸ್‌ ಸ್ಪೋಟಗೊಳ್ಳಲಿದೆ ಎಂದು ತಜ್ಞರು ರಾಜ್ಯ ಸರಕಾರಕ್ಕೆ ವರದಿಯನ್ನು ಸಲ್ಲಿಸಿದ್ದಾರೆ. ಇನ್ನೊಂದು ವಾರದ ಕಾಲ ಇದೇ ರೀತಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾದ್ರೆ ಲಾಕ್‌ಡೌನ್‌ ಜಾರಿಯಾಗಲಿದೆ. ರಾಜ್ಯ ಸರಕಾರ ನೇರವಾಗಿ ಲಾಕ್‌ಡೌನ್‌ ಪದ ಬಳಕೆ ಮಾಡದೇ ಇದ್ರೂ ಕೂಡ ತುರ್ತು ಆರೋಗ್ಯ ಸೇವೆ, ಅಗತ್ಯ ವಸ್ತುಗಳ ಖರೀದಿ ಹೊರತು ಪಡಿಸಿ ಉಳಿದೆಲ್ಲಾ ಸೇವೆಗಳು ಬಂದ್‌ ಆಗುವುದು ಖಚಿತ.

ಕರ್ನಾಟಕದಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈಗಾಗಲೇ ನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ 21,000 ಕ್ಕೆ ತಲುಪಿದೆ. ದಿನೇ ದಿನೇ ಕೊರೊನಾ ವೈರಸ್‌ ಸೋಂಕಿನ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 10 ದಿನಗಳ ಲಾಕ್‌ಡೌನ್ ವಿಧಿಸುವುದು ಖಚಿತ ಎನ್ನಲಾಗುತ್ತಿದೆ. ಫೆಬ್ರವರಿ 1 ರಿಂದ ಒಂದು ವಾರ ಅಥವಾ ಹತ್ತು ದಿನಗಳ ಕಾಲ ಲಾಕ್‌ಡೌನ್ ಜಾರಿಗೆ ಬರುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಈಗಾಗಲೇ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾದರೆ, ರಾಜ್ಯದಲ್ಲಿ 10 ದಿನಗಳ ಲಾಕ್‌ಡೌನ್ ಫಿಕ್ಸ್.

ಕರ್ನಾಟಕದಲ್ಲಿ ಇಂದು ಜನವರಿ 12 ರಂದು 21,390 ಹೊಸ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿ ಹೆಚ್ಚು ಪ್ರಕರಣಗಳು ಒಂದೇ ದಿನದಲ್ಲಿ 15,617 ಪ್ರಕರಣಗಳನ್ನು ವರದಿ ಮಾಡಿದೆ. ರಾಜ್ಯದಲ್ಲಿ ಧನಾತ್ಮಕ ದರ 10.96% ಮತ್ತು 1,541 ಇಂದು ಬಿಡುಗಡೆಯಾಗಿದೆ. ರಾಜ್ಯದಲ್ಲಿ 93,009 ಸಕ್ರೀಯ ಪ್ರಕರಣಗಳಿದ್ರೆ, ಬೆಂಗಳೂರಿನಲ್ಲಿ 73,000. 24 ಗಂಟೆಯಲ್ಲಿ 10 ಮಂದಿ ಸಾವು.

ರಾಜ್ಯದಲ್ಲಿ ಜನವರಿ 31 ರವರೆಗೆ ವಾರಾಂತ್ಯದ ಕರ್ಪ್ಯೂ, ನೈಟ್‌ ಕರ್ಪ್ಯೂ ಜಾರಿ ಮಾಡಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಈಗಾಗಲೇ ಶೇಕಡಾ 10.30 ಕ್ಕೆ ಏರಿಕೆಯಾಗಿದೆ. ಅಲ್ಲದೇ ದಿನೇ ದಿನೇ ಸೋಂಕಿತ ಪ್ರಕರಣಗಳ ಜೊತೆಗೆ ಪಾಸಿಟಿವಿಟಿ ದರ ಏರಿಕೆ ಕಾಣುತ್ತಿದೆ. ಅಲ್ಲದೇ ಮರಣ ಪ್ರಮಾಣವೂ ಏರಿಕೆಯಾಗುವ ಆತಂಕ ಎದುರಾಗಿದೆ. ಈಗಾಗಲೇ ಮೈಸೂರು, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇನ್ನಷ್ಟು ಏರಿಕೆಯಾದ್ರೆ ಶಾಲೆಗಳು ಸಂಪೂರ್ಣವಾಗಿ ಬಂದ್‌ ಆಗುವುದು ಖಚಿತ.

ರಾಜ್ಯ ಸರಕಾರ ಈಗಾಗಲೇ ಉತ್ಸವ, ಜಾತ್ರೆ, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ ಮದುವೆಗೆ 200 (ಹೊರಾಂಗಣ) ಹಾಗೂ 100 ಜನ (ಒಳಾಂಗಣದಲ್ಲಿ) ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಆಯಾಯ ಜಿಲ್ಲೆಗಳಲ್ಲಿ ಪಾಸಿಟಿವಿಟಿ ಆಧಾರದ ಮೇಲೆ ಶಾಲೆಗಳನ್ನು ಬಂದ್‌ ಮಾಡುವ ಕುರಿತು ಜಿಲ್ಲಾಡಳಿತಕ್ಕೆ ಅಧಿಕಾರವನ್ನು ನೀಡಲಾಗಿದೆ.

ಬೆಂಗಳೂರಲ್ಲಿ ಈಗಾಗಲೇ ಕೊರೊನಾ ಸ್ಪೋಟಗೊಂಡಿದ್ದು, ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ ಜಿಲ್ಲೆಗಳಲ್ಲಿ ಕೊರೊನಾ ಸ್ಪೋಟಗೊಳ್ಳುವ ಆತಂಕ ವ್ಯಕ್ತವಾಗಿದೆ. ಜೊತೆಗೆ ಇನ್ನಷ್ಟು ಜಿಲ್ಲೆಗಳಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಳವಾಗುವ ಭೀತಿಯೂ ನಿರ್ಮಾಣವಾಗಿದೆ. ಒಂದೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಾದ್ರೆ ಖಾಸಗಿ ಕಂಪೆನಿಗಳು, ಸರಕಾರಿ ಅಧಿಕಾರಿಗಳಿಗೆ ವರ್ಕ್‌ಫ್ರಂ ಹೋಮ್‌ಗೆ ಆದೇಶ ಹೊರಡಿಸುವ ಸಾಧ್ಯತೆಯಿದೆ.

(Lockdown fix in Karnataka for 10 days )

Comments are closed.