ರಾಜ್ಯದಲ್ಲಿ ಲಾಕ್ ಡೌನ್ : ಪ್ರ ಧಾನಿ ಮೋದಿ ನಿರ್ಧಾರಕ್ಕೆ ಕಾಯುತ್ತಿದ್ದೇವೆ : ಸಿಎಂ ಯಡಿಯೂರಪ್ಪ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆ ಯಲ್ಲಿ ಕೇಂದ್ರ ಸರಕಾರ ಯಾವ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಕಾಯುತ್ತಿದ್ದೇವೆ. ಪ್ರಧಾನಿ ಮೋದಿ ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆಗೆ ಸಂಬಂಧಿಸಿದಂತೆ ಪ್ರಧಾನಿಗಳ ಸಲಹೆಯನ್ನೇ ಕಾಯುತ್ತಿದ್ದೇವೆ. ಕೇಂದ್ರ ಸರಕಾರ ಯಾವ ನಿರ್ದೇಶನ ವನ್ನು ಕೈಗೊಳ್ಳುತ್ತದೆಯೋ ಅದನ್ನೇ ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಈಗಾಗಲೇ ಲಾಕ್ ಡೌನ್ ಹೇರಿಕೆ ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಸೂಚನೆಯನ್ನು ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಧಿಕಾರಿ ಗಳ ಜೊತೆಗೆ ಸಭೆಯನ್ನು ನಡೆಸುತ್ತಿದ್ದು, ಸಭೆಯ ನಂತರದಲ್ಲಿ ಲಾಕ್ ಡೌನ್ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 

Comments are closed.