ಲೋಕಸಭೆ ಚುನಾವಣೆ 2024 : ಬಿಡುಗಡೆ ಆಯ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

Lok Sabha Elections 2024: ಲೋಕಸಭಾ ಚುನಾವಣೆ ಕೆಲವೇ ದಿನಗಳು ಮಾತ್ರವೇ ಬಾಕಿ ಉಳಿದಿದೆ. ಈಗಾಗಲೇ ಲೋಕಸಭಾ ಚುನಾವಣೆಯ ಸಂಭಾವ್ಯ ದಿನಾಂಕ ಪ್ರಕಟವಾಗಿದೆ.

Lok Sabha Elections 2024: ಲೋಕಸಭಾ ಚುನಾವಣೆ ಕೆಲವೇ ದಿನಗಳು ಮಾತ್ರವೇ ಬಾಕಿ ಉಳಿದಿದೆ. ಈಗಾಗಲೇ ಲೋಕಸಭಾ ಚುನಾವಣೆಯ ಸಂಭಾವ್ಯ ದಿನಾಂಕ ಪ್ರಕಟವಾಗಿದೆ. ಈ ನಡುವಲ್ಲೇ ವಿವಿಧ ರಾಜಕೀಯ ಪಕ್ಷಗಳು ಕಸರತ್ತು ನಡೆಸುತ್ತಿದ್ದ, ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಸಿದ್ದತೆಯಲ್ಲಿವೆ. ಈ ನಡುವಲ್ಲೇ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರದ ವಿರುದ್ದ ಈಗಾಗಲೇ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಮಾತ್ರವಲ್ಲದೇ ಭಾರತೀಯ ಜನತಾ ಪಕ್ಷ (ಬಿಜೆಪಿ) ಜನತಾ ದಳ (ಜಾತ್ಯತೀತ) ಜೆಡಿಎಸ್ ನಾಯಕರು ಎಚ್ಚರಿಕೆಯ ಹೆಜ್ಜೆಯೊಂದಿಗೆ ವಿಶೇಷ ತಂತ್ರ ಹೂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, 2024ರ ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ ನಡೆಸುತ್ತಿದೆ.

Lok Sabha Elections 2024 List of Congress Candidates Released
Image Credit to Original Source

ಲೋಕಸಭೆ ಚುನಾವಣೆಯಲ್ಲಿ ಸಚಿವರನ್ನು ಕಣಕ್ಕಿಳಿಸುವ ಬಗ್ಗೆಯೂ ಸರಣಿ ಚರ್ಚೆಗಳು ನಡೆಯುತ್ತಿವೆ. ಆದರೆ, ಸಚಿವರು ಮಾತ್ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಿರಾಸಕ್ತಿ ತೋರುತ್ತಿದ್ದಾರೆ. 28 ಲೋಕಸಭಾ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು ಈ ಕುರಿತು ಮ್ಯಾರಾಥಾನ್ ಸಭೆ ನಡೆಸಿ ಇನ್ನೂ 16 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿದ್ದಾರೆ. ಹಾಗಾದ್ರೆ ಕಾಂಗ್ರೆಸ್‌ ಸಿದ್ದಪಡಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪೈಕಿ ಯಾರೆಲ್ಲಾ ಟೆಕೆಟ್‌ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಇದನ್ನೂ ಓದಿ : ನಟಿ ರಮ್ಯ Vs ಸಂಸದೆ ಸುಮಲತಾ Vs ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನಡುವೆ ಫೈಟ್ : ಲೋಕಸಭಾ ವಾರ್ ಗೆ ಸಿದ್ಧವಾಗ್ತಿದೆ ಮಂಡ್ಯ

ಕೋಲಾರ-ಕೆ.ಎಚ್.ಮುನಿಯಪ್ಪ ಅಥವಾ ಚಿಕ್ಕಪೆದ್ದಣ್ಣ, ಮೈಸೂರು ಕೊಡಗು-ಎಂ.ಲಕ್ಷ್ಮಣ್, ವೈದ್ಯ ಶುಶ್ರುತ್ ಗೌಡ ಅಥವಾ ಯತೀಂದ್ರ ಸಿದ್ದರಾಮಯ್ಯ, ಚಿಕ್ಕಬಳ್ಳಾಪುರ-ರಕ್ಷಾ ರಾಮಯ್ಯ ಅಥವಾ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಚಾಮರಾಜನಗರ-ಎಚ್.ಸಿ.ಮಹದೇವಪ್ಪ, ಬಳ್ಳಾರಿ-ಇ.ತುಕಾರಾಂ ಪುತ್ರಿ ಸೌಪರ್ಣಿಕಾ, ಬೀದರ್-ಈಶ್ವರ್ ಖಂಡ್ರೆ ಮಗ ಸಾಗರ್ ಖಂಡ್ರೆ.

Lok Sabha Elections 2024 List of Congress Candidates Released
Image Credit to Original Source

ಕಲಬುರಗಿ-ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ, ಬೆಂಗಳೂರು ದಕ್ಷಿಣ-ಎನ್. ರಮೇಶ್ ಕುಮಾರ್, ಬೆಂಗಳೂರು ಸೆಂಟ್ರಲ್-ಹರೀಸ್ ಮೊಹಮ್ಮದ್, ಬೆಂಗಳೂರು ಉತ್ತರ-ಕುಸುಮಾ ಹನುಮಂತರಾಯಪ್ಪ ಅಥವಾ ಸೌಮ್ಯ ರೆಡ್ಡಿ, ಹುಬ್ಬಳ್ಳಿ ಧಾರವಾಡ-ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಅಥವಾ ರಜತ್ ಉಳ್ಳಾಗಡ್ಡಿ

ಇದನ್ನೂ ಓದಿ : ಬೆಂಗಳೂರು ಉತ್ತರಕ್ಕೆ ಸದಾನಂದ ಗೌಡರ ಬದಲು ಸಿಟಿ ರವಿಗೆ ಟಿಕೆಟ್‌ ! ಹೈಕಮಾಂಡ್‌ಗೆ ತಲೆನೋವಾದ ಸಿಟಿ ರವಿ – ಶೋಭಾ ಟಿಕೆಟ್‌ ಫೈಟ್‌

ಚಿಕ್ಕೋಡಿ-ಪ್ರಕಾಶ್ ಹುಕ್ಕೇರಿ, ಬೆಳಗಾವಿ-ವೈದ್ಯ ಗಿರೀಶ್ ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಮಗ, ಕೊಪ್ಪಳ-ರಾಜಶೇಖರ್ ಹಿಟ್ನಾಳ್ ಅಥವಾ ಅಮರೇಗೌಡ ಬಯ್ಯಾಪುರ, ಶಿವರಾಮೇಗೌಡ.ತುಮಕೂರು- ಮುದ್ದಹನುಮೇಗೌಡ (ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ) ಕಾಂಗ್ರೆಸ್ ಪಾಳಯದಲ್ಲಿ ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಕ್ಷಾ ರಾಮಯ್ಯ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದು, ಈ ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಉತ್ತರ ಕನ್ನಡದಲ್ಲಿ ಶಾಸಕಿ ಅಂಜಲಿ ನಿಂಬಾಳ್ಕರ್ ಅಥವಾ ಭೀಮಣ್ಣ ನಾಯಕ್, ತುಮಕೂರಿನಲ್ಲಿ ಮಾಜಿ ಸಂಸದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ.

ಇದನ್ನೂ ಓದಿ :  ಬಿಜೆಪಿ ಅಸಮಾಧಾನಕ್ಕೆ ಸೈಲೆಂಟ್‌ ಆಗಿಯೇ ಮದ್ದೆರೆದ ರಾಜ್ಯಾಧ್ಯಕ್ಷ : ಬಿಎಸ್‌ ಯಡಿಯೂರಪ್ಪ ಹಾದಿಯಲ್ಲೇ ಪುತ್ರ ಬಿವೈ ವಿಜಯೇಂದ್ರ

Lok Sabha Elections 2024: List of Congress Candidates Released

Comments are closed.