M-K Border dispute: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ನಿಲುವು ಸಂವಿಧಾನ ಬದ್ಧ : ಸಿಎಂ ಬೊಮ್ಮಾಯಿ

ಬೆಂಗಳೂರು: (M-K Border dispute) ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ ದಿನೇ ದಿನೇ ತಾರಕಕ್ಕೇರುತ್ತಿದ್ದು, ಇದೀಗ ಗಡಿ ವಿವಾದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಗಡಿ ವಿವಾದದ ಕುರಿತು ಕೋರ್ಟ್‌ ನಲ್ಲಿ ವಾದ ವಿವಾದಗಳು ನಡೆಯಲಿದ್ದು, ನಮ್ಮ ನಿಲುವು ಸಾಂವಿಧಾನಿಕ ಹಾಗೂ ಕಾನೂನು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ.

ಗಡಿ ವಿವಾದ (M-K Border dispute) ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯದ ನಿಲುವು ಸ್ಪಷ್ಟವಾಗಿದೆ. ಮಹಾರಾಷ್ಟ್ರದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸುವುದಿಲ್ಲ. ನಮ್ಮ ನಿಲುವು ಸಾಂವಿಧಾನಿಕ ಮತ್ತು ಕಾನೂನು ಬದ್ಧವಾಗಿದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಅರ್ಜಿ ಮೈಂಟೆನೆಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ. ನಮ್ಮ ನಿಲುವು ಸಂವಿಧಾನಬದ್ಧ ಹಾಗೂ ಕಾನೂನಾತ್ಮಕವಾಗಿದೆ. ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದರು.

ಕರ್ನಾಟಕ-ಮಹಾರಾಷ್ಟ್ರ ನಡುವೆ ಹಲವು ದಶಕಗಳಿಂದ ಸಂಘರ್ಷಕ್ಕೆ ಕಾರಣವಾಗಿರುವ ಗಡಿ ವಿವಾದಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಸರ್ಕಾರವು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಕುರಿತು ಅರ್ಜಿ ವಿಚಾರಣೆ ನಡೆಯಬೇಕಿದೆ. ಕೋರ್ಟ್‌ ನ ಅಂತಿಮ ತೀರ್ಪು ಏನೆಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ : ಸುರತ್ಕಲ್ ಟೋಲ್ ರದ್ದು, ಹೆಜಮಾಡಿಯಲ್ಲಿ ಟೋಲ್ ದರ ಏರಿಕೆ ಇಲ್ಲ : ಹೋರಾಟಗಾರರ ಸಂಭ್ರಮಾಚರಣೆ

ಇದನ್ನೂ ಓದಿ : Holiday for college: ಕನ್ನಡ ಬಾವುಟ ಹಿಡಿದಿದ್ದಕ್ಕೆ ಹಲ್ಲೆ: ಮುಂಜಾಗ್ರತಾ ಕ್ರಮವಾಗಿ ಕಾಲೇಜಿಗೆ ರಜೆ ಘೋಷಣೆ

ಇದನ್ನೂ ಓದಿ : Muslim Girls College: ರಾಜ್ಯದಲ್ಲಿ ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಚರ್ಚೆಯೇ ನಡೆದಿಲ್ಲ; ಸಿಎಂ ಸ್ಪಷ್ಟನೆ

The border dispute between Karnataka and Maharashtra is getting worse day by day and now the border dispute has reached the Supreme Court. On Thursday, Chief Minister Basavaraja Bommai said that there will be arguments in the court regarding the border dispute and our stand is constitutional and legal.

Comments are closed.