ಸೋಮವಾರ, ಏಪ್ರಿಲ್ 28, 2025
HomekarnatakaMaleyur Guruswami passed away: ಹಿರಿಯ ವಿದ್ವಾಂಸ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಮಲೆಯೂರು ಗುರುಸ್ವಾಮಿ...

Maleyur Guruswami passed away: ಹಿರಿಯ ವಿದ್ವಾಂಸ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಮಲೆಯೂರು ಗುರುಸ್ವಾಮಿ ವಿಧಿವಶ

- Advertisement -

ಚಾಮರಾಜನಗರ:(Maleyur Guruswami passed away) ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ವಿದ್ವಾಂಸ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ಮಲೆಯೂರು ಗುರುಸ್ವಾಮಿ ಅವರು ಇಂದು ಬೆಳಿಗ್ಗೆ ಮೈಸೂರಿನ ಜೆ.ಎಸ್.ಎಸ್.‌ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರಿಗೆ 76 ವರ್ಷ ವಯಾಸ್ಸಾಗಿದ್ದು ಅನಾರೋಗ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಬಳಿ ಪ್ರೊ. ಮಲೆಯೂರು ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ

ಪ್ರೊ. ಮಲೆಯೂರು ಗುರುಸ್ವಾಮಿ ಅವರಿಗೆ ಅನಾರೊಗ್ಯ ಹಿನ್ನೆಲೆ ಕೆಲ ದಿನಗಳ ಹಿಂದೆ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಆರಂಭದಲ್ಲಿ ಪ್ರೊ. ಮಲೆಯೂರು ಉತ್ತಮವಾಗಿ ಸ್ಪಂದಿಸುತ್ತಿದ್ದರು. ಆದ್ರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

1947ರ ಆಗಸ್ಟ್ 1ರಂದು ಚಾಮರಾಜನಗರ ತಾಲೂಕಿನ ಮಲೆಯೂರು ಗ್ರಾಮದಲ್ಲಿ ಶಿವಣ್ಣ ಹಾಗೂ ತಾಯಿ ಮರೆಮ್ಮ ದಂಪತಿಯ ಪುತ್ರನಾಗಿ ಜನಿಸಿದ ಪ್ರೊ. ಮಲೆಯೂರು ಗುರುಸ್ವಾಮಿ ಅವರು ಇವರು ಮಹಾಯಾತ್ರಿಕ, ಅಪ್ರತಿಮ ವೀರ, ಚರಿತ್ರೆಯ ಪುಟಕ್ಕೆ ಒಂದು ಟಿಪ್ಪಣಿ ಕಾದಂಬರಿಗಳು, ಮಾತೆಂಬುದು ಜ್ಯೋತಿರ್ಲಿಂಗ ವಚನ ಸಾಹಿತ್ಯ, ಶ್ರೀ ಕಾರ್ಯಸ್ವಾಮಿ ಮಠದ ಕ್ಷೇತ್ರ ಚರಿತ್ರೆ, ಶರಣ ಕಿರಣ ವ್ಯಕ್ತಿ ಚಿತ್ರ, ಪ್ರಭುಲಿಂಗ ಲೀಲೆ ವಿಮರ್ಶಾ ಕೃತಿಗಳನ್ನು ರಚಿಸಿದ್ದಾರೆ. ಹಾಗೀ ಮೂಡಲ ಸೀಮೆಯ ಕಥೆಗಳು, ಕಾಡಂಚಿನ ಕೋಗಿಲೆಗಳ ಕಲರವ, ಕಪಿಲಾ ನದಿಯ ಎಡಬಲದಿ, ಹೆಜ್ಜಿಗೆ ಅಕ್ಕ, ಛಂದೋನಿಜಗುಣ, ರಾಜಪಥ, ಸೋಮಸಿರಿ, ಶಿವಪ್ರಭೆ, ಶಿವಯೋಗ, ಹೊನ್ನಹೊಳೆ, ಶಿವಸಂಪದ ಸೇರಿದಂತೆ ಅನೇಕ ಕೃತಿಗಳನ್ನು ಸಂಪಾದಿಸಿದ್ದಾರೆ.

ಇದನ್ನೂ ಓದಿ : Horoscope Today : ದಿನಭವಿಷ್ಯ – ಮಾರ್ಚ್ 9 ಗುರುವಾರ

ಅಲ್ಲದೇ ಇವರು ಜೆಎಸ್‌ಎಸ್ ಸಂಸ್ಥೆಯಲ್ಲಿ ವಿಶ್ರಾಂತ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ ಇವರಿಗೆ ಮಹಾಕವಿ ಷಡಕ್ಷರ ದೇವ ಸ್ಮಾರಕ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರೋಟರಿ ರಾಜ್ಯೋತ್ಸವ ಪ್ರಶಸ್ತಿ, 2010ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳು ಮುಡಿಗೇರಿವೆ. ಇದೀಗ ಇಂತಹ ಅಪ್ರತಿಮ ಕಲಾವಿದ ಕಲಾಕ್ಷೇತ್ರವನ್ನು ತೊರೆದಿದ್ದು, ಇಂದು ಬೆಳಗ್ಗೆ 10 ಗಂಟೆಯಿಂದ ಮೈಸೂರಿನ ಜೆಎಸ್‌ಎಸ್‌ ಮಹಾ ವಿದ್ಯಾಪೀಠದ ಬಳಿ ಪ್ರೊ. ಮಲೆಯೂರು ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೃತ ಪ್ರೊ. ಮಲೆಯೂರು ಗುರುಸ್ವಾಮಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ.

Maleyur Guruswami passed away: Senior scholar, Rajyotsava awardee Prof. Maleyur Guruswami passed away

RELATED ARTICLES

Most Popular