ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ; ನಾಲ್ವರು ಅರೆಸ್ಟ್

ಮಂಗಳೂರು : ಬಿಜೆಪಿ ಕಾರ್ಯಕರ್ತನೋರ್ವನನ್ನು ಹತ್ಯೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಕ್ರೀಯ ಕಾರ್ಯಕರ್ತ ಅಮ್ಮುಂಜೆಯ ನಿವಾಸಿ ಜನಾರ್ದನ ಬರಿಂಜ್‌ (Janardhan Barinj murder) ಎಂಬವರೇ ಕೊಲೆಯಾದವರು. ಮಂಗಳೂರು ನಗರದ ನೆಹರೂ ಮೈದಾನದ ಬಳಿಯಲ್ಲಿರುವ ಪುಟ್‌ಬಾಲ್‌ ಗ್ರೌಂಡ್‌ ಬಳಿಯಲ್ಲಿ ಬಿಜೆಪಿ ಕಾರ್ಯಕರ್ತ ಜನಾರ್ದನ ಅವರ ಶವ ಪತ್ತೆಯಾಗಿದೆ. ಮಂಗಳವಾರ ಮಧ್ಯಾಹ್ನ ಮೈದಾನದ ಬಳಿಯಲ್ಲಿ ಕುಳಿತಿದ್ದ ವೇಳೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಮಾತುಗಳು ಕೇಳಿಬಂದಿದೆ.

ಜನಾರ್ದನ ಅವರ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆಟೋ ಚಾಲಕರಾಗಿರುವ ಜನಾರ್ದನ ಬರಿಂಜ್‌ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಕ್ರೀಯ ಕಾರ್ಯಕರ್ತರಾಗಿದ್ದರು. ಇದೀಗ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಯಾರ ಗುರುತನ್ನು ಕೂಡ ಪೊಲೀಸರು ಬಹಿರಂಗ ಪಡಿಸಿಲ್ಲ. ಪೊಲೀಸರ ತನಿಖೆಯ ನಂತರವಷ್ಟೆ ಕೊಲೆಯ ಹಿಂದಿನ ರಹಸ್ಯ ಬಹಿರಂಗವಾಗಬೇಕಾಗಿದೆ.‌

ಸುಬ್ರಹ್ಮಣ್ಯದಲ್ಲಿ ಭೀಕರ ಅಪಘಾತ, ಮಗು ಸೇರಿ ನಾಲ್ವರ ದುರ್ಮರಣ

ಸುಬ್ರಹ್ಮಣ್ಯ: ಆಲ್ಟೋ ಕಾರು ಮತ್ತು ತೂಫಾನ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಇಂದು ಸಂಭವಿಸಿದೆ. ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರು ಮತ್ತು ತೂಫಾನ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರು ಸುಬ್ರಹ್ಮಣ್ಯದ ಕಡೆಗೆ ತೆರಳುತ್ತಿದ್ದು, ತೂಫನ್ ವಾಹನ ಸುಬ್ರಹ್ಮಣ್ಯ ಕಡೆಯಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಒಂದು ಮಗು, ಇಬ್ಬರು ಪುರುಷರು ಹಾಗೂ ಒರ್ವ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತರು ಬೇಳೂರು ಮೂಲದವರು ಎಂದು ತಿಳಿದು ಬಂದಿದೆ. ಇನ್ನೂ ತೂಫನ್ ವಾಹನದಲ್ಲಿದ್ದವರು ಹಾಸನ ಕಡೆಯವರು ಎನ್ನಲಾಗಿದ್ದು, ಕ್ಷೇತ್ರ ದರ್ಶನಕ್ಕಾಗಿ ಬಂದಿರುವುದಾಗಿ ತಿಳಿದುಬಂದಿದೆ. ಸದ್ಯ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಆದರೆ ಅಪಘಾತ ಘಟನೆಗೆ ನಿಖರ ಕಾರಣಗಳೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ತನಿಖೆಯನ್ನು ನಡೆಸಲಾಗುತ್ತಿದೆ. ಆದರೆ ಅಪಘಾತಕ್ಕೆ ನಿಖರ ಕಾರಣಗಳೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಇದನ್ನೂ ಓದಿ : ನನಗೆ ಬಿಜೆಪಿ ಟಿಕೆಟ್‌ ಕೈ ತಪ್ಪಲು ಬಿ.ಎಲ್‌ ಸಂತೋಷ್‌ ಕಾರಣ : ಜಗದೀಶ್‌ ಶೆಟ್ಟರ್‌ ಆರೋಪ

ಇದನ್ನೂ ಓದಿ : ಕೆಜಿಎಫ್‌ ಬಾಬು ಮನೆ ಮೇಲೆ ಐಟಿ ದಾಳಿ : ಹಲವು ಕಾಂಗ್ರೆಸ್‌ ನಾಯಕರಿಗೆ ಐಟಿ ಶಾಕ್‌

Mangalore bjp Activist Janardhan Barinj murder case 4 arrested

Comments are closed.