ಸೋಮವಾರ, ಏಪ್ರಿಲ್ 28, 2025
HomeCoastal NewsMangalore Fazil Murder : ಫಾಜಿಲ್‌ ಹತ್ಯೆ ಪ್ರಕರಣ : ಸಿಸಿ ಕ್ಯಾಮರಾದಲ್ಲಿ ಕೊಲೆಯ ದೃಶ್ಯ...

Mangalore Fazil Murder : ಫಾಜಿಲ್‌ ಹತ್ಯೆ ಪ್ರಕರಣ : ಸಿಸಿ ಕ್ಯಾಮರಾದಲ್ಲಿ ಕೊಲೆಯ ದೃಶ್ಯ ಸೆರೆ

- Advertisement -

ಮಂಗಳೂರು : ಸುರತ್ಕಲ್‌ನ ಮಂಗಲಪೇಟೆ ಎಂಬಲ್ಲಿ ಫಾಜಿಲ್‌ ಎಂಬ ಯುವಕನನ್ನು ಹತ್ಯೆಗೈದಿದ್ದಾರೆ. ಮಾರಕಾಸ್ತ್ರಗಳಿಂದ ಫಾಜಿಲ್‌ನನ್ನು (Mangalore Fazil Murder ) ಕೊಚ್ಚಿ ಕೊಲ್ಲಲಾಗಿದ್ದು, ಬಟ್ಟೆ ಅಂಗಡಿಯ ಮುಂಭಾಗದಲ್ಲಿ ನಡೆದ ಹತ್ಯೆಯ ದೃಶ್ಯ ಇದೀಗ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ಫಾಜಿಲ್‌ ಎಂಬಾತನನ್ನು ಹತ್ಯೆ ಮಾಡಲಾಗಿದೆ. ರಾತ್ರಿ ಸುಮಾರು 8.30 ರ ಸುಮಾರಿಗೆ ತನ್ನ ಸ್ನೇಹಿತ ಜೊತೆಗೆ ಅಂಗಡಿಯ ಮುಂಭಾಗದಲ್ಲಿ ನಿಂತಿದ್ದ ಫಾಜಿಲ್‌ ಎಂಬಾತನ ಮೇಲೆ ಮೂವರು ಯುವಕರ ತಂಡ ಮಾರಕಾಸ್ತ್ರಗಳಿಂದ ಏಕಾಏಕಿ ಕೊಚ್ಚಿ ಪರಾರಿಯಾಗಿದ್ದಾರೆ. ಆಸ್ಪತ್ರೆಗೆ ದಾಖಲು ಮಾಡಲಾಗಿದ್ದರೂ ಕೂಡ ಫಾಜಿಲ್‌ ಪ್ರಾಣಪಕ್ಷಿ ಹಾರಿಹೋಗಿದೆ.

ಫಾಜಿಲ್‌ ಹತ್ಯೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಫಾಜಿಲ್‌ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪ್ರೀತಿ ಪ್ರೇಮದ ವಿಚಾರಕ್ಕೆ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಆದರೂ ಕೂಡ ಈ ಕುರಿತು ಯಾವುದೇ ಖಚಿತತೆ ಇಲ್ಲ. ಇನ್ನು ಘಟನೆಯ ಬೆನ್ನಲ್ಲೇ ಸುರತ್ಕಲ್ ನಲ್ಲಿ ಬಿಗಿ ಪೊಲೀಸ್‌ ಭದ್ರತೆಯನ್ನು ಒದಗಿಸಲಾಗಿದೆ. ಅಲ್ಲದೇ ಮಂಗಳೂರು ನಗರ ಪೊಲೀಸ್‌ ಆಯುಕ್ತರ ವ್ಯಾಪ್ತಿಯಲ್ಲಿನ ನಾಲ್ಕು ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಸುರತ್ಕಲ್‌, ಬಜಪೆ, ಪಣಂಬೂರು, ಮೂಲ್ಕಿ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ಸಂಜೆ ೮ ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಆರೋಪಿಗಳನ್ನು ಶೀಘ್ರದಲ್ಲಿಯೇ ಪತ್ತೆ ಮಾಡುತ್ತೇವೆ. ಸಾರ್ವಜನಿಕರು ಶಾಂತಿಯನ್ನು ಕಾಪಾಡ ಬೇಕು. ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ಪಣಂಬೂರು, ಮೂಲ್ಕಿ, ಸುರತ್ಕಲ್‌ ಹಾಗೂ ಬಜಪೆ ಸೇರಿದಂತೆ ನಾಲ್ಕು ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಮದ್ಯದಂಗಡಿ ಕೂಡ ಬಾಗಿಲು ತೆರೆಯುವುದಿಲ್ಲ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ಎನ್.‌ ಶಶಿಕುಮಾರ್‌ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : fazil murder : ಪ್ರವೀಣ್‌ ಹತ್ಯೆಯ ಬೆನ್ನಲ್ಲೇ ಸುರತ್ಕಲ್‌ನಲ್ಲಿ ಫಾಜಿಲ್‌ ಹತ್ಯೆ : ನಿಷೇಧಾಜ್ಞೆ ಜಾರಿ

ಇದನ್ನೂ ಓದಿ : BIG BREAKING : ಸುರತ್ಕಲ್‌ನಲ್ಲಿ ಯುವಕನ ಮೇಲೆ ಚಾಕು ಇರಿತ : ಸ್ಥಳಕ್ಕೆ ಪೊಲೀಸರು ದೌಡು

Mangalore Fazil Murder, Surthkal section 144 implementation Mangalore Police commissioner Shashi Kumar Order

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular