ಮಂಗಳೂರಲ್ಲಿ ನೈತಿಕ ಪೊಲೀಸ್ ಗಿರಿ : ಊಟಕ್ಕೆ ಬಂದ ಜೋಡಿಯನ್ನು ತಡೆದ ಭಜರಂಗದಳ ಕಾರ್ಯಕರ್ತರು

ಮಂಗಳೂರು : (Mangalore moral policing) ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ತಡರಾತ್ರಿ ಅನ್ಯಕೋಮಿನ ಜೋಡಿಯನ್ನು ಭಜರಂಗದಳ ಕಾರ್ಯಕರ್ತರು ತಡೆದ ಘಟನೆ ಮಂಗಳೂರು ನಗರದ ಕೊಟ್ಟಾರಚೌಕಿಯ ಬಳಿಯಲ್ಲಿ ನಡೆದಿದೆ.

ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಇಬ್ಬರು ಹಿಂದೂ ಯುವತಿಯರು ಮುಸ್ಲೀಂ ಯುವಕರ ಜೊತೆಗೆ ಮಂಗಳೂರು ನಗರದ ಕೊಟ್ಟಾರಚೌಕಿಯ ಬಳಿಯಲ್ಲಿ ಕಾಣಿಸಿಕೊಂಡಿ ದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಭಜರಂಗದಳ ಕಾರ್ಯಕರ್ತರು ಅನ್ಯಕೋಮಿನ ಜೋಡಿಯನ್ನು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೇ ಈ ವೇಳೆಯಲ್ಲಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ವೇಳೆಯಲ್ಲಿ ರಾತ್ರಿ ಪಾಳಿಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಜೋಡಿಯನ್ನು ಪ್ರಶ್ನಿಸಿದಾಗ ತಾವು ಊಟಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ನಡುರಾತ್ರಿ ಎಲ್ಲಿ ಊಟ ಸಿಗುತ್ತೆ ಎಂದು ಮರು ಪ್ರಶ್ನಿಸಿದ್ದಾರೆ. ನಂತರ ಜೋಡಿಯನ್ನು ಊರ್ವ ಪೊಲೀಸರು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೊಂದೆಡೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಕೆಲವು ಭಜರಂಗದಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಟ್ಟುಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಮಂಗಳೂರು ನಗರದಲ್ಲಿ ಒಂದೇ ವಾರದ ಅವಧಿಯಲ್ಲಿ ನಡೆದಿರುವ ನಾಲ್ಕನೇ ಪ್ರಕರಣ ಇದಾಗಿದೆ. ಪೊಲೀಸರು ನೈತಿಕ ಪೊಲೀಸ್ ಗಿರಿ ಪ್ರಕರಣದ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಮಾತುಗಳು ಕೇಳಿಬರುತ್ತಿದೆ.

ಇದನ್ನೂ ಓದಿ : Terrible accident: ಕಾರು ಲಾರಿ ಭೀಕರ ಅಪಘಾತ :3 ಸಾವು, ಓರ್ವ ಗಂಭೀರ

ಇದನ್ನೂ ಓದಿ :  ಕರ್ನಾಟಕದಲ್ಲಿ ಮಳೆ ಮುಂದುವರಿಕೆ : 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಳದಿ ಅಲರ್ಟ್

ಗೆಳೆಯರೊಂದಿಗೆ ಪತ್ನಿಯನ್ನು ಮಲಗಿಸಿ ವೀಡಿಯೋ ಮಾಡುತ್ತಿದ್ದ ಗಂಡ

ಬೆಂಗಳೂರು:ಮಹಿಳೆಯರನ್ನು ಈಗಲೂ ತನ್ನ ಕೈಗೊಂಬೆಯಂತೆ ನೋಡಿಕೊಳ್ಳುವ ಪುರುಷರು ಹಲವರಿದ್ದಾರೆ. ಆದರೆ ಸಮಾಜದ ಎಲ್ಲಾ ಕಟ್ಟುಪಾಡುಗಳನ್ನು ಮೀರಿ ಇಲ್ಲೊಬ್ಬ ಪತಿ ತನ್ನ ಪತ್ನಿಯನ್ನು ಗೆಳೆಯರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮರೆಯುತ್ತಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲೊಬ್ಬ ವಿಕೃತಕಾಮಿ ಹಾಗೂ ಮಾದಕವ್ಯಸನಿ ಗಂಡನ ಪುಂಡಾಟ ಬಯಲಾಗಿದೆ. ಪುರುಷ ಸಮಾಜವೇ ತಲೆ ತಗ್ಗಿಸುವಂತ ನೀಚ ಕಾರ್ಯ ಈತ ನಡೆಸುತ್ತಿದ್ದ. ತನ್ನ ಜೊತೆ ಅಗ್ನಿಸಾಕ್ಷಿಯಾಗಿ ಸಪ್ತಪದಿ ತುಳಿದ ಪತ್ನಿಯನ್ನು ಸ್ನೇಹಿತರೊಂದಿಗೆ ಮಲಗಿಸಿ ವಿಡಿಯೋ ಮಾಡಿ ವಿಕೃತಿ ಮೆರೆಯುತ್ತಿದ್ದನು. ಈ ಹಿಂಸೆಯನ್ನು ತಾಳಲಾರದೇ ಗಂಡನ ವಿರುದ್ದ ಪತ್ನಿ ದೂರು ನೀಡಿದ್ದು, ತನ್ನ ಗಂಡ ಇನ್ನೂ ಹಲವು ವಿಕೃತಗಾಮಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಬಗ್ಗೆ ಪೊಲೀಸರ ಮುಂದೆ ಪತ್ನಿ ಹೇಳಿಕೊಂಡಿದ್ದಾಳೆ.

2011 ರ ಏಪ್ರಿಲ್ ನಲ್ಲಿ ಜಾನ್ ಪಾಲ್ ಅವರನ್ನು ಮಹಿಳಾ ಟೆಕ್ಕಿ ವಿವಾಹವಾಗಿದ್ದಳು. ಮೊದಲ ನಾಲ್ಕು ವರ್ಷಗಳು ಚೆನ್ನಾಗಿಯೇ ಸಂಸಾರ ಮಾಡಿಕೊಂಡಿದ್ದು, ನಂತರ 2015 ರಿಂದ ಆರೋಪಿ ಪತಿ ಜಾನ್ ಪಾಲ್ ತನ್ನ ವಿಕೃತಿ ಶುರು ಮಾಡಿದ್ದನು ಎಂದು ಪತ್ನಿ ದೂರಿನಲ್ಲಿ ತಿಳಿಸಿದ್ದಾಳೆ.

Mangalore moral policing case again Urva Police Limits

Comments are closed.