Court News : ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ : ಆರೋಪಿಗೆ 12 ವರ್ಷ ಕಠಿಣ ಶಿಕ್ಷೆ

ಮಂಗಳೂರು : ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಪೋಕ್ಸೋ (ಎಫ್‌ಟಿಎಸ್‌ಸಿ-1) ನ್ಯಾಯಾಲಯದ ನ್ಯಾಯಾಧೀಶರಾದ ಸಾವಿತ್ರಿ ವಿ.ಭಟ್‌ ಅವರು ಆರೋಪಿಗೆ 12 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

ಮಂಗಳೂರು ನಗರದ ಕಾವೂರಿನಲ್ಲಿ ವಾಸವಾಗಿದ್ದ ಮೂಲತಃ ಗದಗ ಜಿಲ್ಲೆಯ ಕೂಲಿ ಕಾರ್ಮಿಕ ಮಲ್ಲಿಕಾರ್ಜುನ ಹನುಮಂತಪ್ಪ ( 27 ವರ್ಷ) ಎಂಬಾತನೇ ಶಿಕ್ಷೆಗೆ ಗುರಿಯಾದ ಅಪರಾಧಿ. 2017ರ ಮೇ ತಿಂಗಳಿನಲ್ಲಿ ತನ್ನ ಪಕ್ಕದ ಮನೆಯ 16 ವರ್ಷದ ಬಾಲಕಿಯನ್ನು ವಿವಾಹವಾಗುವುದಾಗಿ ನಂಬಿಸಿ ಅಪಹರಿಸಿದ್ದ. ನಂತರ ಬಾಲಕಿಯನ್ನು ಗೋವಾಕ್ಕೆ ಕರೆದೊಯ್ದು ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿ ಗೋವಾದ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.

ಆರೋಪಿ ಮಲ್ಲಿಕಾರ್ಜುನ ಬಾಲಕಿಯನ್ನು ಆಸ್ಪತ್ರೆಯಲ್ಲಿಯೇ ಬಿಟ್ಟು ಪರಾರಿಯಾಗಿದ್ದ. ಈ ಕುರಿತು ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಾಲಕಿಯನ್ನು ಪೋಷಕರು ಗೋವಾದಿಂದ ಮನೆಗೆ ತೆರೆತಂದಿದ್ದಾರೆ. ಈ ಕುರಿತು ಪೊಲೀಸರು ದೋಷಾರೋಪ ಪಟ್ಟಿಯನ್ನು ನ್ಯಾಯಾಲುಕ್ಕೆ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಿಚಾರಣೆಯ ವೇಳೆಯಲ್ಲಿ ಅಪರಾಧ ಸಾಬೀತಾಗಿದ್ದು, ಸುದೀರ್ಘ ವಿಚಾರಣೆಯ ಬಳಿಕ ಆರೋಪಿ ಮಲ್ಲಿಕಾರ್ಜುನ ಹನುಮಂತಪ್ಪ ಎಂಬಾತನಿಗೆ 12 ವರ್ಷಗಳ ಕಠಿಣ ಸಜೆ ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಇನ್ನು ಅತ್ಯಾಚಾರ ಪ್ರಕರಣದಲ್ಲಿ ೬ವರ್ಷ ಕಠಿಣ ಸಜೆ ಹಾಗೂ25 ಸಾವಿರ ರೂ.ದಂಡ, ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವರ್ಷ ಕಠಿಣ ಸಜೆ, ಮದುವೆಯಾಗುವುದಾಗಿ ವಂಚಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಆರು ತಿಂಗಳು ಕಠಿಣ ಸಜೆ, ಹಾಗೂ ಪೋಕ್ಸೋ ಕಾಯ್ದೆಯಡಿಯಲ್ಲಿ12 ವರ್ಷಗಳ ಕಠಿಣ ಸಜೆ ಹಾಗೂ 50 ಸಾವಿರ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಲಾಗಿದೆ.

ಸಂತ್ರಸ್ತ ಬಾಲಕಿಗೆ ದಂಡದ ಮೊತ್ತದಲ್ಲಿ 50 ಸಾವಿರ ರೂಪಾಯಿಯ ಜೊತೆಗೆ ಸರಕಾರ 2.50 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆಯೂ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.

ಇದನ್ನೂ ಓದಿ : ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಬದುಕನ್ನೇ ಮುಗಿಸಿದ ಸಹಪಾಠಿ : ಪರೀಕ್ಷಾ ಕೊಠಡಿಯಲ್ಲಿ ನಡೆಯಿತು ಆಘಾತಕಾರಿ ಘಟನೆ

ಇದನ್ನೂ ಓದಿ : ಮಹಿಳೆಯನ್ನು ಕಾಡಿಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ

(Abduction of a minor: 12 years rigorous imprisonment in Mangalore )

Comments are closed.