Mangalore School Holiday July 20 : ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಮಳೆಯ ಜೊತೆಗೆ ಗುಡ್ಡ ಕುಸಿತ, ನೆರೆ ಹಾವಳಿಯಿಂದ ಜನರು ತತ್ತರಿಸಿದ್ದಾರೆ. ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 20 ರಂದು ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದ್ದು, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ (School Holiday) ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ ೨೦ರಂದು ರಜೆ ಘೋಷಣೆ ಮಾಡಲಾಗಿದೆ. ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನದಿ ಹಾಗೂ ಸಮುದ್ರ ತೀರದಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ : ಉಡುಪಿ ಜಿಲ್ಲೆಯಾದ್ಯಂತ ನಾಳೆ (ಜುಲೈ 20) ಶಾಲೆಗಳಿಗೆ ರಜೆ ಘೋಷಣೆ : ಹಡವು ಪಡುಕೋಣೆಯಲ್ಲಿ ಮನೆ ಮೇಲೆ ಬಿತ್ತು ಬೃಹತ್ ಮರ
ಕರಾವಳಿ ಜಿಲ್ಲೆಗಳಲ್ಲಿ ಇಂದು ಕೂಡ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಕಡಬ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಇದೀಗ ನಾಳೆಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಹೊಸ ರೂಲ್ಸ್ : ಅತೀ ಹೆಚ್ಚು ಸಿಮ್ ಹೊಂದಿದ್ರೆ 3 ವರ್ಷ ಜೈಲು ಶಿಕ್ಷೆ, 2 ಲಕ್ಷ ದಂಡ
ಮಂಗಳೂರು – ಬೆಂಗಳೂರು ಸಂಪರ್ಕ ಕಪ್ಪಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗುತ್ತಿದ್ದು, ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಇನ್ನು ಮಡಿಕೇರಿ- ದಕ್ಷಿಣ ಕನ್ನಡ ಸಂಪರ್ಕಿಸುವ ಸಂಪಾಜೆ ಘಾಟ್ ರಸ್ತೆಯಲ್ಲಿಯೂ ಭೂ ಕುಸಿತ ಉಂಟಾಗಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಬೆಂಗಳೂರಿಗೆ ತೆರಳುವ ವಾಹನಗಳು ಚಾರ್ಮಾಡಿ ಘಾಟಿಯನ್ನು ಬಳಸಿಕೊಂಡು ಸಂಚಾರ ನಡೆಸಬೇಕಾಗಿದೆ.
ಇದನ್ನೂ ಓದಿ : Suryakumar Yadav: ಸೂರ್ಯನಿಗೆ ಭಾರತ ತಂಡದ ನಾಯಕ ಪಟ್ಟ, ನಿಜವಾಯ್ತು ಕಾಪು ಮಾರಿಕಾಂಬ ಅರ್ಚಕರ ವಾಣಿ
Mangalore School Holiday July 20 Heavy Rain Red Alert