Mansoon in Karnataka : ಕರ್ನಾಟಕಕ್ಕೆ ಮಾನ್ಸೂನ್‌ ಆಗಮನ : ಈ ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

ಬೆಂಗಳೂರು : ಕರ್ನಾಟಕಕ್ಕೆ ಮಾನ್ಸೂನ್ ಆಗಮನಕ್ಕೆ (Mansoon in Karnataka) ದಿನಗಣನೆ ಶುರುವಾಗಿದೆ. ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕರ್ನಾಟಕದಲ್ಲಿ ಮಾನ್ಸೂನ್ ಪ್ರವೇಶವಾಗುವ ಮೊದಲೇ ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಪೊನ್ನಂಪೇಟೆಯಲ್ಲಿ ಮಳೆಯಾಗಿದ್ದು, ರಾಜ್ಯದಾದ್ಯಂತ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದೆ. ಕಲಬುರಗಿಯಲ್ಲಿ ಗರಿಷ್ಠ 42.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ವಾತಾವರಣ ತಂಪಾಗಿದ್ದು, 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ, 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ; ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ.

ಇದನ್ನೂ ಓದಿ : Free bus pass for women‌ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು

ಸಾಮಾನ್ಯವಾಗಿ ಪ್ರತಿವರ್ಷ ಜೂನ್ 1 ರಂದು ನೈಋತ್ಯ ಮುಂಗಾರು ಕೇರಳ ಪ್ರವೇಶವಾಗುತ್ತಿತ್ತು. ಆದರೆ ಈ ಭಾರೀ ಜೂನ್‌ ೪ಕ್ಕೆ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾಡಿಕೆಯಂತೆ ಒಂದು ವಾರದ ನಂತರ ದಿನಗಳಲ್ಲಿ ಕರ್ನಾಟಕವನ್ನು ಪ್ರವೇಶಿಸಲಿದೆ. ಈ ಬಾರಿ ನಾಲ್ಕು ದಿನ ವಿಳಂಬವಾಗಿದೆ. ಸದ್ಯ ಕೆಲ ದಿನ ತಡವಾಗಬಹುದು ಎನ್ನಲಾಗುತ್ತಿದೆ. 2022 ರಲ್ಲಿ ಕಳೆದ ವರ್ಷ ಮೇ 29 ರಂದು ಮುಂಗಾರು ಪ್ರಾರಂಭವಾಯಿತು. 2015 ಹೊರತುಪಡಿಸಿ ಕಳೆದ 18 ವರ್ಷಗಳಲ್ಲಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಪ್ರಾರಂಭವಾಗುವ ದಿನಾಂಕದ ಕಾರ್ಯಾಚರಣೆಯ ಮುನ್ಸೂಚನೆಗಳು ಸರಿಯಾಗಿವೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Mansoon in Karnataka: Heavy Rainfall alert in these districts

Comments are closed.