Meditation: ಪ್ರತಿದಿನ ವಿದ್ಯಾರ್ಥಿಗಳಿಂದ ಕಡ್ಡಾಯವಾಗಿ 10 ನಿಮಿಷ ಧ್ಯಾನ ಮಾಡಿಸಲು ಅಗತ್ಯ ಕ್ರಮ ಕೈಗೊಳ್ಳಿ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: Meditation: ಆರೋಗ್ಯದ ಸಮಸ್ಯೆ, ಮಾನಸಿಕ ಒತ್ತಡಗಳಿಂದ ವಿದ್ಯಾರ್ಥಿಗಳನ್ನು ಮುಕ್ತವಾಗಿಸಲು ರಾಜ್ಯ ಸರ್ಕಾರ ಧ್ಯಾನಕ್ಕೆ ಶರಣಾಗಿದೆ. ಇನ್ನು ಮುಂದೆ ಶಾಲೆಗಳಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿಗಳಿಂದ 10 ನಿಮಿಷಗಳ ಕಾಲ ಧ್ಯಾನ ಮಾಡಿಸುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಮಕ್ಕಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಹಾಗೂ ಮಾನಸಿಕ ಒತ್ತಡಗಳು ಕಡಿಮೆಯಾಗಲು ಸಹಕರಿಸುವ ಧ್ಯಾನ ಮಾಡಿಸುವುದು ಅತೀ ಅಗತ್ಯ. ಧ್ಯಾನದ ಅಭ್ಯಾಸವು ಮಕ್ಕಳಲ್ಲಿ ಸಕಾರಾತ್ಮಕ ಸ್ಪಂದನೆ, ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಯಾಗುವಲ್ಲಿ ಪ್ರೋತ್ಸಾಹಿಸುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Imran Khan: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ; ಇಮ್ರಾನ್ ಕಾಲಿಗೆ ಗಾಯ

ರಾಜ್ಯದ ಕೆಲ ಜಿಲ್ಲೆಗಳ ಶಾಲೆಗಳಲ್ಲಿ ಈಗಾಗಲೇ ಶಿಕ್ಷಕರು ಧ್ಯಾನ ಮಾಡಿಸುತ್ತಿದ್ದಾರೆ. ಈ ಕುರಿತು ಹಿಂದೆ ಕರ್ನಾಟಕ ರಾಜ್ಯ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಮಾಡಲು ಅವಕಾಶ ಕಲ್ಪಿಸುವಂತೆ ಪತ್ರದ ಮೂಲಕ ಮನವಿ ಮಾಡಿದ್ದರು. ಈ ಹಿನ್ನೆಲೆ ಶಾಲೆಗಳಲ್ಲಿ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಬಿ.ಸಿ.ನಾಗೇಶ್ ಸೂಚನೆ ನೀಡಿದ್ದಾರೆ.

ಸಚಿವರ ಟಿಪ್ಪಣಿಯಲ್ಲೇನಿದೆ..?
ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ. ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ವಿದ್ಯಾರ್ಥಿಗಳಿಗೆ ಪ್ರತಿದಿನ ನಿಯಮಿತವಾಗಿ ಧ್ಯಾನ ಮಾಡಿಸುವುದು ಸೂಕ್ತವಾಗಿರುತ್ತದೆ. ರಾಜ್ಯದಲ್ಲಿನ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಇದನ್ನೂ ಓದಿ: Realme 10 4G : ಸದ್ಯದಲ್ಲೇ ಬಿಡುಗಡೆಯಾಗಲಿದೆ ರಿಯಲ್‌ಮಿ 10 4G ಫೋನ್‌; ಒಂದೇ ಸಮಯದಲ್ಲಿ 18 ಅಪ್ಲಿಕೇಶನ್‌ ರನ್‌ ಮಾಡಬಹುದಂತೆ…

Meditation: Take necessary steps to make 10 minutes meditation compulsory for students every day: Minister BC Nagesh

Comments are closed.