ಮಡಿಕೇರಿ: MLA Election 2023 Kodagu : ಕೊಡಗಿನ ಎರಡು ಕ್ಷೇತ್ರಗಳಿಗೆ ಬಹುತೇಕ ಕಾಂಗ್ರೆಸ್ ಅಭ್ಯರ್ಥಿಗಳು ಫಿಕ್ಸ್ ಅನ್ನುವ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಹೈಕೋರ್ಟ್ ನ್ಯಾಯವಾದಿ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರಕ್ಕೆ ಡಾ.ಮಂತರಗೌಡ ಅವರ ಹೆಸರು ಬಹುತೇಕ ಫಿಕ್ಸ್ ಆಗಿದೆ ಎಂದು ಹೈಕಮಾಂಡ್ ಮೂಲಗಳಿಂದ ಲಭ್ಯವಾಗಿದೆ.
ವಿರಾಜಪೇಟೆ ಕ್ಷೇತ್ರದ ಅಭ್ಯರ್ಥಿಯಾಗಿ ಹೈಕೋರ್ಟ್ ವಕೀಲರಾದ ಎಎಸ್ ಪೊನ್ನಣ್ಣ ಈ ಮೊದಲು ಕಾಂಗ್ರೆಸ್ ವಕೀಲರ ವಿಭಾಗದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಕಳೆದ ಮೂರು ವರ್ಷಗಳಿಂದ ವಿರಾಜಪೇಟೆ ಕ್ಷೇತ್ರದಲ್ಲಿ ನಿರಂತರ ಜನ ಸಂಪರ್ಕದ ಮೂಲಕ ಕಾಂಗ್ರೆಸ್ ಬೆಳವಣಿಗೆಗೆ ಕೆಲಸ ಮಾಡಿದ್ದರು. ವಿರಾಜಪೇಟೆ ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇ ಬೇಕು ಅನ್ನೋ ಹಠಕ್ಕೆ ಬಿದ್ದಿರುವ ಕಾಂಗ್ರೆಸ್ ಈ ಬಾರಿ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವ ಮೂಲಕ ಬಿಜೆಪಿಗೆ ಟಕ್ಕರ್ ಕೊಡಲು ಪ್ಲ್ಯಾನ್ ರೂಪಿಸಿದೆ.
ಇನ್ನು ಮಡಿಕೇರಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೊಡಗಿನಲ್ಲಿ ಸಂಚಲನ ಸೃಷ್ಟಿಸಿದ್ದ, ಅಭಿವೃದ್ಧಿ ಚಿಂತಕ ಡಾ. ಮಂತರ್ ಗೌಡ ಹೆಸರು ಫಿಕ್ಸ್ ಆಗಿದ್ದಾರೆ. ಕೊಡಗಿನಲ್ಲಿ ತನ್ನ ಅಭಿವೃದ್ದಿ ಚಿಂತನೆಗಳಿಂದ ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ಸಂಚಲನೆ ಸೃಷ್ಟಿ ಮಾಡಿದ್ದ ಮಂತರ್ ಗೌಡ ಕಾಂಗ್ರೆಸ್ಸಿಗೆ ಟಾನಿಕ್ ನಂತೆ ನಮ್ಮ ಚೈತನ್ಯ ನೀಡಿದ್ದಾರೆ ಎಂದು ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ. ಜೊತೆ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿರುವ ಮಂತರ್ ಗೌಡ ಕ್ಷೇತ್ರದಲ್ಲಿ ಹೆಚ್ಚು ಪ್ರಾಬಲ್ಯವನ್ನು ಹೊಂದಿದ್ದಾರೆ.
ಆದರೆ ಕೊಡಗು ಜಿಲ್ಲೆಯಲ್ಲಿ ಬಿಜೆಪಿ ಬದಲಾವಣೆಯ ಬಗ್ಗೆ ಯಾವುದೇ ಸೂಚನೆಯನ್ನು ನೀಡಿಲ್ಲ. ಹಾಲಿ ಶಾಸಕ ಕೆ.ಜಿ.ಬೋಪಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಹಾಗೂ ಮಡಿಕೇರಿ ಕ್ಷೇತ್ರದಿಂದ ಅಪ್ಪಚ್ಚು ರಂಜನ್ ಕಣಕ್ಕೆ ಇಳಿಯುವುದು ಬಹುತೇಕ ಫಿಕ್ಸ್. ಸಮರ್ಥ ನಾಯಕತ್ವದ ಕೊರತೆಯಿಂದ ಕಾಫಿನಾಡಲ್ಲಿ ಸೊರಗಿ ಹೋಗಿರುವ ಕಾಂಗ್ರೆಸ್ ಈ ಬಾರಿ ಯುವಕರನ್ನು ಕಣಕ್ಕೆ ಇಳಿಸುವ ಮೂಲಕ ಕಮಾಲ್ ಮಾಡುತ್ತಾ ಅನ್ನೋದನ್ನು ಕಾದುನೋಡಬೇಕಾಗಿದೆ.
ಇದನ್ನೂ ಓದಿ : ಪುತ್ತೂರು, ಬಂಟ್ವಾಳ ಸೇರಿ ಈ ಬಾರಿ ಹೊಸ ಮುಖಗಳಿಗೆ ಟಿಕೆಟ್: ಗೌಪ್ಯವಾಗಿ ಹಿರಿಯರಿಗೆ ಖಡಕ್ ಸಂದೇಶ ಕೊಟ್ಟ ಕಾಂಗ್ರೆಸ್ ಹೈಕಮಾಂಡ್
ಇದನ್ನೂ ಓದಿ : ಪಕ್ಷೇತರ ಸ್ಪರ್ಧಿಯಾಗಿ ಕಾರ್ಕಳ ಕ್ಷೇತ್ರದಿಂದ ಪ್ರಮೋದ್ ಮುತಾಲಿಕ್ ಸ್ಪರ್ಧೆ
MLA Election 2023 Virajpet AS Ponnanna Madikeri Dr Mantar Gowda Fix New face from Congress in Kodagu