ಬಿಜೆಪಿ ಎಂಎಲ್‌ಎ ಟಿಕೆಟ್‌ ವಂಚನೆ ಪ್ರಕರಣ : ಚೈತ್ರಾ ಕುಂದಾಪುರ ಅರೆಸ್ಟ್

‌ಚೈತ್ರಾ ಕುಂದಾಪುರ ಅವರು ಬೈಂದೂರಿನ ಬಿಜೆಪಿ ಟಿಕೆಟ್‌ ಆಕಾಂಕ್ಷಿಯೊಬ್ಬರಿಗೆ ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ದೂರು ನೀಡಿದ್ದರು. MLA Ticket Fraud Police Arrest Chaitra Kundapur

ಕುಂದಾಪುರ : ಉದ್ಯಮಿಯೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ (Chaithra Kundapura ) ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು (CCB Police)  ಬಂಧಿಸಿದ್ದಾರೆ. ಉಡುಪಿಯ ಕೃಷ್ಣಮಠದ ಪಾರ್ಕಿಂಗ್‌ ಪ್ರದೇಶದಲ್ಲಿ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಗಳನ್ನು ಬಂಧಿಸಲಾಗಿದೆ.

ಉಡುಪಿ ಬಿಜೆಪಿ ಮುಖಂಡ, ಉದ್ಯಮಿ ಬೈಂದೂರಿನ ಗೋವಿಂದ ಬಾಬು ಪೂಜಾರಿ ಅವರಿಗೆ ಬೈಂದೂರಿನ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ 7 ಕೋಟಿ ರೂಪಾಯಿ ವಂಚನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಬೆಂಗಳುರಿನ ಬಂಟೇಪಾಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

MLA Ticket Fraud Police Arrest Chaitra Kundapur
Image Credit To Original Source

ಇದನ್ನೂ ಓದಿ : ಮ್ಯಾಟ್ರಿಮೋನಿ ಸೈಟ್‌ನಲ್ಲಿ ಯುವತಿಯ ಪರಿಚಯ : 1 ತಿಂಗಳಲ್ಲೇ ಸಾಫ್ಟ್‌ವೇರ್‌ ಇಂಜಿನಿಯರ್‌ಗೆ 1 ಕೋಟಿ ರೂಪಾಯಿ ವಂಚನೆ

ಇದೀಗ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಸಿಸಿಬಿ ಚೈತ್ರಾ ಕುಂದಾಪುರ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರು ಚೈತ್ರಾ ಕುಂದಾಪುರ ಸೇರಿದಂತೆ ಒಟ್ಟು 8 ಮಂದಿಯ ವಿರುದ್ದ ಪ್ರಕರಣ ದಾಖಲು ಮಾಡಿದ್ದರು.

ಪ್ರಕರಣ ದಾಖಲಾದ ಬೆನ್ನಲ್ಲೇ ಚೈತ್ರಾ ಕುಂದಾಪುರ ತಲೆ ಮರೆಯಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು. ಉದ್ಯಮಿ ಆಗಿರುವ ಗೋವಿಂದ ಬಾಬು ಪೂಜಾರಿ ಅವರು ಕಳೆದ ಬಾರಿಯ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿಯಾಗಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಚೈತ್ರಾ ಕುಂದಾಪುರ ಆಂಡ್‌ ಟೀಂ ನಕಲಿ ನಾಟಕವಾಡಿದೆ.

ಇದನ್ನೂ ಓದಿ : ಉಚಿತ ಬಸ್‌ ಪ್ರಯಾಣ : ಶಕ್ತಿಯೋಜನೆಯಡಿ ಮಹಿಳೆಯರು ಸ್ಮಾರ್ಟ್‌ ಕಾರ್ಡ್‌ ಮಾಡಿಸದಿದ್ರೆ ಉಚಿತ ಪ್ರಯಾಣ ರದ್ದು

ನಕಲಿ ಆರ್‌ಎಸ್‌ಎಸ್‌ ನಾಯಕನನ್ನು ಸೃಷ್ಟಿಸಿದ್ದ ಚೈತ್ರಾ ಕುಂದಾಪುರ ಮತ್ತು ತಂಡ ಹಂತ ಹಂತವಾಗಿ ಸುಮಾರು ಏಳು ಕೋಟಿ ರೂಪಾಯಿ ಹಣವನ್ನು ಪಡೆದುಕೊಂಡಿತ್ತು. ಆದರೆ ಚುನಾವಣೆ ಘೋಷಣೆಯಾದರೂ ಕೂಡ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್‌ ದೊರಕಿರಲಿಲ್ಲ. ಇದರ ಬೆನ್ನಲ್ಲೇ ಉದ್ಯಮಿ ವಂಚಕರ ವಿರುದ್ದ ದೂರು ನೀಡಿದ್ದಾರೆ.

MLA Ticket Fraud Police Arrest Chaitra Kundapur
Image Credit To Original Source

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರ್ ಅವರನ್ನು ನಿನ್ನೆ ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆಯನ್ನು ನಡೆಸಲಾಗುತ್ತಿದೆ.

ಇದನ್ನೂ ಓದಿ : ಸುನಿಲ್‌ ಕನುಗೋಳ್ ಸಮೀಕ್ಷೆಯಲ್ಲಿ ಪಾಸಾದ್ರೆ ಟಿಕೇಟ್: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಹೈಕಮಾಂಡ್ ಶಾಕ್

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯ್ಕ್ ಮತ್ತು ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಉಳಿದ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಒಟ್ಟಿನಲ್ಲಿ ಹೋಟೆಲ್‌ ಉದ್ಯಮದಲ್ಲಿ ಸಾಧನೆ ಮಾಡಿದ್ದ ಗೋವಿಂದ ಬಾಬು ಪೂಜಾರಿ ಹಣ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.

MLA Ticket Fraud Police Arrest Chaitra Kundapur

Comments are closed.