ಬೆಂಗಳೂರು : (Modi at Metro Show) ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಭರ್ಜರಿಯಾಗೇ ತಯಾರಿ ನಡೆಯುತ್ತಿದ್ದು, ಪ್ರಧಾನಿ ಮೋದಿ ಅವರು ಕೂಡ ರಾಜ್ಯದಲ್ಲಿ ಚುನಾವಣಾ ಪ್ರಚಾರ ಭರ್ಜರಿಯಾಗೇ ಮಾಡುತ್ತಿದ್ದಾರೆ. ಈಗಾಗಲೇ ಆರು ಬಾರಿ ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಇದೀಗ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಇದೇ ಮಾರ್ಚ್ 25 ರಂದು ರಾಜ್ಯಕ್ಕೆ ಬರಲಿರುವ ಪ್ರಧಾನಿ ಮೋದಿ ಅವರು ದಾವಣಗೆರೆ, ಚಿಕ್ಕಬಳ್ಳಾಪುರ, ಹಾಗೂ ಬೆಂಗಳೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮಾರ್ಚ್ 25 ರಂದು ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದು, ದಾವಣಗೆರೆಯಲ್ಲಿ ನಡೆಯುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆಎ. ಇದಾದ ಬಳಿಕ ಅದೇ ದಿನ ಬೆಂಗಳೂರಿನಲ್ಲಿ ಕೆ. ಆರ್. ಪುರಂ- ವೈಟ್ ಫೀಲ್ಡ್ ಮೆಟ್ರೊ ಮಾರ್ಗ ಲೋಕಾರ್ಪಣೆ ಮಾಡಲಿದ್ದು, ಅದರಲ್ಲಿ ಸಂಚಾರ ನಡೆಸಲಿದ್ದಾರೆ.
ಇನ್ನೂ ಇದೇ ಮಾರ್ಚ್ 27 ಅಥವಾ 29 ರಂದು ಕೂಡ ಮೋದಿ ಅವರು ರಾಜ್ಯಕ್ಕೆ ಆಗಮಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ವಿಧಾನಸೌಧ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ ಬಸವೇಶ್ವರ ಹಾಗೂ ಕೆಂಪೇಗೌಡ ಪುತ್ಥಳಿ ಅನಾವರಣಗೊಳಿಸಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿದೆ. ಕಳೆದ ಫೆ. ೨೭ ರಂದು ಪ್ರಧಾನಿ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿ ನಂತರ ಹಲವು ಕಡೆಗಳಲ್ಲಿ ರೋಡ್ ಶೋ ಕೂಡ ನಡೆಸಿದ್ದರು.
ಇದನ್ನೂ ಓದಿ : KPCL salary increase : ಸರ್ಕಾರಿ ನೌಕರರ ನಂತರ, ಎಸ್ಕಾಂಗಳು, ಕೆಪಿಸಿಎಲ್ ಸಿಬ್ಬಂದಿಗಳ ವೇತನ ಹೆಚ್ಚಳ
ಇದನ್ನೂ ಓದಿ : ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮಾ ಯೋಜನೆಯನ್ನು ನಿಲ್ಲಿಸಿದ ಕರ್ನಾಟಕ ಸರಕಾರ
ಇದನ್ನೂ ಓದಿ : ತುಳುನಾಡಿನ ಗುಳಿಗ ದೈವಕ್ಕೆ ಅವಮಾನ : ಗೃಹ ಸಚಿವ ಆರಗ ಹೇಳಿಕೆಗೆ ಬಾರೀ ಆಕ್ರೋಶ
Modi at Metro Show: Prime Minister Modi again for the state: Mon. Metro Show will be held on 25th