Monkey fox Virus fear : ಮಂಕಿಪಾಕ್ಸ್‌ ಭೀತಿ : ಕರ್ನಾಟಕದಲ್ಲಿ ಹೈ ಅಲರ್ಟ್‌, ಮಾರ್ಗಸೂಚಿ ಪ್ರಕಟ

ಬೆಂಗಳೂರು : ಹಲವು ದೇಶಗಳಲ್ಲಿ ಈಗಾಗಲೇ ಮಂಕಿಪಾಕ್ಸ್‌ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇದೀಗ ಕೋವಿಡ್‌ ವೈರಸ್‌ ಸೋಂಕಿನ ಭೀತಿಯ ನಡುವಲ್ಲೇ ಭಾರತದಲ್ಲಿಯೂ ಶಂಕಿತ ಮಂಕಿಪಾಕ್ಸ್‌ ಪ್ರಕರಣ (Monkey fox Virus fear) ಪತ್ತೆಯಾಗಿದೆ. ಕೇಂದ್ರ ಸರಕಾರದ ಸೂಚನೆಯ ಹಿನ್ನೆಲೆಯಲ್ಲಿ ಇದೀಗ ಕರ್ನಾಟಕದಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿಯನ್ನು ಹೊರಡಿಸಿದೆ. ಈ ಕುರಿತು ಆರೋಗ್ಯ ಸಚಿವ ಡಾ.ಸುಧಾಕರ್‌ ಅವರು ಟ್ವೀಟ್‌ ಮಾಡಿದ್ದಾರೆ.

ಮಂಕಿಪಾಕ್ಸ್‌ ರೋಗಕ್ಕೆ ಕಣ್ಗಾವಲು ಇಡುವ ಸಲುವಾಗಿ ಮಾರ್ಗಸೂಚಿಯನ್ನು ಹೊರಡಿಸಿದ್ದು, ಎಲ್ಲಾ ಜಿಲ್ಲೆಗಳಲ್ಲಿಯೂ ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಿದೆ. ಮಂಕಿಪಾಕ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಪ್ರಕರಣಗಳು ವರದಿಯಾದಾಗ ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ಸಲುವಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕನಿಷ್ಠ ಎರಡು ಹಾಸಿಗೆಗಳನ್ನು ಮೀಸಲಿಡುವಂತೆ ಜಿಲ್ಲಾಸ್ಪತ್ರೆಗಳ ಅಧೀಕ್ಷಕರಿಗೆ ಸೂಚನೆಯನ್ನು ನೀಡಲಾಗಿದೆ.

monkey fox Virus fear High Alert Karnataka Guidelines Release

ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಕನ್ನಡದ ಡಿಎಸ್‌ಓಗಳ ಸರ್ವೆಲೆನ್ಸ್‌ ಒಂದು ಭಾಗವಾಗಿ ವಿಮಾನ ನಿಲ್ದಾಣದ ಆರೋಗ್ಯ ಇಲಾಖೆಯ ಜೊತೆಗೆ ಸಮನ್ವಯ ಸಾಧಿಸಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್‌ ನಡೆಸಲು ತಿಳಿಸಲಾಗಿದೆ. ಅಲ್ಲದೇ ಒಂದೊಮ್ಮೆ ಪ್ರಯಾಣಿಕರಲ್ಲಿ ಶಂಕಿತ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾದ್ರೆ ಬೆಂಗಳೂರು, ಇಂದಿರಾನಗರ ಹಾಗೂ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಕಲ್ಪಿಸುವಂತೆ ಸೂಚಿಸಲಾಗಿದೆ.

ಶಂಕಿತ ಮಂಕಿಪಾಕ್ಸ್‌ ಪ್ರಕರಣ ಪತ್ತೆಯಾದ ಸಂದರ್ಭದಲ್ಲಿ ಮಾದರಿಗಳನ್ನು ಸಂಗ್ರಹಿಸಿ ಪುಣೆಯಲ್ಲಿರುವ ನ್ಯಾಷನಲ್‌ ಇನ್ಷ್ಟಿಟ್ಯೂಟ್‌ ಆಫ್‌ ವೈರಾಲಜಿ ಲ್ಯಾಬ್‌ಗೆ ಕಳುಹಿಸಿಕೊಡಲು ಸೂಚಿಸಲಾಗಿದೆ. ಇನ್ನು ಐಡಿಎಸ್‌ಪಿಯ ರಾಜ್ಯ ಕಣ್ಗಾವಲು ಅಧಿಕಾರಿ ಹಾಗೂ ಯೋಜನಾ ನಿರ್ದೇಶಕರಾದ ಡಾ.ಶ್ರೀನಿವಾಸ ಎನ್.‌ ಅವರನ್ನು ರಾಜ್ಯಮಟ್ಟದ ನೋಡಲ್‌ ಅಧಿಕಾರಿಯ ನ್ನಾಗಿ ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್‌ ಕುಮಾರ್‌ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : Norovirus : ಕೇರಳಕ್ಕೆ ಎಂಟ್ರಿಕೊಟ್ಟ ನೊರಾ ವೈರಸ್​ : ಪ್ರಾಥಮಿಕ ಶಾಲೆಯ ಇಬ್ಬರು ಮಕ್ಕಳಿಗೆ ಸೋಂಕು

ಇದನ್ನೂ ಓದಿ : Fourth Wave COVID India : ಕೋವಿಡ್‌ ವೈರಸ್‌ ಸೋಂಕು ದಿಢೀರ್‌ ಹೆಚ್ಚಳ : ಕರ್ನಾಟಕ ಸೇರಿ 5 ರಾಜ್ಯಗಳಿಗೆ ಕೇಂದ್ರದ ವಾರ್ನಿಂಗ್‌

monkey fox Virus fear High Alert Karnataka Guidelines Release

Comments are closed.