ಕರ್ನಾಟಕಕ್ಕೆ ಮುಂಗಾರು ಭರ್ಜರಿ ಎಂಟ್ರಿ : ಇನ್ನೂ ಮೂರು ದಿನ ಬಾರಿ ಮಳೆ ಎಚ್ಚರಿಕೆ

ಕರ್ನಾಟಕಕ್ಕೆ ಮುಂಗಾರು ಮಳೆ ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದೆ. ಜೂನ್ 11ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅದ್ರಲ್ಲೂ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕಕ್ಕೆ ಮುಂಗಾರು ಮಳೆ ಭರ್ಜರಿಯಾಗಿಯೇ ಎಂಟ್ರಿ ಕೊಟ್ಟಿದೆ. ಜೂನ್ 11ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಿಶೇಷ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಅದ್ರಲ್ಲೂ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತಿವೃಷ್ಟಿ, ರಸ್ತೆ ಸಂಚಾರ ವ್ಯತ್ಯಯ, ಮರಗಳು ಉರುಳುವಿಕೆ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವಂತಹ ಪರಿಸ್ಥಿತಿಗಳು ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಈಗಾಗಲೇ ಹಲವೆಡೆ ಮಳೆ ತನ್ನ ಅಬ್ಬರ ತೋರಿಸುತ್ತಿದ್ದು, ಕೆಲವು ಪ್ರದೇಶಗಳಲ್ಲಿ ಜನಜೀವನಕ್ಕೂ ಅಡಚಣೆ ಉಂಟಾಗಿದೆ. ಹೀಗಾಗಿ ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸನ್ನದ್ಧರಾಗಿರುವಂತೆ ಸೂಚನೆ ನೀಡಲಾಗಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ.

ಇನ್ನೊಂದೆಡೆ ಕೊಡಗು, ಹಾಸನ, ಹಾವೇರಿ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಕೂಡಾ ಉತ್ತಮ ಮಳೆಯ ನಿರೀಕ್ಷೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ದಾವಣಗೆರೆ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

Also Read:  ಜೂನ್ 11ರವರೆಗೆ ಭಾರಿ ಮಳೆ ಮುನ್ಸೂಚನೆ! 5 ಜಿಲ್ಲೆಗಳಿಗೆ ರೆಡ್ ಅಲರ್ಟ್

ವಿಶೇಷವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ತಂಡಗಳು ಈಗಾಗಲೇ ಸಜ್ಜಾಗಿವೆ. ಮುಂಗಾರು ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಯಾವುದೇ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಪಂದಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಗಮನಿಸಿ ನದಿ, ಹಳ್ಳ, ತಗ್ಗು ಪ್ರದೇಶಗಳು ಹಾಗೂ ಗುಡ್ಡಗಾಡು ಭಾಗಗಳಿಗೆ ಅನಗತ್ಯವಾಗಿ ತೆರಳದಂತೆ ಸಾರ್ವಜನಿಕರಿಗೆ ಸಲಹೆ ನೀಡಲಾಗಿದೆ. ಮೀನುಗಾರರು ಮತ್ತು ರೈತರು ಸಹ ಹವಾಮಾನ ಮಾಹಿತಿ ಗಮನಿಸಿ ತಮ್ಮ ಚಟುವಟಿಕೆಗಳನ್ನು ಯೋಜಿಸಿಕೊಳ್ಳುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Monsoon makes grand entry into Karnataka Rain warning issued for three more days

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories