Monsoon rains in Karnataka : ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು ಮಳೆ : ಇಂದು ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಣೆ

ಬೆಂಗಳೂರು : (Monsoon rains in Karnataka) ಜೂನ್‌ ತಿಂಗಳ ಆರಂಭದಲ್ಲಿ ಮುಂಗಾರು ಮಳೆ ವಿಳಂಬವಾಗಿದ್ದು, ರಾಜ್ಯದ ರೈತರ ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಮುಂಗಾರು ಮಳೆ ತಡವಾಗಿ ಬಂದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿಯುತ್ತಿದ್ದರಿಂದ ರೈತರಿಗೆ ಮೊಗದಲ್ಲಿ ಸಂತಸ ಮೂಡಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಸೇರಿದಂತೆ ಇತರ ಜಿಲ್ಲೆಗಳಲಲಿ ಉತ್ತಮ ಮಳೆಯಾಗಿದ್ದು, ರೈತರಲ್ಲಿ ಭರವಸೆ ಮೂಡಿಸಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ನಿನ್ನೆ ಪೂರ್ತಿ ದಿನ ಮೋಡ ಕವಿದ ವಾತಾವರಣದಿಂದ ಕೂಡಿದ್ದು, ರಾತ್ರಿ ಕೂಡ ಅಲ್ಲಲ್ಲಿ ಸಾಧಾರಣ ಮಳೆಯಾಗಿತ್ತು. ಆದರೆ ಇಂದು ಮುಂಜಾನೆಯಿಂದ ತುಂತುರು ಮಳೆಯಾಗುತ್ತಿದೆ. ಈಗಾಗಲೇ ಬಿತ್ತನೆ ಬೀಜವನ್ನು ಗೆದ್ದೆಗಳಿಗೆ ಹಾಕಿರುವುದರಿಂದ ಮೊಳಕೆಯೊಡೆದು ಹಸಿರಾಗಲು ಶುರುವಾಗಿದೆ. ಸದ್ಯ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದರಿಂದ ರೈತರು ತುಸು ನೆಮ್ಮದಿ ಕಂಡಿದ್ದಾರೆ.

ಇನ್ನು ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ನೀಡಿದೆ. ಜೂನ್‌ 23 ರಿಂದ 25ರವರೆಗೂ ಗುಡುಗು, ಮಿಂಚು, ಬಿರುಗಾಳಿ ಸಹಿತ ವ್ಯಾಪಾಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : KCET 2023 Counselling : KCET 2023 ಕೌನ್ಸೆಲಿಂಗ್ : ನೋಂದಣಿ ಪ್ರಕ್ರಿಯೆಗೆ ಅಗತ್ಯವಿರುವ ದಾಖಲೆಗಳ ವಿವರಕ್ಕಾಗಿ ಇಲ್ಲಿ ಕ್ಲಿಕ್ಕಿಸಿ

ಇದನ್ನೂ ಓದಿ : Mandya Murder Case : ಹೆತ್ತ ತಂದೆಯಿಂದಲೇ ಇಬ್ಬರು ಮಕ್ಕಳ ಹತ್ಯೆ: ಪತ್ನಿಗೆ ಮಾರಣಾಂತಿಕ ಹಲ್ಲೆ

ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕ್ರಮದಂತೆ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಮುದ್ರದ ತೀರ ಪ್ರದೇಶಗಳಲ್ಲಿ ವಾಸಿಸುವ ಜನರಿಗೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಸಮುದ್ರದಲ್ಲಿ ಭಾರೀ ಅಲೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರವಾಸಿಗರೂ ಸಮುದ್ರದ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.

Monsoon rains in Karnataka: Accelerated monsoon rains in the state: Yellow alert announced for many districts today

Comments are closed.