ರಾಜ್ಯದಲ್ಲಿ ತಣ್ಣಗಾಯ್ತು ವರುಣನ ಆರ್ಭಟ… ಕರಾವಳಿಯಲ್ಲಿನ್ನು ಒಣಹವೆಯ ಅಬ್ಬರ
Karnataka Weather Report: ರಾಜ್ಯದಲ್ಲಿ ವರುಣನ ಆರ್ಭಟ ಮತ್ತೆ ಶಾಂತಗೊಂಡಿದೆ. ಇಂದು ರಾಜ್ಯಾದ್ಯಂತ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದು ಒಣ ಹವೆ ಇರಲಿದೆ. ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಇರಲಿದೆ ಎನ್ನಲಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳ ವ್ಯಾಪ್ತಿಗೆ ಒಳಪಡುವ ತುಮಕೂರು, ಚಾಮರಾಜನಗರ,ಚಿಕ್ಕಮಗಳೂರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ಮಂಡ್ಯ, ಮೈಸೂರು, ಕೊಡಗು, ಹಾಸನ, , ದಾವಣಗೆರೆ, ಮತ್ತು ಶಿವಮೊಗ್ಗದಲ್ಲಿ ವರುಣನ ಆರ್ಭಟ ಶಾಂತವಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಹಾವೇರಿ, ಗದಗ , ಬೆಳಗಾವಿ,ಬಳ್ಳಾರಿ, ಬೀದರ್, ವಿಜಯಪುರ, ಬಾಗಲಕೋಟೆ, ,ರಾಯಚೂರುಮ, ಧಾರವಾಡ, ಕಲಬುರಗಿ, ಕೊಪ್ಪಳ, ಯಾದಗಿರಿ ಮತ್ತು ವಿಜಯನಗರದಲ್ಲಿ ಉಳಿದ ಜಿಲ್ಲೆಗಳಂತೆ ಒಣ ಹವೆ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಪಡಿತರ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಗಾಳಿಯ ವೇಗವು ಗಂಟೆಗೆ 5 ಕಿಲೋಮೀಟರ್ ಇರಲಿದ್ದು ಇಲ್ಲಿಯೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



