ಚಿಕ್ಕಮಗಳೂರು : ಕಾಡಾನೆ ದಾಳಿಯಿಂದ ಮಹಿಳೆಯೋರ್ವರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಹಾಗೂ ಸಂಬಂಧಿಕರು ಮಹಿಳೆಯ ಶವವಿಟ್ಟು ಅರಣ್ಯ ಇಲಾಖೆಯ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆಯಲ್ಲಿ ಸ್ಥಳಕ್ಕೆ ಬಂದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ (mudigere mla mp kumaraswamy) ಅವರ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಶಾಸಕರ ಶರ್ಟ್, ಬನಿಯನ್ ಹರಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕಾಡಾನೆ ದಾಳಿಯಿಂದ ಮಹಿಳೆ ಶೋಭಾ ಎಂಬವರು ಮೃತಪಟ್ಟಿದ್ದರು. ಪದೇ ಪದೇ ಕಾಡಾನೆಗಳ ಹಾವಳಿ ಈ ಭಾಗದಲ್ಲಿ ಮಿತಿಮೀರುತ್ತಿದ್ದು, ಜನರು ಆತಂಕದಿಂದ ಬದಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಗ್ರಾಮಸ್ಥರು, ಸಂಬಂಧಿಕರು, ಕಾಫಿ ಬೆಳೆಗಾರರು, ರೈತ ಮುಖಂಡರು ಸ್ಥಳಕ್ಕೆ ಜಮಾಯಿಸಿದ್ದು, ಅರಣ್ಯ ಇಲಾಖೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಜನಪ್ರತಿನಿಧಿಗಳು, ಸರಕಾರ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿಗಳು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮುಂದಾದ್ರೂ ಕೂಡ ಯಾವುದೇ ಪ್ರಯೋಜನವಾಗಿರಲಿಲ್ಲ.
ಸುಮಾರು 2 ಗಂಟೆ ಬಳಿಕ ಸ್ಥಳಕ್ಕೆ ಚಿಕ್ಕಮಗಳೂರು ಅರಣ್ಯ ವಿಭಾಗದ ಡಿಎಫ್‌ಒ ಕ್ರಾಂತಿ ಆಗಮಿಸಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ಈ ವೇಳೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾರಣ ನಿರ್ಮಾಣವಾಗಿತ್ತು. ಇನ್ನು ಮೃತದೇಹವನ್ನು ನೋಡಲು ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ಮೇಲೆ ಉದ್ರಿಕ್ತ ಜನರು ಹಲ್ಲೆ ನಡೆಸಿದ್ದಾರೆ.
ಪ್ರತಿಭಟನೆಯ ವೇಳೆಯಲ್ಲಿ ಬೇಕು ಅಂತ ಕೆಲವರು ಗುಂಪು ಮಾಡಿಕೊಂಡು ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ಕಳುಹಿಸಿದ್ದಾರೆ. ಸಂಚು ಮಾಡಿ ಹಲ್ಲೆ ಮಾಡಿದ್ರು. ನನ್ನನ್ನು ರಕ್ಷಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ನಾನು ಅಲ್ಲೇ ಇರ್ತಿದ್ದೆ ಪೊಲೀಸರು ಮಿಸ್‌ಗೈಡ್ ಮಾಡಿ ಹೊರಗೆ ಕಳುಹಿಸಿದ್ರು. ಸಾರ್ವಜನಿಕರ ಸೇವೆ ಮಾಡಲು ಇರೋರು ನಾವು. ಎಲ್ಲ ತಾಗ್ಯಕ್ಕೂ ರೆಡಿ ಇರ್ತೀವಿ. ಆ ಜಾಗ ಬಿಟ್ಟು ಕದಲ್ತಾ ಇರ್ಲಿಲ್ಲ ಎಂದು ಹರಿದ ಬಟ್ಟೆಯಲ್ಲಿಯೇ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : Chattisgarh murder: ಶೃದ್ಧಾ ಕೇಸ್ ನಂತೆ ಮತ್ತೊಂದು ಹೇಯ ಕೃತ್ಯ: ಗೆಳತಿಯನ್ನು ಕೊಂದು 4 ದಿನ ಮೆಡಿಕಲ್ ಶಾಪ್ ನಲ್ಲಿಟ್ಟ ಕ್ರೂರಿ
mudigere mla mp kumaraswamy beaten by chikkamagalur villagers for attack Elephants