Muslim Girls College: ರಾಜ್ಯದಲ್ಲಿ ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ಸ್ಥಾಪನೆ ಬಗ್ಗೆ ಚರ್ಚೆಯೇ ನಡೆದಿಲ್ಲ; ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು (Muslim Girls College) ಸ್ಥಾಪನೆಯ ಪ್ರಸ್ತಾಪದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಇಂಥ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜುಗಳನ್ನು ನಿರ್ಮಿಸುವ ಬಗ್ಗೆ ನಮ್ಮ ಸರ್ಕಾರದಲ್ಲಿ ಚರ್ಚೆಗಳು ನಡೆದಿಲ್ಲ. ಇದು ನಮ್ಮ ಸರ್ಕಾರದ ನಿಲುವು ಕೂಡಾ ಆಗಿಲ್ಲ. ಇಂಥ ಯಾವುದೇ ಪ್ರಸ್ತಾಪನೆಗಳಿದ್ದರೂ ವಕ್ಫ್ ಬೋರ್ಡ್ ಅಧ್ಯಕ್ಷರು ಖುದ್ದು ಬಂದು ನನ್ನ ಬಳಿ ಮಾತನಾಡಲಿ ಎಂದು ತಿಳಿಸಿದರು.

ವಕ್ಫ್ ಮಂಡಳಿಯ ಅಧ್ಯಕ್ಷರು ಏನು ಹೇಳಿದ್ದಾರೆ ಎಂಬುವುದು ನನಗೆ ಗೊತ್ತಿಲ್ಲ. ಅದು ಅವರ ವೈಯಕ್ತಿಕ ದೃಷ್ಟಿಕೋನ ಅಥವಾ ನಿಲುವು ಇರಬಹುದು. ಆದರೆ ನಮ್ಮ ಸರ್ಕಾರದ ನಿಲುವು ಖಂಡಿತಾ ಅಲ್ಲ. ವಕ್ಫ್ ಮಂಡಳಿಯು ತಮ್ಮ ಆಲೋಚನೆಗಳ ಬಗ್ಗೆ ನನ್ನೊಂದಿಗೆ ನೇರವಾಗಿ ಮಾತನಾಡಲಿ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Tomato Prices Down : ಟೊಮ್ಯಾಟೊ ಕೆಜಿಗೆ 3ರೂ. : ದಿನೇ ದಿನೇ ಬೆಲೆ ಕುಸಿತದಿಂದ ರೈತರಿಗೆ ಸಂಕಷ್ಟ

ಏನಿದು ಸುದ್ದಿ..?
ರಾಜ್ಯದಲ್ಲಿ ಮುಸ್ಲಿಂ ಯುವತಿಯರಿಗೆಂದೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಕ್ಫ್ ಬೋರ್ಡ್ ಸರ್ಕಾರ ನೀಡುವ ಅನುದಾನದಲ್ಲಿ ಪ್ರತಿ ಕಾಲೇಜಿಗೆ 2.5 ಕೋಟಿ ರೂ. ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ. ವಕ್ಫ್ ಬೋರ್ಡ್ ಮೂಲಕ ರಾಜ್ಯದ ಹಲವೆಡೆಗಳಲ್ಲಿ ಮುಸ್ಲಿಂ ಯುವತಿಯರಿಗೆಂದೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲಾಗುತ್ತಿದೆ. ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮುಸ್ಲಿಂರಿಗೆಂದೇ ಮಹಿಳಾ ಕಾಲೇಜು ಆರಂಭಿಸುವ ಬಗ್ಗೆ ಸಿಎಂ ಬಳಿ ಪ್ರಸ್ತಾಪ ಮಾಡಿದ್ದಾರೆ. ಈ ಹಿನ್ನೆಲೆ ಸಿಎಂ ಅವರು ಅತಿ ಶೀಘ್ರದಲ್ಲೇ ರಾಜ್ಯದಲ್ಲಿ ಪ್ರಥಮ ಮುಸ್ಲಿಂ ಯುವತಿಯರ ಕಾಲೇಜಿಗೆ ಚಾಲನೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು.

ಎಲ್ಲೆಲ್ಲಿ ಕಾಲೇಜು ಸ್ಥಾಪನೆ:
ದಕ್ಷಿಣ ಕನ್ನಡ ಜಿಲ್ಲೆಯ ಅಡ್ಯಾರ್ ಕಣ್ಣೂರಿನ 16 ಎಕರೆ ಜಾಗದಲ್ಲಿ ಮುಸ್ಲಿಂ ಯುವತಿಯರ ಕಾಲೇಜು ಸ್ಥಾಪನೆಗೆ ಜಾಗ ಗುರುತಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಮುಸ್ಲಿಂ ಜನರು ಹೆಚ್ಚಿರುವ ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕದ ಕೆಲವೆಡೆ ಕಾಲೇಜು ಸ್ಥಾಪನೆಗೆ ಉದ್ದೇಶಿಸಲಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಈ ಬಗ್ಗೆ ಹಲವರಿಂದ ತೀವ್ರ ಅಸಮಾಧಾನಗಳು ಕೇಳಿಬಂದಿದ್ದವು.

ಇದನ್ನೂ ಓದಿ: Assault by students: ಕನ್ನಡ ಬಾವುಟ‌ ಹಿಡಿದು ಕುಣಿದ ವಿದ್ಯಾರ್ಥಿಗೆ ಥಳಿತ : ಕಠಿಣ ಕ್ರಮಕ್ಕೆ ಕನ್ನಡ ಪರ ಸಂಘಟನೆಗಳ ಆಗ್ರಹ

Muslim Girls College: There was no discussion about establishing a separate college for Muslim girls in the state CM clarrified

Comments are closed.