ಮೈಸೂರು ದಸರಾ : ಜಂಬೂ ಸವಾರಿಗೆ ಕ್ಷಣಗಣನೆ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗುತ್ತಿದೆ. ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಜೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿ ಅರಮನೆಗಷ್ಟೇ ಸೀಮಿತವಾಗಲಿದ್ದು, ಈ ಬಾರಿ ಜಂಬೂಸವಾರಿ ಮೆರವಣಿಗೆ ಅರಮನೆಗೆ ಮಾತ್ರ ಸೀಮಿತವಾಗಿದ್ದು, 30 ರಿಂದ 40 ನಿಮಿಷಗಳ ಒಳಗೆ ಮುಗಿಯಲಿದೆ. ಅಲ್ಲದೇ ಜಂಬೂ ಸವಾರಿಯಲ್ಲಿ ಕೇವಲ 300 ಜನರಿಗೆ ಮಾತ್ರವೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.

ಇಂದು ಮಧ್ಯಾಹ್ನ 2.59ಕ್ಕೆ ಸಿಎಂ ಯಡಿಯೂರಪ್ಪ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯಲ್ಲಿ ವಿಶೇಷವಾಗಿ ಅಲಂಕೃತಗೊಂಡ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಈ ವೇಳೆ ಸಿಎಂ ಸೇರಿ ಆರು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ.

ಆಹ್ವಾನಿತರಿಗೆ ಮಾತ್ರ ಅರಮನೆ ಒಳಗಡೆ ಪ್ರವೇಶವಿದ್ದು, ಸಾರ್ವಜನಿಕರಿಗೆ ಅರಮನೆ ಪ್ರವೇಶ ಇರುವುದಿಲ್ಲ. ಜಂಬೂಸವಾರಿ ದಿನ ಅರಮನೆ ಸುತ್ತ ಇರುವ ಎಲ್ಲಾ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಇರುತ್ತದೆ.

ಜಂಬೂಸವಾರಿಯಲ್ಲಿ ಭಾಗವಹಿಸುವ ಕಲಾವಿದರು ವೀರಗಾಸೆ, ನಾದಸ್ವರ, ಸಾಂಸ್ಕೃತಿಕ ತಂಡ, ಅಶ್ವಪಡೆ, ಪೊಲೀಸ್ ಬ್ಯಾಂಡ್, ಒಂದು ಸ್ತಬ್ಧ ಚಿತ್ರದಲ್ಲಿ ಭಾಗವಹಿಸುವ ಜನರಿಗೆ ಮಾತ್ರ ಅರಮನೆ ಒಳಗೆ ಪ್ರವೇಶ ಇರುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಪ್ರವೇಶ ಅವಕಾಶವನ್ನು ನಿರ್ಬಂಧಿಸಲಾಗಿದೆ.

Comments are closed.