ಮೈಸೂರು ಡಿಸಿ ಕಚೇರಿಯಲ್ಲಿ ಈಜುಕೊಳ,‌ ಜಿಮ್ : ತನಿಖೆಗೆ ರಾಜ್ಯ ಸರಕಾರದ ಆದೇಶ

ಮೈಸೂರು : ಜಿಲ್ಲಾಧಿಕಾರಿ‌ ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ನಿರ್ಮಿಸಿರುವ ಈಜುಕೊಳ, ಜಿಮ್ ಇದೀಗ ವಿವಾದಕ್ಕೆ ಕಾರಣವಾಗಿದ್ದು, ತನಿಖೆ ನಡೆಸಿ 7 ದಿನದ ಒಳಗಾಗಿ ವರದಿ ಸಲ್ಲಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ 50 ಲಕ್ಷ ರೂ.ಗಳ ವೆಚ್ಚದಲ್ಲಿ ಒಳಾಂಗಣ ಈಜುಕೊಳ ಮತ್ತು ಜಿಮ್ ನಿರ್ಮಾಣ ಮಾಡುತ್ತಿರುವ ಕುರಿತು ವರದಿಗಳು ಬಿತ್ತರವಾಗಿದೆ. ಅಲ್ಲದೇ ಜಿಲ್ಲಾಧಿಕಾರಿಗಳ ಸರಕಾರಿ ನಿವಾಸವು ಪಾರಂಪರಿಕ ಕಟ್ಟಡವಾಗಿದ್ದು, ಯಾವುದೇ ಹೊಸ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿಲ್ಲ. ಹೀಗಾಗಿ ಜಿಲ್ಲಾಧಿಕಾರಿ ಗಳ ಕ್ರಮ ವಿವಾದಕ್ಕೆ ಕಾರಣವಾಗಿದೆ.

ಶಾಸಕ ಸಾ.ರಾ.ಮಹೇಶ್, ನಗರಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್, ತುಮಕೂರಿನ ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ಅವರು ಮೈಸೂರು ಜಿಲ್ಲಾಧಿಕಾರಿ ಗಳ ಅಧಿಕೃತ ನಿವಾಸ ವಾದ ಪಾರಂಪರಿಕ ಕಟ್ಟಡಕ್ಕೆ ಧಕ್ಕೆ ಉಂಟಾಗಿ ರುವ ಬಗ್ಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಉಪ ಕಾರ್ಯದರ್ಶಿ ಕೆ.ಎನ್.ಮೂರ್ತಿ ಅವರು ಮೈಸೂರು ಪ್ರಾದೇಶಿಕ ಆಯುಕ್ತರಿಗೆ ಆದೇಶಿಸಿದ್ದಾರೆ.

Comments are closed.