ಮೈಸೂರು ಗ್ಯಾಂಗ್‌ರೇಪ್‌ ಪ್ರಕರಣ : ಐವರು ಆರೋಪಿಗಳು ಅರೆಸ್ಟ್‌ ; ಕಾರ್ಯಾಚರಣೆ ಯಶಸ್ವಿ ಎಂದ ಗೃಹ ಸಚಿವರು

ಮೈಸೂರು : ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಈಗಾಗಲೇ ಐವರು ಆರೋಪಿಗಳನ್ನು ತಮಿಳುನಾಡಿನಲ್ಲಿ ವಶಕ್ಕೆ ಪಡೆಯಲಾಗಿದ್ದು, ಓರ್ವ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಈ ನಡುವಲ್ಲೇ ಗೃಹ ಸಚಿವರು ಪೊಲೀಸರ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದಿದ್ದಾರೆ.

ಅಗಸ್ಟ್‌ 24 ರಂದು ಮೈಸೂರು ನಗರದ ಹೊರವಲಯದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಪ್ರಕರಣದ ಬೆನ್ನಲ್ಲೇ ಆರೋಪಿಗಳು ತಲೆ ಮರೆಯಿಸಿ ಕೊಂಡಿದ್ದಾರೆ. ಎಲ್ಲಾ ಆರೋಪಿಗಳು ತಮಿಳುನಾಡಿನಲ್ಲಿ ತಲೆ ಮರೆಯಿಸಿಕೊಂಡಿದ್ದಾರೆನ್ನುವ ಮಾಹಿತಿಯ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ, ಇದೀಗ ತಮಿಳುನಾಡಿನಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ಪೈಕಿ ನಾಲ್ವರು ತಮಿಳುನಾಡು ಮೂಲದವರಾದ್ರೆ, ಇನ್ನೋರ್ವ ಚಾಮರಾಜನಗರ ಜಿಲ್ಲೆಯವನು ಎಂದು ತಿಳಿದುಬಂದಿದೆ. ಟೆಕ್ನಿಕಲ್‌ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯುವಕ, ಯುವತಿ ಮೂರ್ನಾಲ್ಕು ದಿನಗಳಿಂದಲೂ ನಿರಂತರವಾಗಿ ಒಂದೇ ಸ್ಥಳದಲ್ಲಿ ಕುಳಿತು ಮಾತನಾಡುತ್ತಿರುವುದನ್ನು ಗಮನಿಸಿದ ಆರೋಪಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಯನ್ನು ನೀಡಿದ್ದು, ಪೊಲೀಸರ ಕಾರ್ಯಾಚರಣೆ ಯಶಸ್ವಿಯಾಗಿದೆ. ಇನ್ನೆರಡು ಗಂಟೆಗಳಲ್ಲಿ ಎಲ್ಲಾ ಮಾಹಿತಿಯನ್ನು ನಿಮಗೆ ನೀಡುತ್ತೇವೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಅಥವಾ ಪೊಲೀಸ್‌ ಮಹಾನಿರ್ದೇಶಕರು ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ : ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ : ಪೊಲೀಸರ ಮುಂದೆ ಸಂತ್ರಸ್ತೆಯ ಸ್ನೇಹಿತನ ಹೇಳಿದ್ದೇನು ಗೊತ್ತಾ ?

ಇದನ್ನೂ ಓದಿ : ಟೆಕ್ನಿಕಲ್‌ ಸಾಕ್ಷ್ಯ ಲಭ್ಯ, ಶೀಘ್ರದಲ್ಲಿಯೇ ಆರೋಪಿಗಳ ಬಂಧನ : ಡಿಜಿ ಐಜಿಪಿ ಪ್ರವೀಣ್‌ ಸೂದ್‌

Comments are closed.