ಬೆಂಗಳೂರು: Nada Devi image: ನಾಡದೇವಿಯ ಪ್ರಮಾಣಿತ ಹಾಗೂ ಅಧಿಕೃತ ಭಾವಚಿತ್ರವನ್ನು ಜಾರಿಗೆ ತರುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಶಿಫಾರಸ್ಸು ಸಲ್ಲಿಸಲಾಗಿದೆ. ಲಲಿತ ಕಲಾ ಅಕಾಡೆಮಿ ಮಾಜಿ ಅಧ್ಯಕ್ಷ ಡಿ. ಮಹೇಂದ್ರ ನೇತೃತ್ವದ ಸಮಿತಿಯು ಈ ಶಿಫಾರಸ್ಸನ್ನು ಸಲ್ಲಿಸಿದೆ. ಈ ಶಿಫಾರಸ್ಸಿಗೆ ಸದ್ಯದಲ್ಲೇ ಸರ್ಕಾರದಿಂದ ಅಧಿಕೃತ ಮುದ್ರೆ ಬೀಳಲಿದೆ. ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಸ್ಥಾಪಿಸುವ ನಾಡದೇವಿ ಪ್ರತಿಮೆ ಕೂಡಾ ಇದೇ ಆಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದ ನಾಡದೇವತೆಯ ಚಿತ್ರವನ್ನು ವಿವಿಧ ಚಿತ್ರಪಟಗಳಲ್ಲಿ ವಿವಿಧ ರೀತಿಯಾಗಿ ಚಿತ್ರಿಸಿರಿವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಅವಶ್ಯಕವಾಗಿತ್ತು.ಈ ಹಿನ್ನಲೆಯಲ್ಲಿ ನಾಡದೇವತೆಯ ಪ್ರಮಾಣಿತ & ಅಧಿಕೃತ ಚಿತ್ರ ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಶ್ರೀ ಡಿ.ಮಹೇಂದ್ರರವರ pic.twitter.com/I6uJbjx4Xm
— Sunil Kumar Karkala (@karkalasunil) November 21, 2022
ಇದನ್ನೂ ಓದಿ: Police Constable Posts : ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನ
ಈವರೆಗೆ ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ವಿಭಿನ್ನ ರೀತಿಯಲ್ಲಿ ಕರ್ನಾಟಕ ಮಾತೆಯ ಚಿತ್ರಗಳನ್ನು ಬಳಸಲಾಗುತ್ತಿದೆ. ದುರ್ಗಾದೇವಿ, ಸರಸ್ವತಿ ಮೊದಲಾದ ದೇವಿಗಳ ಭಾವಚಿತ್ರವನ್ನು ನಾಡದೇವಿಯ ಭಾವಚಿತ್ರವಾಗಿ ಇಡಲಾಗುತ್ತಿದೆ. ಈ ನಿಟ್ಟಿನಲ್ಲಿ ಒಂದು ನಿರ್ದಿಷ್ಟ ಚಿತ್ರಕೃತಿಯ ಕೊರತೆ ಇರುವುದನ್ನು ಮನಗಂಡ ಸರ್ಕಾರವು ಒಂದು ನಿರ್ದಿಷ್ಟ ಚಿತ್ರವನ್ನು ಆಯ್ಕೆ ಮಾಡಲು ಚಿತ್ರ ಕಲಾವಿದರನ್ನೊಳಗೊಂಡ ಸಮಿತಿಯನ್ನು ರಚಿಸಿತ್ತು.
ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ ಚಿತ್ರದಲ್ಲಿ ಕರ್ನಾಟಕದ ಸಾಂಪ್ರಾದಾಯಿಕ ಕಲೆಯನ್ನು ಬಿಂಬಿಸುವಂಥ ಹಾಗೂ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಳಸಿಕೊಂಡು ಸಮಿತಿ ಸೂಚಿಸಿರುವಂತೆ ಕಲಾವಿದರಾದ ಸೋಮಶೇಖರ್ ಕೆ. ಅವರಿಗೆ ಚಿತ್ರ ಸಿದ್ಧಪಡಿಸಿ ಸಲ್ಲಿಸಲು ಕೋರಲಾಗಿತ್ತು. ಸಮಿತಿಯ ಶಿಫಾರಸ್ಸಿನಂತೆ ರಾಜ್ಯದ ನಾಡದೇವತೆಯ ಅಧಿಕೃತ ಭಾವಚಿತ್ರದಲ್ಲಿ ಈ ಕೆಳಗಿನ ಅಂಶಗಳನ್ನು ಅಳವಡಿಸಿಕೊಳ್ಳಲಾಗಿದೆ.
- ನಾಡದೇವತೆಯ ಹಿಂದೆ ಕರ್ನಾಟಕ ನಕ್ಷೆ ಇದೆ.
- ಮುಖದಲ್ಲಿ ಸ್ವಾಭಾವಿಕ ಸೌಂದರ್ಯ ಮತ್ತು ದೈವಿ ಭಾವ ಕಂಗೊಳಿಸಿದಂತಿದೆ.
- ದ್ವಿಭುಜ ಅಂದರೆ ಎರಡೂ ಕೈಗಳು ವಾಸ್ತವಿಕತೆಗೆ ಹತ್ತಿರವಾದಂತಿದೆ. ಬಲಗೈಯಲ್ಲಿ ಅಭಯ ಮುದ್ರೆ ಸಾಂಕೇತಿಕವಾಗಿ ರಕ್ಷಣೆ ನೀಡುತ್ತಿದ್ದರೆ, ಎಡಗೈಯಲ್ಲಿರುವ ತಾಳೆಗರಿ ಕನ್ನಡ ಭಾಷಾ ಸಂಪತ್ತು ಜ್ಞಾನ ಸಮೃದ್ಧಿಯನ್ನು ಪ್ರವಹಿಸುವ ನಿಟ್ಟನ್ನು ಸೂಚಿಸುತ್ತಿದೆ.
- ನಾಡದೇವಿಯು ಕುಳಿತಿರುವ ಭಂಗಿಯು ಭವ್ಯತೆಯನ್ನು ಹಾಗೂ ಸಾಕ್ಷ್ಯತೆಯನ್ನು ಪ್ರತಿಬಿಂಬಿಸುತ್ತಿದೆ.
- ಕರ್ನಾಟಕದ ಧ್ವಜ ಕನ್ನಡಾಭಿಮಾನದ ಸಂಕೇತವಾಗಿ ರಾರಾಜಿಸುತ್ತಿದೆ.
- ಹಸಿರು ಸೀರೆಯು ಸಿರಿ ಸಂಪದ ಸಮೃದ್ಧಿಯನ್ನು ಸೂಚಿಸುತ್ತಿದೆ.
- ಕರ್ನಾಟಕ ಭವ್ಯ ವೈಶಿಷ್ಟ್ಯವನ್ನು ಸಾರುವ ಆಭರಣಗಳು ನಾಡನ್ನು ಆಳಿದ ಸಾಮ್ರಾಜ್ಯಗಳ ವೈಭವವನ್ನು ಸಾರುತ್ತಿವೆ.
- ಚಾಲುಕ್ಯರ ಕಾಲದ ಕರಂಡ ಮುಕುಟೋಪಾದಿಯಲ್ಲಿ ಕಿರೀಟ, ಕಿವಿಯಲ್ಲಿ ಸುಂದರ- ಕೌಶಲ್ಯ ಕರ್ಣಪರ್ಯಗಳು, ಭುಜದ ಮೇಲೆ ಕರ್ನಾಟಕ ವೈಶಿಷ್ಟ್ಯದ ಸಿಂಹ ಲಾಂಛನ ಭುಜಕೀರ್ತಿಗಳು, ಕುತ್ತಿಗೆಯಲ್ಲಿ ಕಂಠಿ, ಕಟ್ಟಾಣಿ ಹಾರಗಳು, ಕರ್ನಾಟಕ ಲಾಂಛನ- ಗಂಡ ಭೇರುಂಡ ಪದಕ ಕಟಿಯ ಆಭರಣವಾದ ಬೆಳ್ಳಿಯ ಡಾಬು, ಕಟಿಯಲ್ಲಿ ಕೀರ್ತಿಮುಖ ಲಾಂಛನದ ವಡ್ಯಾಣ ಉದ್ದನೆಯ ವೈಜಯಂತಿ ಹಾರ ನಡುವೆ ಹೊಯ್ಸಳ ಲಾಂಛನದ ಪದಕ ನಾಡದೇವತೆಯನ್ನು ಅಲಂಕರಿಸಿದೆ.
- ಕಾಲಿನಲ್ಲಿ ಕಡಗ, ಋಳಿ ಮತ್ತು ಕಾಲುಂಗುರ, ಹಣೆಯ ಲಲಾಟ ತಿಲಕ, ಶಿರದಲ್ಲಿ ಮುಡಿದಿರುವ ಹೂ ಸೌಭಾಗ್ಯ ದ್ಯೋತಕಗಳಾಗಿವೆ. ತೆಳುವಾದ ಮೃದುವಾದ ಹೂವಿನ ತೋಮಾಲೆಯು ನಾಡದೇವತೆಯ ಸಂಪೂರ್ಣ ಅಲಂಕಾರದ ಮೆರುಗನ್ನು ಮತ್ತಷ್ಟು ಹೆಚ್ಚಿಸಿದೆ. ಕೆಳಗೆ ಸುಂದರ ತಾವರೆ (ಕಮಲ) ಹೂ ದೇವಿಯ ಮೃದುವಾದ ಕಾಲುಗಳಿಗೆ ಆಸರೆ ನೀಡಿದೆ.
- ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟ ಸಸ್ಯಕಾಶಿಯ ಸೊಬಗು ಬಿಂಬಿಸಲಾಗಿದೆ.
ಇದನ್ನೂ ಓದಿ: Job Opportunity:ಪಿಹೆಚ್‌ಡಿ ಪೂರ್ಣಗೊಳಿಸಿದವರಿಗೆ ಇಲ್ಲಿದೆ ಉದ್ಯೋಗಾವಕಾಶ
Nada Devi image: Nada Devi’s portrait is authentic the government seal is pending to the committee’s recommendation