ಶನಿವಾರ, ಏಪ್ರಿಲ್ 26, 2025
Homedistrict NewsHeat wave Alert : ಉಡುಪಿ ಜಿಲ್ಲೆಯಲ್ಲಿ 3 ತಿಂಗಳು ಬಿಸಿ ಅಲೆ : ಜಿಲ್ಲಾಧಿಕಾರಿಗಳ...

Heat wave Alert : ಉಡುಪಿ ಜಿಲ್ಲೆಯಲ್ಲಿ 3 ತಿಂಗಳು ಬಿಸಿ ಅಲೆ : ಜಿಲ್ಲಾಧಿಕಾರಿಗಳ ಎಚ್ಚರಿಕೆ

ಉಡುಪಿ ಜಿಲೆಯಲ್ಲಿ ಬಿಸಿ ಶಾಖದ ಮಾರುತಗಳು ಬೀಸಲಿವೆ ಎಂದು ಕುರಿತು ಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ. ಸಾರ್ವಜನಿಕರಿಗೆ ಈ ಮಾಹಿತಿಯನ್ನು ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆಯಿದೆ.

- Advertisement -

ಉಡುಪಿ : ಮಾರ್ಚ್‌ ಎಪ್ರಿಲ್‌ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ಶಾಖದ ಮಾರುತ (Heat wave Alert) ಗಳು ಬೀಸಲಿವೆ. ಇದರಿಂದಾಗಿ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ವಿಪರೀತ ಬಿಸಿಲ ಶಾಖ ಹೆಚ್ಚಲಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ (Udupi DC Vidhya Kumari) ಅವರು ಸೂಚನೆ ನೀಡಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪದ ಬಗ್ಗೆ ಹವಾಮಾನ ಇಲಾಖೆಯು ನೀಡುವ ಮಾಹಿತಿಯನ್ನು ಜನರಿಗೆ ತಲುಪಿಸಿ, ಜನರು ರಕ್ಷಣೆ ಪಡೆಯುವ ಹಾಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಉಡುಪಿ ಜಿಲೆಯಲ್ಲಿ ಬಿಸಿ ಶಾಖದ ಮಾರುತಗಳು ಬೀಸಲಿವೆ ಎಂದು ಕುರಿತು ಹವಾಮಾನ ಇಲಾಖೆ ವರದಿ ಮಾಹಿತಿ ನೀಡಿದೆ. ಸಾರ್ವಜನಿಕರಿಗೆ ಈ ಮಾಹಿತಿಯನ್ನು ತಲುಪಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಬೇಕು. ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆಯಿದೆ.

Next 3-month heat wave Alert in Udupi district DC Vidhya Kumari Warning
Image Credit to Original SOurce

ಈ ಮಾಹೆಯಲ್ಲಿ ಉಡುಪಿ ಜಿಲ್ಲೆಯ ಯಾವುದೇ ಭಾಗದಲ್ಲಿನ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು. ಅಗತ್ಯ ಕ್ರಮಗಳನ್ನು ಇಂದಿನಿಂದಲೇ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅವರು ಮಾಹಿತಿ ನೀಡಿದ್ದಾರೆ.

ಕಳೆದ ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದ್ದು, ಮಳೆಯಿಂದ ಹಾನಿಗೆ ಒಳಗಾಗಿರುವ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ದುರಸ್ಥಿಯ ಕಾರ್ಯಗಳನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸಬೇಕು. ಮಳೆಯಿಂದ ಹಾನಿಗೆ ಒಳಗಾಗಿರುವ ರಸ್ತೆಯ ಗುಂಡಿ ಮುಚ್ಚುವ ಕಾರ್ಯದ ಜೊತೆಗೆ ಹೊಸ ಡಾಂಬರೀಕರಣ ಕಾಮಗಾರಿಗಳನ್ನು ತುರ್ತಾಗಿ ಮುಗಿಸುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ : ಗೃಹಲಕ್ಷ್ಮೀ, ಶಕ್ತಿ ಯೋಜನೆ , ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗೆ ಹೊಸ ರೂಲ್ಸ್‌ ..!

ಮುಂಬರುವ ಮಳೆಗಾಲದಲ್ಲಿ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ನಗರ ಸಂಸ್ಥೆ ಹಾಗೂ ಸ್ಥಳೀಯ ಸಂಸ್ಥೆಗಳು ಸ್ವಚ್ಚತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಂಬಗಳು, ಟ್ರಾನ್ಸ್‌ ಫಾರ್ಮರ್‌ ಜೊತೆಗೆ ಹಾನಿಗೆ ಒಳಗಾಗಿರುವ ವಿದ್ಯುತ್‌ ತಂತಿಗಳನ್ನು ಬದಲಾಯಿಸುವಂತೆ ಸೂಚಿಸಿದ್ದಾರೆ.

Next 3-month heat wave Alert in Udupi district DC Vidhya Kumari Warning
Image Credit to Original SOurce

ಪ್ರತೀ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಹಂತದಲ್ಲಿ ವಿಪತ್ತು ನಿರ್ವಹಣೆ ಯೋಜನೆಯನ್ನು ಸಿದ್ದಪಡಿಸಬೇಕು. ಜಿಲ್ಲೆಯಲ್ಲಿ ಕಡಲಕೊರೆತ ಕಾಮಗಾರಿಗೆ ಅಗತ್ಯವಿರುವ 115 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಲು ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : Summer Holiday : ಏಪ್ರಿಲ್ 1 ರಿಂದಲೇ ಶಾಲೆಗಳಿಗೆ ಬೇಸಿಗೆ ರಜೆ

ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಬೀದ್ ಗದ್ಯಾಳ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ಉಡುಪಿ ನಗರಸಭೆ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮುಂತಾದವರು ಉಪಸ್ಥಿತರಿದ್ದರು.

Next 3-month heat wave Alert in Udupi district DC Vidhya Kumari Warning

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular