ಕಾರವಾರ : SDPI leader arrested : ದೇಶದಲ್ಲಿ ಹಿಂದೂ ಮುಖಂಡರ ಹತ್ಯೆಯಲ್ಲಿ ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಯ ಕೈವಾಡ ಇರುವ ಹಿನ್ನೆಲೆಯಲ್ಲಿ ದೇಶದಲ್ಲಿ ಹಲವು ಕಡೆಗಳಲ್ಲಿ ಎನ್ಐಎ ಇಂದು ಏಕಕಾಲದಲ್ಲಿ ದಾಳಿ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನೂ ಕೈಗೆತ್ತಿಕೊಂಡಿರುವ ಎನ್ಐಎ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್ಐ ಕಚೇರಿ ಮೇಲೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದೆ. ಇದರ ಜೊತೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿಯೂ ಎನ್ಐಎ ಹಾಗೂ ಐಬಿ ತಂಡದಿಂದ ದಾಳಿ ನಡೆದಿದೆ.
ಎನ್ಐಎ ಅಧಿಕಾರಿಗಳು ಪಿಎಫ್ಐ ಅಧ್ಯಕ್ಷ ಎಜಾಜ್ ಅಲಿಯನ್ನು ಬಂಧಿಸಿದ್ದಾರೆ. ಎಜಾಜ್ ಅಲಿಯನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ. ಪೊಲೀಸರು ಎಜಾಜ್ ಅಲಿಯನ್ನು ಬಂಧಿಸುವ ಸಂದರ್ಭದಲ್ಲಿ ಪಿಎಫ್ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗಳಿಗೆ ಕ್ಯಾರೆ ಎನ್ನದ ಪೊಲೀಸರು ಎಜಾಜ್ ಅಲಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಎನ್ಐಎ ಬಂಧನದ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರತ್ತ ಕೈ ಬೀಸಿ ಪಿಎಫ್ಐ ಅಧ್ಯಕ್ಷ ಎಜಾಜ್ ಅಲಿ ಪೊಲೀಸರ ಜೊತೆ ತೆರಳಿದ್ದಾರೆ.
ಶಿರಸಿ ತಾಲೂಕಿನ ಟಿಪ್ಪು ನಗರದಲ್ಲಿ ಸ್ಥಳೀಯ ಪೊಲೀಸರ ಸಹಾಯದಿಂದ ಎನ್ಐಎ ಹಾಗೂ ಐಬಿ ದಾಳಿ ನಡೆಸಿದೆ. ದಾಳಿಯ ಸಂದರ್ಭದಲ್ಲಿ ಓರ್ವ ಎಸ್ಡಿಪಿಐ ಮುಖಂಡನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಸ್ಡಿಪಿಐ ಮುಖಂಡ ಹಝೀಜ್ ಅಬ್ದುಲ್ ಶುಕುರ್ ಹೊನ್ನಾವರನನ್ನು ವಶಕ್ಕೆ ಪಡೆಯಲಾಗಿದೆ. ಇಂದು ಮುಂಜಾನೆ ಆರು ಗಂಟೆ ಸುಮಾರಿಗೆ ಅಝೀಜ್ ಅಬ್ದುಲ್ ಮನೆ ಮೇಲೆ ದಾಳಿ ನಡೆಸಿದೆ. ದಾಳಿ ಸಂದರ್ಭದಲ್ಲಿ ಲ್ಯಾಪ್ಟಾಪ್, 2 ಮೊಬೈಲ್, ಪುಸ್ತಕ ಹಾಗೂ ಸಿಡಿಯನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಅಝೀಝ್ ಸಹೋದರ ಮೌಸಿನ್ ಅಬ್ದುಲ್ ಶುಕುರ್ ಹೊನ್ನಾವರ ಎಂಬಾತನನ್ನು ವಶಕ್ಕೆ ಪಡೆಯಲು ಯೋಜನೆ ಹಾಕಲಾಗಿದೆ. ಎಸ್ಡಿಪಿಐ ಪ್ರಾಂತೀಯ ಅಧ್ಯಕ್ಷನಾದ ಮೌಸಿನ್ ಮನೆಯಲ್ಲಿ ಇರದ ಕಾರಣ ಆತನ ಅಣ್ಣನ ವಶಕ್ಕೆ ಪಡೆದಿದ್ದಾರೆ. ಖಾಸಗಿ ಕಾರಿನಲ್ಲಿ ಅಝೀಜ್ನನ್ನು ಕೂರಿಸಿಕೊಂಡ ಅಧಿಕಾರಿಗಳು ಗುಪ್ತ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಝೀಜ್ ತನ್ನ ಮನೆಯ ಗೋಡೆಯಲ್ಲಿ ರಿಜೆಕ್ಟ್ ಸಿಎಂ ಹಾಗೂ ಎನ್ಐಎ ಎಂದು ಬರೆದುಕೊಂಡಿದ್ದ. ಸಹೋದರರಿಬ್ಬರು ರಾಷ್ಟ್ರವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಕೇಂದ್ರ ತನಿಖಾ ದಳ ಈ ದಾಳಿಯನ್ನು ನಡೆದಿದೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು, ಉತ್ತರ ಪ್ರದೇಶ ಸೇರಿದಂತೆ ಹಲವು ಕಡೆ ದಾಳಿ ನಡೆದಿದ್ದು ಎನ್ಐಎ ನಡೆಸಿರುವ ಅತಿ ದೊಡ್ಡ ದಾಳಿ ಇದಾಗಿದೆ. 200ಕ್ಕೂ ಹೆಚ್ಚು ಅಧಿಕಾರಿಗಳು ಈ ಮೆಗಾ ಆಪರೇಷನ್ ನಲ್ಲಿ ಭಾಗಿಯಾಗಿದ್ದು, ಎಲ್ಲೆಡೆ ಭಾರಿ ಶೋಧ ಕಾರ್ಯಾಚರಣೆ ನಡೆಸಲಾಗ್ತಿದೆ. ಎನ್ಐಎ ಜೊತೆ ಕೆಲವೆಡೆ ಇಡಿ ಸಹ ದಾಳಿ ನಡೆಸಿದೆ ಅಂತಾ ಮೂಲಗಳು ತಿಳಿಸಿವೆ.
ಇದನ್ನು ಓದಿ : NIA Raid across India: ಮಂಗಳೂರು ಸೇರಿದಂತೆ ದೇಶಾದ್ಯಂಥ NIA ಮೆಗಾ ರೇಡ್
ಇದನ್ನೂ ಓದಿ : PAYCM ಅಭಿಯಾನ ; ಕಾಂಗ್ರೆಸ್ ನಿಂದ PAYTM ಅಧಿಕೃತ ಟ್ರೇಡ್ ಮಾರ್ಕ್ ಉಲ್ಲಂಘನೆ ?
NIA Talash in Uttara Kannada’s Shirsi: SDPI leader arrested