NPS to OPS : ಕರ್ನಾಟಕ ರಾಜ್ಯ ಸರಕಾರಿ ನೌಕರರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಹಲವು ವರ್ಷಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಸರಕಾರ ಮಣಿದಿದ್ದು, ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಗೆ (Old Pension Scheme) ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಸರಕಾರಿ ಹೊಸ ಪಿಂಚಣಿ ಯೋಜನೆಯನ್ನು (National Pension Scheme) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಅಧಿಕೃತ ಆದೇಶ ಹೊರಬಿದ್ದಿದೆ.

ಕರ್ನಾಟಕ ಸರಕಾರದ ಆರ್ಥಿಕ ಇಲಾಖೆಯ ಉಪ ಕಾರ್ಯದರ್ಶಿ ಅವರು ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ. 01.04.2006 ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಷರತ್ತುಗಳಿಗೆ ಒಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೆನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿದೆ ಎಂಬುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಯುವನಿಧಿಗೆ ಸಲ್ಲಿಕೆಯಾದ ಅರ್ಜಿಗಳೆಷ್ಟು ? ಜಿಲ್ಲಾವಾರು ಅಂಕಿ-ಅಂಶ ಇಲ್ಲಿದೆ
ಎಲ್ಲಾ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಒಳಪಡಿಸಿ : ಎನ್‌ಪಿಎಸ್ ಉಡುಪಿ ಜಿಲ್ಲಾ ಸಂಘ ಆಗ್ರಹ
ಹೊಸ ಪಿಂಚಣಿ ಯೋಜನೆಯನ್ನು ರದ್ದು ಪಡಿಸಿ ಹೊಸ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿರುವುದನ್ನು ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕ ಸ್ವಾಗತಿಸಿದೆ. ಆದರೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯ ಜಾರಿಗೆ ಸರಕಾರಿ ಎನ್‌ಪಿಎಸ್ ನೌಕರರ ಸಂಘ ಕಳೆದ ಹತ್ತು ವರ್ಷಗಳಿಂದಲೂ ಹೋರಾಟ ನಡೆಸುತ್ತಿದೆ.

ಇದರ ಫಲವಾಗಿಯೇ ಇಂದು ರಾಜ್ಯ ಸರಕಾರ ಎನ್‌ಪಿಎಸ್ ರದ್ದು ಮಾಡಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡಿದೆ. ಆದರೆ ರಾಜ್ಯ ಸರಕಾರ ಚುನಾವಣೆಗೂ ಪೂರ್ವದಲ್ಲಿ ನೀಡಿರುವ ಭರವಸೆಯಂತೆ ಎಲ್ಲಾ ಸರಕಾರಿ ಎನ್‌ಪಿಎಸ್ ನೌಕರರನ್ನು ಹಳೆ ಪಿಂಚಣಿ ಯೋಜನೆಗೆ ಒಳಪಡಿಸಬೇಕು ಎಂದು ಸರಕಾರಿ ಎನ್‌ಪಿಎಸ್ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕ ಆಗ್ರಹಿಸಿದೆ.
ಸರಕಾರದ ಹೊಸ ಆದೇಶದಲ್ಲೇನಿದೆ ?
- 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿಂದಿನ ಡಿಫೆನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಇಚ್ಛಿಸಿದಲ್ಲಿ ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾಂಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ, ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒಂದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ.
- ಒಂದು ಬಾರಿ ಮಾಡಿಕೊಂಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ.
Image Credit to Original Source - ಮೇಲಿನ 1 ರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾಂಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಮುಂದುವರೆಯುತ್ತಾರೆ.
- ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು
Image Credit to Original Source - ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪುಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು
- 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ನಯ ಆಯ್ಕೆಯಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನಂತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ ಮನವಿಯನ್ನು ಹಿಂದಿನ ನೇಮಕಾತಿ ಪ್ರಾಧಿಕಾರಕ್ಕೆ ದಿನಾಂಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು, ನೇಮಕಾತಿ ಪ್ರಾಧಿಕಾರವು ಅಂತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊಂದಿರುವುದನ್ನು ಖಚಿತಪಡಿಸಿಕೊಂಡು ಮೇಲಿನ ಕ್ರಮ ಸಂಖ್ಯೆ (4) ರಂತೆ ಪರಿಶೀಲಿಸಿ ಮೇಲಿನ ಕ್ರಮ ಸಂಖ್ಯೆ (5) ರಂತೆ ಮುಂದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು ಎಂಬುದಾಗಿ ತಿಳಿಸಿದ್ದಾರೆ.
Image Credit to Original Source
ಇದನ್ನೂ ಓದಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ : ರೈತರಿಗೆ ಸಿಗಲಿದೆ ದುಪ್ಪಟ್ಟು ಹಣ
NPS to OPS – Implementation of Old Pension Scheme, Official order from Government of Karnataka