ಶಾಸಕ ಎನ್ ವೈ ಗೋಪಾಲಕೃಷ್ಣ ಬಿಜೆಪಿಗೆ ರಾಜೀನಾಮೆ : ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಬೆಂಗಳೂರು : (NY Gopalakrishna resigns BJP) ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ಕೂಡ್ಲಿಗಿ ಬಿಜೆಪಿ ಶಾಸಕ ಎನ್ ವೈ ಗೋಪಾಲಕೃಷ್ಣ ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ರಾಜಿಮಾನೇ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಗೋಪಾಲಕೃಷ್ಣ ಅವರು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ವರದಿಗಳ ಪ್ರಕಾರ ಅವರು ಇತ್ತೀಚೆಗೆ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರಾದ ಡಿ ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಗೋಪಾಲಕೃಷ್ಣ ಅವರು ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದರು ಮತ್ತು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ (1997, 1999, 2004 ಮತ್ತು 2008) ಆಯ್ಕೆಯಾಗಿದ್ದರು.

2018ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ಮೊಳಕಾಲ್ಮುರು ಬದಲು ವಿಜಯನಗರ ಜಿಲ್ಲೆಯ ಕೂಡ್ಲಿಗಿಯಿಂದ ಹಿರಿಯ ನಾಯಕ ಶ್ರೀರಾಮುಲು ಅವರನ್ನು ಕಣಕ್ಕಿಳಿಸಿದ್ದರಿಂದ ಪಕ್ಷ ಅವರಿಗೆ ಟಿಕೆಟ್ ನೀಡಿದ್ದು, ಅಲ್ಲಿ ಗೆಲುವು ಕಂಡಿದ್ದರು.

ಇದನ್ನೂ ಓದಿ : Health department guidelines for elections: ಸದ್ದಿಲ್ಲದೇ ಏರುತ್ತಿದೆ ಕೊರೋನಾ ಸಂಖ್ಯೆ: ಚುನಾವಣೆಗೂ ಆರೋಗ್ಯ ಇಲಾಖೆ ಗೈಡ್ ಲೈನ್ಸ್ ರಿಲೀಸ್

ಇದನ್ನೂ ಓದಿ : Karnataka Election ticket Fight :ಸಿದ್ಧರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ : ನಿರ್ಧಾರಕ್ಕೆ ಬಿಜೆಪಿಯಲ್ಲೇ ಶುರುವಾಯ್ತು ವಿರೋಧ

ಈ ತಿಂಗಳ ಆರಂಭದಲ್ಲಿ ಬಿಜೆಪಿಯ ಇಬ್ಬರು ಎಂಎಲ್‌ಸಿಗಳಾದ ಪುಟ್ಟಣ್ಣ ಮತ್ತು ಬಾಬುರಾವ್ ಚಿಂಚನಸೂರ್ ಅವರು ತಮ್ಮ ವಿಧಾನ ಪರಿಷತ್ ಸದಸ್ಯತ್ವವನ್ನು ತೊರೆದು ಕಾಂಗ್ರೆಸ್ ಸೇರಿದ್ದರು. ಮಾರ್ಚ್ 27 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ (ಗುಬ್ಬಿ ಶ್ರೀನಿವಾಸ್ ಅಲಿಯಾಸ್ ವಾಸು) ಗುರುವಾರ ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್ ಸೇರಲು ಇಚ್ಛಿಸುವವರ ದೊಡ್ಡ ಪಟ್ಟಿಯೇ ಇದ್ದು, ಮುಂದಿನ ದಿನಗಳಲ್ಲಿ ಅದನ್ನು ಹಂತ ಹಂತವಾಗಿ ತಿಳಿಸಲಾಗುವುದು ಎಂದು ಶಿವಕುಮಾರ್ ಹೇಳಿದ್ದಾರೆ.

NY Gopalakrishna resigns BJP: MLA NY Gopalakrishna resigns from BJP: Congress likely to join

Comments are closed.