Objection to free bus pass : ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ : ಸರಕಾರದ ಆದೇಶಕ್ಕೆ ಕೆಎಸ್‌ಆರ್‌ಟಿಸಿ ಆಕ್ಷೇಪ

ಬೆಂಗಳೂರು : (Objection to free bus pass) ರಾಜ್ಯ ಸರಕಾರ ಮಹಿಳೆಯರಿಗಾಗಿ ರಾಜ್ಯದಾದ್ಯಂತ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಒದಗಿಸುವ ನಿಟ್ಟಿನಲ್ಲಿ ಶಕ್ತಿಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಜೂನ್‌ 11ರಂದು ರಾಜ್ಯದಾದ್ಯಂತ ಶಕ್ತಿ ಯೋಜನೆ ಜಾರಿಗೆ ಬರಲಿದೆ. ಆದರೆ ಯೋಜನೆ ಜಾರಿಗೆ ಮೊದಲೇ ಸರಕಾರದ ಆದೇಶದ ವಿರುದ್ದ ಇದೀಗ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಅಪಸ್ವರ ಎತ್ತಿದ್ದಾರೆ.

ಶಕ್ತಿ ಯೋಜನೆಯ ಮೂಲಕ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ನೈರುತ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕಾಗಿ ಅನುಕೂಲಕ ಕಲ್ಪಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಆದರೆ ಶಕ್ತಿ ಯೋಜನೆಯ ಜಾರಿಯ ಹೊತ್ತಲೇ ಬಸ್ಸುಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡುವಂತೆ ಆದೇಶ ಹೊರಡಿಸಿದೆ. ಆದರೆ ಈ ಆದೇಶ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಆತಂಕಕ್ಕೆ ಕಾರಣವಾಗಿದೆ.

ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದ ಹಾದಿಯಲ್ಲಿವೆ. ಇದೀಗ ಶೇ.೫೦ರಷ್ಟು ಸೀಟುಗಳನ್ನು ಮಹಿಳೆಯರಿಗೆ ಮೀಸಲು ಇಡುವುದರಿಂದ ಬಸ್ಸುಗಳಿಗೆ ಇನ್ನಷ್ಟು ನಷ್ಟವಾಗುವ ಸಾಧ್ಯತೆಯಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಬಿಎಂಟಿಸಿ ಬಸ್ಸುಗಳಲ್ಲಿ ಯಾವುದೇ ರೀತಿಯಲ್ಲಿಯೂ ಮೀಸಲು ವ್ಯವಸ್ಥೆಯಿಲ್ಲ ಹೀಗಾಗಿ ಉಳಿದ ಸಂಸ್ಥೆಗಳ ಬಸ್ಸುಗಳಲ್ಲಿಯೂ ನೀಡಲಾಗಿರುವ ಮೀಸಲಾತಿಯನ್ನು ತೆಗೆದು ಹಾಕಬೇಕೆಂಬ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಆರೋಗ್ಯ ಇಲಾಖೆಗೆ ಮೇಜರ್‌ ಸರ್ಜರಿ : 108 ಅಂಬ್ಯುಲೆನ್ಸ್‌ ಟೆಂಡರ್‌ ರದ್ದು

ಶಕ್ತಿಯೋಜನೆಯ ಮೂಲಕ ಮಹಿಳೆಯರು ಸಾಮಾನ್ಯ ಬಸ್ಸುಗಳಲ್ಲಿ ಪ್ರಯಾಣ ಬೆಳೆಸಬಹುದಾಗಿದೆ. ಆದರೆ ರಾಜಹಂಸ, ಸ್ಲೀಪರ್‌, ಎಸಿ, ಐರಾವತ ಸೇರಿದಂತೆ ಐಶಾರಾಮಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಿಲ್ಲ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶವನ್ನು ನೀಡಲಾಗುತ್ತಿದೆ. ಶಕ್ತಿ ಯೋಜನೆ ಇದೀಗ ದೇಶದ ಗಮನ ಸೆಳೆದಿದೆ. ಈ ಯೋಜನೆಗೆ ಶಕ್ತಿ ಸ್ಮಾರ್ಟ್‌ ಕಾರ್ಡ್‌ ಕೂಡ ವಿತರಿಸುವುದಾಗಿ ಹೇಳಿದ್ದು, ಮೂರು ತಿಂಗಳ ಒಳಗಾಗಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರು ಶಕ್ತಿ ಸ್ಮಾರ್ಟ್‌ ಕಾರ್ಡ್‌ ಪಾಸುಗಳನ್ನು ಬಳಸಿಕೊಳ್ಳಬಹುದಾಗಿದೆ. ಅಲ್ಲಿಯ ವರೆಗೆ ಮಹಿಳೆಯರು ಕೇಂದ್ರ, ರಾಜ್ಯ ಸರಕಾರಗಳು ನೀಡಿರುವ ಯಾವುದೇ ದಾಖಲಾತಿಗಳನ್ನು ನೀಡುವ ಮೂಲಕ ಪ್ರಯಾಣಿಸಬಹುದಾಗಿದೆ.

Objection to free bus pass : Free travel for women in buses : KSRTC objection to government order

Comments are closed.